ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೀವು ಭಯ ಪಡಬೇಡಿ, ನಿಮ್ಮ ಜೊತೆ ನಾವು ಇದ್ದೇವೆ!

|
Google Oneindia Kannada News

ಬೆಂಗಳೂರು, ಆ. 12: ಕಾವಲ್‌ಭೈರಸಂದ್ರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿಷಾಧ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಥಳೀಯ ಕಾಂಗ್ರೆಸ್ ಶಾಸಕರಿಗೆ ಧೈರ್ಯ ಹೇಳಿದ್ದಾರೆ.

Recommended Video

KG halli , DJ halli ಪ್ರಕರಣದ ನಂತರ BS Yediyurappa ದೂರವಾಣಿ ಕರೆ | Oneindia Kannada

ಪುಲಕೇಶಿ ನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಬೆಳಗ್ಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನಿಮ್ಮ ಜೊತೆ ನಾವು ಇದ್ದೇವೆ ಎಂದು ಧೈರ್ಯ ತುಂಬಿದ್ದಾರೆ. ನೀವು ಧೈರ್ಯದಿಂದ ಇರಿ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಗಲಭೆ ಸೃಷ್ಟಿಸಿದವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುವುದು ಎಂದಿದ್ದಾರೆ.

ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಘರ್ಷಣೆ: ಕಠಿಣ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಘರ್ಷಣೆ: ಕಠಿಣ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ಯಾವುದೇ ಕಾರಣಕ್ಕೂ ನೀವು ಭಯ ಪಡಬೇಡಿ, ನಿಮ್ಮ ಜೊತೆ ನಾವು ಇದ್ದೇವೆ. ನಿಮ್ಮ ಕ್ಷೇತ್ರದಲ್ಲಿ ಶಾಂತಿ ಕಾಪಾಡಲು ನೀವು ಜನರಲ್ಲಿ ಮನವಿ ಮಾಡಿ ಎಂದು ದೂರವಾಣಿ ಮೂಲಕ ಸಿಎಂ ಯಡಿಯೂರಪ್ಪ ಅವರು ಅಖಂಡ ಶ್ರೀನಿವಾಸಮೂರ್ತಿ ಅವರೊಂದಿಗೆ ಮಾತನಾಡಿದ್ದಾರೆ.

CM Yediyurappa telephone To Congress MLA Akhanda Srinivas Murthy in the morning

ಸಚಿವ ಅಶೋಕ್ ಭೇಟಿ: ಇಂದು ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಭೇಟಿ ಮಾಡಲಿದ್ದಾರೆ. ಭೇಟಿ ಸಂದರ್ಭದಲ್ಲಿ ನಿನ್ನೆ ನಡೆದ ಘಟನೆಯ ವಿವರ, ಕುಟುಂಬಕ್ಕೆ ರಕ್ಷಣೆ ವಿಚಾರವಾಗಿ ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ.

English summary
Speaking to Pulakeshinagara Congress MLA Akhanda Srinivas Murthy in the morning, Chief Minister Yediyurappa said: "We are with you. You gotta be brave. Strict action is being taken against the guilty. Those who created the riot will be arrested and prosecuted.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X