• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಬಂಧನಕ್ಕೆ ರಾಜಕೀಯ ಬಣ್ಣ ಬಳಿಯುವುದು ಸಲ್ಲ

|

ಬೆಂಗಳೂರು, ನ. 05: ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿರುವುದು ಇದೀಗ ರಾಜಕೀಯ ಬಣ್ಣ ಪಡೆದುಕೊಂಡಿದೆ. ಬಿಜೆಪಿ ನಾಯಕರು ಸಿಬಿಐಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸಿ ಅದರಲ್ಲಿ ಸಫಲರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಅದಕ್ಕೆ ಬಿಜೆಪಿ ನಾಯಕರು ಇದೀಗ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ ಮುಖಂಡ ಮತ್ತು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದಕ್ಕೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ ಎಂದು ಡಿಸಿಎಂ ಡಾ.ಸಿ.ಎನ್. ಅಶ್ವಥ್‌ ನಾರಾಯಣ ಅವರು ಅಭಿಪ್ರಾಯಪಟ್ಟಿದ್ದಾರೆ.

ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ!

ವಿಕಾಸಸೌಧದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ವಿನಯ್ ಕುಲಕರ್ಣಿ ಅವರ ಮೇಲೆ ಆರೋಪವಿತ್ತು. ಆ ಕೊಲೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ- ಧಾರವಾಡದಲ್ಲಿ ಸಾಕಷ್ಟು ಹೋರಾಟಗಳು ನಡೆದಿದ್ದವು. ಆ ಹೋರಾಟಗಳಿಗೆ ಮಣಿದು ಕಾಂಗ್ರೆಸ್‌ ಸರಕಾರವೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ಇದರಲ್ಲಿ ಬಿಜೆಪಿ ಸರಕಾರದ ಪಾತ್ರವೇನಿದೆ? ಎಂದು ಪ್ರಶ್ನಿಸಿದರು.

ಸಿಬಿಐ ವಶದಲ್ಲಿ ವಿನಯ್ ಕುಲಕರ್ಣಿ: ಡಿಕೆಶಿ ಮಹತ್ವದ ಹೇಳಿಕೆ!

   BJP ಯುವ ಮೋರ್ಚಾ ಕಾರ್ಯಕರ್ತರ ಹೋರಾಟ!! | Arnab Goswami | Oneindia Kannada

   ಪ್ರತಿಸಲವೂ ಯಾರ ಮೇಲೆಯಾದರೂ ಆದಾಯ ತೆರಿಗೆ, ಇ.ಡಿ ಅಥವಾ ಸಿಬಿಐ ದಾಳಿ ನಡೆದರೆ ಇಲ್ಲವೇ ಯಾರನ್ನಾದರೂ ಬಂಧಿಸಿದರೆ ಅದೆಲ್ಲಕ್ಕೂ ರಾಜಕೀಯ ದ್ವೇಷ ಎಂದು ಬಣ್ಣಕಟ್ಟಿ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಕಾನೂನು ತನ್ನ ಕೆಲಸವನ್ನು ತಾನೇ ಮಾಡುತ್ತಿದೆ ಎಂದರು.

   English summary
   DCM Dr. C.N. Ashwath Narayan has reacted to the CBI's detention of former minister Vinay Kulkarni. He has spoken in Bangalore. Here is more information.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X