Breaking: ಅಚ್ಚರಿ ಮೂಡಿಸಿದ ಸಿಎಂ ಪುತ್ರ ವಿಜಯೇಂದ್ರ ದೆಹಲಿ ಭೇಟಿ
ಬೆಂಗಳೂರು, ಜೂನ್ 1: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸುದ್ದಿ ತಾರಕಕ್ಕೇರಿರುವ ಸಂದರ್ಭದಲ್ಲಿಯೇ ಸಿಎಂ ಯಡಿಯೂರಪ್ಪ ಪುತ್ರ ದೆಹಲಿ ಭೇಟಿ ಅಚ್ಚರಿ ಮೂಡಿಸಿದೆ.
Recommended Video
ರಾಜ್ಯ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚಿಗೆ ಸಚಿವ ಸಿ.ಪಿ ಯೋಗೇಶ್ವರ್ ದೆಹಲಿಗೆ ಭೇಟಿ ನೀಡಿ ಬಂದ ನಂತರ ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಗುಟ್ಟಾಗಿ ಉಳಿದಿಲ್ಲ.
ಇದೇ ವೇಳೆ ಮಂಗಳವಾರ ಬೆಳಿಗ್ಗೆ 5.30ರ ವಿಮಾನದಲ್ಲಿ ಬೆಂಗಳೂರಿನಿಂದ ತಮ್ಮ ಆಪ್ತರೊಂದಿಗೆ ದೆಹಲಿಗೆ ಪ್ರಯಾಣ ಬೆಳೆಸಿದ ಬಿ.ವೈ ವಿಜಯೇಂದ್ರ, ಬಿಜೆಪಿ ಹೈಕಮಾಂಡ್ ಭೇಟಿಯಾಗಲಿದ್ದಾರೆ ಎಂಬ ನಿರೀಕ್ಷೆ ಇದೆ.

ತಮ್ಮ ಇಲಾಖೆ ಮತ್ತು ಕ್ಷೇತ್ರದಲ್ಲಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರರ ಹಸ್ತಕ್ಷೇಪವಾಗುತ್ತಿದೆ ಎಂದು ಕೆಲವು ಸಚಿವರು ಹಾಗೂ ಶಾಸಕರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಈ ಕಾರಣಕ್ಕಾಗಿ ಹೈಕಮಾಂಡ್ ವಿಜಯೇಂದ್ರರಿಗೆ ಬುಲಾವ್ ನೀಡಿದೆ ಎಂಬ ಮಾತು ಕೇಳಿಬರುತ್ತಿದೆ.












Click it and Unblock the Notifications