Breaking; ವೈಟ್‌ಫೀಲ್ಡ್ ಮೆಟ್ರೋ, ಪ್ರಾಯೋಗಿಕ ಸಂಚಾರಕ್ಕೆ ಸಿದ್ಧತೆ

ಬೆಂಗಳೂರು, ಅಕ್ಟೋಬರ್ 14; ಬಿಎಂಆರ್‌ಸಿಎಲ್ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ವರೆಗಿನ ನಮ್ಮ ಮೆಟ್ರೋ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ನಡೆಸಲು ಸಿದ್ಧತೆ ನಡೆಸಿದೆ. ಈ ವರ್ಷದ ಅಂತ್ಯಕ್ಕೆ ಮಾರ್ಗ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ.

ಬೈಯಪ್ಪನಹಳ್ಳಿ ಡಿಪೋದಲ್ಲಿ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ನಡುವಿನ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ನಡೆಸಲು ಬೋಗಿಗಳನ್ನು ಲೋಡ್ ಮಾಡಲಾಗಿದೆ. ಶುಕ್ರವಾರ ಬೋಗಿಗಳು ಮೆಟ್ರೋ ನಿಲ್ದಾಣ ತಲುಪಲಿವೆ.

Coaches Loaded For Whitefield And Byappanahalli Namma Metro Train Run

ಬಿಎಂಆರ್‌ಸಿಎಲ್ ಅಕ್ಟೋಬರ್ 25ರಿಂದ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ನಡುವಿನ 15.25 ಕಿ. ಮೀ. ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಆರಂಭಿಸಲಿದೆ. 2017ರಲ್ಲಿ ಕೈಗೆತ್ತಿಕೊಂಡಿದ್ದ ಈ ಯೋಜನೆಯನ್ನು 2020ರಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿತ್ತು.

ಆದರೆ ಭೂಸ್ವಾಧೀನ ವಿವಾದ ಕಾಮಗಾರಿಗೆ ದೊಡ್ಡ ಅಡಚಣೆ ಉಂಟು ಮಾಡಿತು. ಬಿಎಂಆರ್‌ಸಿಎಲ್ ಭೂಸ್ವಾಧೀನ ಮಾಡಿಕೊಂಡು ಇಂಜಿನಿಯರಿಂಗ್ ವಿಭಾಗಕ್ಕೆ ಹಸ್ತಾಂತರ ಮಾಡುವುದು ತುಂಬಾ ವಿಳಂಬವಾಯಿತು.

13 ನಿಲ್ದಾಣಗಳು; ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ನಡುವಿನ 15.25 ಮಾರ್ಗದಲ್ಲಿ ಒಟ್ಟು 13 ನಿಲ್ದಾಣಗಳಿವೆ. ವೈಟ್‌ಫೀಲ್ಡ್‌, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು, ಅಗ್ರಹಾರ, ಸಾದರಮಂಗಲ, ನಲ್ಲೂರ ಹಳ್ಳಿ, ಕುಂದಲಹಳ್ಳಿ, ಸೀತಾರಾಮಪಾಳ್ಯ, ಹೂಡಿ ಜಂಕ್ಷನ್, ಗರುಡಾಚಾರ್ ಪಾಳ್ಯ, ಮಹದೇವಪುರ, ಕೃಷ್ಣರಾಜಪುರ, ಬೆನ್ನಿಗಾನಹಳ್ಳಿ ನಿಲ್ದಾಣಗಳು ಈ ಮಾರ್ಗದಲ್ಲಿವೆ.

ಬಿಎಂಆರ್‌ಸಿಎಲ್ ಬಳಿ ಪ್ರಾಯೋಗಿಕ ಸಂಚಾರ ನಡೆಸಲು ಅಗತ್ಯವಿರುವ ಬೋಗಿಗಳು ಈಗ ಇವೆ. ಗುರುವಾರ ಬೈಯಪ್ಪನಹಳ್ಳಿ ಡಿಪೋದಿಂದ ಅವುಗಳನ್ನು ಕಾಡುಗೋಡಿಗೆ ತರಲಾಗಿದೆ. ಶುಕ್ರವಾರ ಬೆಳಗ್ಗೆ ಅವುಗಳನ್ನು ಅನ್‌ಲೋಡ್ ಮಾಡಲಾಗುತ್ತದೆ.

ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಪೂರ್ಣಗೊಳಿಸಿದ ಬಳಿಕ ಬಿಎಂಆರ್‌ಸಿಎಲ್ ರೈಲ್ವೆ ಸುರಕ್ಷತಾ ಆಯುಕ್ತರಿಗೆ ಪರಿಶೀಲನೆಗಾಗಿ ಆಹ್ವಾನ ನೀಡಲಿದೆ. ಆಯುಕ್ತರು ಪರಿಶೀಲನೆ ನಡೆಸಿ ಒಪ್ಪಿಗೆ ನೀಡಿದ ಬಳಿಕ ವಾಣಿಜ್ಯ ಸಂಚಾರ ಆರಂಭವಾಗಲಿದೆ.

ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ಮೆಟ್ರೋ ಮಾರ್ಗ ಸಂಚಾರಕ್ಕೆ ಮುಕ್ತವಾದರೆ ಗ್ರಾಮೀಣ ಪ್ರದೇಶದಿಂದ ಬೆಂಗಳೂರು ನಗರಕ್ಕೆ ಆಗಮಿಸುವವರು, ಐಟಿ ಉದ್ಯೋಗಿಗಳಿಗೆ ಬಹಳ ಅನುಕೂಲವಾಗುವ ನಿರೀಕ್ಷೆ ಇದೆ.

ಬಿಎಂಆರ್‌ಸಿಎಲ್ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ಮಾರ್ಗವನ್ನು 2022ರ ಡಿಸೆಂಬರ್ 22, ಬಳಿಕ ನಾಗಸಂದ್ರ-ಮಾದಾವರ (3.77 ಕಿ. ಮೀ.) ಮಾರ್ಗ, ರಾಷ್ಟ್ರೀಯ ವಿದ್ಯಾಲಯ- ಬೊಮ್ಮಸಂದ್ರ (18.82 ಕಿ. ಮೀ.) ಮಾರ್ಗವನ್ನು ಉದ್ಘಾಟಿಸುವ ಗುರಿ ಹೊಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+