ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳು-ಅಳಿಯನಿಗೂ ಕೊರೊನಾ ಸೋಂಕು

ಬೆಂಗಳೂರು, ಏಪ್ರಿಲ್ 17: ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಹಾಗೂ ಅಳಿಯನಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಶುಕ್ರವಾರ ಯಡಿಯೂರಪ್ಪ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಯಡಿಯೂರಪ್ಪ ಅವರ ಹಿರಿಯ ಮಗಳು ಪದ್ಮಾವತಿ ಅವರ ಮಗಳು ಡಾ. ಸೌಂದರ್ಯ, ಅವರ ಪತಿ ನಿರಂಜನ್ ಅವರಲ್ಲೂ ಈ ಮುನ್ನವೇ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಗುರುವಾರ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.

ಇದೀಗ ಸಿಎಂ, ಅವರ ಮೊಮ್ಮಗಳು ಹಾಗೂ ಮೊಮ್ಮಗಳ ಪತಿ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

CM Yediyurappas Grand Daughter and Son in Law Tests Positive for Covid 19

ಗುರುವಾರ ಬೆಳಗಾವಿ ಪ್ರವಾಸದಲ್ಲಿದ್ದ ಯಡಿಯೂರಪ್ಪ ಅವರಲ್ಲಿ ಮಧ್ಯಾಹ್ನದ ಹೊತ್ತಿಗೆ ಜ್ವರ, ಸುಸ್ತು ಕಾಣಿಸಿಕೊಂಡಿತ್ತು. ಅಲ್ಲಿಯೇ ವೈದ್ಯರು ಚಿಕಿತ್ಸೆ ನೀಡಿ, ವಿಶ್ರಾಂತಿ ಪಡೆದುಕೊಳ್ಳಲು ಸಲಹೆ ನೀಡಿದ್ದರು. ಶುಕ್ರವಾರ ಬೆಳಿಗ್ಗೆ ಕೂಡ ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ ಕುರಿತ ಚರ್ಚೆಗೆ ಸಿಎಂ ತುರ್ತು ಸಭೆ ನಡೆಸಿದ್ದರು. ಸಭೆ ನಡೆದ ಕೆಲವೇ ಗಂಟೆಗಳ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡನೇ ಬಾರಿ ಯಡಿಯೂರಪ್ಪ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+