ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ: ಇಂದು ಸರ್ವಪಕ್ಷಗಳ ಸಭೆ ಕರೆದ ಸಿಎಂ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಮಾರ್ಚ್ 29: ಕೊರೊನಾ ವೈರಸ್ ಪರಿಸ್ಥಿತಿ ಪರಾಮರ್ಶೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ. ಸಭೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರನ್ನು ಆಹ್ವಾನಿಸಲಾಗಿದೆ.

ವಿಧಾನಸೌಧದಲ್ಲಿ ಸರ್ವಪಕ್ಷ ಸಭೆಗೂ ಮುನ್ನ ಸರ್ಕಾರದ ಸಚಿವರ ಜೊತೆ ಸಿಎಂ ಬಿ.ಎಸ್ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಜೊತೆ ಚರ್ಚೆ ನಡೆಸಲಾಗಿದೆ.

Live: ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆLive: ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಇಂದು ನಡೆಯುವ ಸರ್ವಪಕ್ಷ ಸಭೆಯಲ್ಲಿ ಚರ್ಚೆ ನಡೆಸಬೇಕಾದ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಲಾಕ್ ಡೌನ್ ಆದೇಶ ನಂತರ ಸರ್ಕಾರ ಮಾಡಿರುವ ಕ್ರಮಗಳ ಬಗ್ಗೆ ಸಚಿವರಿಂದ ಸಿಎಂ ಯಡಿಯೂರಪ್ಪ ಮಾಹಿತಿ ಪಡೆದಿದ್ದಾರೆ.

CM Yediyurappa who Called An All Party Meeting Today

ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ನಾಯಕರು ಸಭೆಗೆ ಆಗಮಿಸುತ್ತಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು, ಡಾ. ಸುಧಾಕರ್, ಸುರೇಶ ಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಚಿವ ಪ್ರಿಯಾಂಕ ಖರ್ಗೆ, ಜೆಡಿಎಸ್ ನಾಯಕ ಹೆಚ್.ಡಿ ರೇವಣ್ಣ, ಪಕ್ಷೇತರ ಶಾಸಕ ಎನ್.ಮಹೇಶ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

English summary
All party meeting chaired by Chief Minister BS Yediyurappa will be held today at the Assembly to review the coronavirus situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X