ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪ ಚುನಾವಣೆ: ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಫೈನಲ್

|
Google Oneindia Kannada News

ಬೆಂಗಳೂರು, ಮೇ 14: ಬಿಬಿಎಂಪಿಯ ಎರಡು ವಾರ್ಡ್‌ಗಳಿಗೆ ಮೇ 29ರಂದು ಉಪ ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಸಗಾಯಪುರ ವಾರ್ಡ್‌ನ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ಏಳುಮಲೈ ಹಾಗೂ ಕಾವೇರಿಪುರ ವಾರ್ಡ್‌ನ ಜೆಡಿಎಸ್ ಸದಸ್ಯೆ ರಮೀಳಾ ಉಮಾಶಂಕರ್ ಸಾವಿನ ಬಳಿಕ ಸ್ಥಾನ ತೆರವಾಗಿತ್ತು.

ಬಿಬಿಎಂಪಿ ಉಪ ಚುನಾವಣೆ : ಅಖಾಡಕ್ಕಿಳಿಯಲಿದ್ದಾರೆ ಮಾರಿಮುತ್ತು ಬಿಬಿಎಂಪಿ ಉಪ ಚುನಾವಣೆ : ಅಖಾಡಕ್ಕಿಳಿಯಲಿದ್ದಾರೆ ಮಾರಿಮುತ್ತು

ಸಗಾಯಪುರ ವಾರ್ಡ್‌ನಿಂದ ಮೈತ್ರಿ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿಯಾಗಿ ಏಳುಮಲೈ ಸಹೋದರಿ ಪಳನಿಯಮ್ಮ, ಕಾವೇರಿಪುರ ಅಭ್ಯರ್ಥಿಯಾಗಿ ಸುಶೀಲಾ ಸುರೇಶ್ ಅವರಿಗೆ ಟಿಕೆಟ್ ಅಂತಿಮಗೊಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Coalition candidate finalised for BBMP by election

ಸಗಾಯಪುರ ವಾರ್ಡ್‌ನಲ್ಲಿ ಮೈತ್ರಿ ಪಕ್ಷದ ಬೆಂಬಲಿತ ಅಭಯರ್ಥಿಯಾಗಿ ಕಾಂಗ್ರೆಸ್‌ಸಿಂದ ಏಳುಮಲೈ ಸಹೋದರಿ ಪಳನಿಯಮ್ಮ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ ಕಳೆದ ಬಾರಿ ಜೆಡಿಎಸ್ ನಿಂದ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದ ಮಾರಿಮುತ್ತು ಜೆಡಿಎಸ್‌ಎಸ್‌ನಿಂದ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿದ್ದಾರೆ.

ಬಿಬಿಎಂಪಿ ಉಪ ಚುನಾವಣೆ : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕೆ ಬಿಬಿಎಂಪಿ ಉಪ ಚುನಾವಣೆ : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕೆ

ಕಾವೇರಿ ಪುರ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಪಾಲಿಕೆ ಮಾಜಿ ಸದಸ್ಯ ಚನ್ನಪ್ಪ ಪುತ್ರಿ ಸಿ ಪಲ್ಲವಿ ಸ್ಪರ್ಧಿಸಲಿದ್ದಾರೆ ಎಂದು ಬೆಂಗಳೂರು ಬಿಜೆಪಿ ಘಟಕದ ಅಧ್ಯಕ್ಷ ಸದಾಶಿವ ತಿಳಿಸಿದ್ದಾರೆ. ಸಗಾಯಪುರ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯ ಆಯ್ಕೆ ಇನ್ನು ಅಂತಿಮವಾಗಿಲ್ಲ. ಇಂದು ಸಭೆ ನಡೆಯಲಿದ್ದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

English summary
Coalition candidates finalised for BBMP By-Elections. But JDS facing infight in one place.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X