ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ; ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಏಪ್ರಿಲ್ 22: ಕೊರೊನಾ ಸೋಂಕಿನಿಂದ ಗುಣಮುಖರಾಗಿ ಗುರುವಾರ ಸಿಎಂ ಯಡಿಯೂರಪ್ಪ ಅವರು ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ. ನಂತರ ಬೆಂಗಳೂರಿನಲ್ಲಿ ಕೊರೊನಾ ನಿರ್ವಹಣೆ ಕುರಿತು ವರ್ಚುಯಲ್ ಸಭೆ ನಡೆಸಿ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಇದೇ ಸಂದರ್ಭ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ 400 ಕೋಟಿ ವೆಚ್ಚದಲ್ಲಿ ಒಂದು ಕೋಟಿ ಡೋಸ್‌ಗಳಷ್ಟು ಕೊರೊನಾ ಲಸಿಕೆ ಖರೀದಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಗೆ ನೀಡಿದ್ದಾರೆ.

ಮುಖ್ಯವಾಗಿ ನಗರದಲ್ಲಿ ಆಮ್ಲಜನಕ ಪೂರೈಕೆಯ ಕುರಿತು ಚರ್ಚೆ ನಡೆಸಿದ್ದು, ಆಕ್ಸಿಜನ್ ಪೂರೈಕೆ ಮತ್ತು ಔಷಧ ಕೊರತೆಯ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ಲಸಿಕೆಗಳ ಕೊರತೆಯೂ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಫೀವರ್ ಕ್ಲಿನಿಕ್ ಗಳನ್ನು ಬಲಪಡಿಸಿ, ಜ್ವರ, ಮತ್ತಿತರ ಲಕ್ಷಣ ಹೊಂದಿರುವವರ ಪರೀಕ್ಷೆ ಹಾಗೂ ಸೂಕ್ತ ಮಾರ್ಗದರ್ಶನ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದರಿಂದ ಅಗತ್ಯವಿರುವವರಿಗೆ ಮಾತ್ರ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಗೊಂಡಿದೆ.

ಸ್ಪಷ್ಟತೆಯಿಲ್ಲದ ಪರಿಷ್ಕೃತ ದಿಢೀರ್ ಮಾರ್ಗಸೂಚಿ: ಶೇ.90 ಲಾಕ್‌ಡೌನ್‌ನತ್ತ ರಾಜ್ಯಸ್ಪಷ್ಟತೆಯಿಲ್ಲದ ಪರಿಷ್ಕೃತ ದಿಢೀರ್ ಮಾರ್ಗಸೂಚಿ: ಶೇ.90 ಲಾಕ್‌ಡೌನ್‌ನತ್ತ ರಾಜ್ಯ

ಕೋವಿಡ್ ಸಹಾಯವಾಣಿಗಳನ್ನು ಇನ್ನಷ್ಟು ಬಲಪಡಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಹೋಮ್ ಐಸೋಲೇಷನ್ ನಲ್ಲಿರುವವರ ಚಿಕಿತ್ಸೆ, ಟೆಲಿ ಕನ್ಸಲ್ಟೇಷನ್ ಹಾಗೂ ಅವರ ಮೇಲೆ ನಿಗಾ ವಹಿಸಲು ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

CM Yediyurappa Virtual Meeting To Review Covid Situation In Bengaluru

ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಬೆಡ್ ಗಳನ್ನು ಒದಗಿಸುವುದನ್ನು ಖಾತರಿಪಡಿಸಲು ಆಯಾ ವಲಯಗಳ ಡಿಸಿಪಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಲಾಯಿತು. ನೋಡಲ್ ಅಧಿಕಾರಿಗಳು ಆಯಾ ವಲಯದ ಕೋವಿಡ್ ನಿರ್ವಹಣೆಗೆ ಸಂಪೂರ್ಣ ಜವಾಬ್ದಾರರು. ಅವರು ಎಲ್ಲ ಸಮಸ್ಯೆಗಳ ಕುರಿತೂ ಸ್ಪಂದಿಸಬೇಕು ಎಂದು ಹೇಳಿದರು.

ಆರೋಗ್ಯ ಸೇವೆಯಲ್ಲಿ ನಿರತರಾಗಿರುವ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಗೆ ಸ್ಥೈರ್ಯ ತುಂಬುವ ಅಗತ್ಯವಿದೆ ಎಂದ ಅವರು, ಕೋವಿಡ್ ನಿರ್ವಹಣೆಯಲ್ಲಿ ಸಾಧ್ಯವಿರುವಲ್ಲಿ ಸ್ವಯಂ ಸೇವಕರ ನೆರವು ಪಡೆಯಲು ತಿಳಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಆರ್. ಅಶೋಕ್, ಡಾ. ಕೆ. ಸುಧಾಕರ್, ಎಸ್. ಸುರೇಶ್ ಕುಮಾರ್, ವಿ.ಸೋಮಣ್ಣ, ಎಂ.ಟಿ. ಬಿ. ನಾಗರಾಜ್, ಎಸ್.ಟಿ.ಸೋಮಶೇಖರ್, ಕೆ. ಗೋಪಾಲಯ್ಯ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Recommended Video

Lockdown ವಿಚಾರವಾಗಿ ಸ್ಪಷ್ಟನೆ ನೀಡಿದ Dr. Sudhakar | Oneindia Kannada

English summary
CM Yediyurappa recovered from coronavirus and discharge from hospital today. He also discussed covid situation in virtual meeting. Here is important points,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X