ಜನವರಿ 30ರಂದು ಸಿಎಂ ಯಡಿಯೂರಪ್ಪರಿಂದ ನಗರ ಪ್ರದಕ್ಷಿಣೆ
ಬೆಂಗಳೂರು,ಜನವರಿ 29: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜನವರಿ 30ರಂದು ಶನಿವಾರ ಬೆಳಗ್ಗೆ ನಗರ ಪ್ರದಕ್ಷಿಣೆ ನಡೆಸಲಿದ್ದಾರೆ.
ಬೆಂಗಳೂರು ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿಗಳನ್ನ ಪರಿಶೀಲನೆ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 11.30 ರಿಂದ ಬೆಂಗಳೂರು ಸಿಟಿ ರೌಂಡ್ಸ್ ತೆರಳಲಿದ್ದಾರೆ, 10 ಕ್ಕೂ ಹೆಚ್ಚು ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ ರಸ್ತೆಗಳನ್ನ ಪರಿಶೀಲನೆ ನಡೆಸಲಿದ್ದಾರೆ.
ರೇಸ್ ಕೋರ್ಸ್ ರಸ್ತೆ, ಚಾಲುಕ್ಯ ಸರ್ಕಲ್ - ರಾಜಭವನ ರಸ್ತೆ, ಕಬ್ಬನ್ ಪಾರ್ಕ್ ರಸ್ತೆ, ಮಲ್ಯ ರಸ್ತೆ, ರಾಜಾರಾಮ್ ಮೋಹನ ರಾಯ್ ರಸ್ತೆ ಸೇರಿದಂತೆ 10 ಕ್ಕೂ ಹೆಚ್ಚು ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲಿದ್ದಾರೆ.

ಸ್ಮಾರ್ಟ್ ಸಿಟಿ ರಸ್ತೆಗಳ ಪರಿಶೀಲನೆ ಬಳಿಕ ಬೆಂಗಳೂರು ಮಿಷನ್ 2020 ಮೇಲುಸ್ತುವಾರಿ ಸಮಿತಿ ಜೊತೆ ವಿಧಾನಸೌಧದಲ್ಲಿ ಸಭೆ ನಡೆಸಲಿದ್ದಾರೆ.
Recommended Video
ಬೆಳಗ್ಗೆ 11.30ಕ್ಕೆ ನಗರ ಪ್ರದಕ್ಷಿಣೆ ಆರಂಭವಾಗಲಿದ್ದು, ಸಂಜೆ 4 ಗಂಟೆಗೆ ಮುಗಿಯಲಿದೆ. ರೇಸ್‌ಕೋರ್ಸ್ ರಸ್ತೆ, ಚಾಲುಕ್ಯ ವೃತ್ತ, ಮಲ್ಯ ರಸ್ತೆ, ರಾಜಾರಾಮ್ ಮೋಹನ್ ರಾಯ್ ರಸ್ತೆ, ವುಡ್ ಸ್ಟ್ರೀಟ್, ರಿಚ್ಮಂಡ್ ರಸ್ತೆ ಮೂಲಕ ವಿಧಾನಸೌಧ ಪ್ರವೇಶಿಸಲಿದ್ದಾರೆ.












Click it and Unblock the Notifications