ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದು ಸಂಪುಟ ವಿಸ್ತರಣೆ, ಯಾರ್ಯಾರ ಲೆಕ್ಕಾಚಾರ ಏನೇನು ತಿಳಿಯೋ ಸಮಯ

|
Google Oneindia Kannada News

Recommended Video

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗತ್ತಾ? | Oneindia Kannada

ಬೆಂಗಳೂರು, ಜೂನ್ 14: ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ಅಂತೂ ಕಾಲ ಕೂಡಿ ಬಂದಿದೆ. ಎರಡು ದಿನಗಳ ಹಿಂದೆಯೇ ನಡೆಯಬೇಕಿದ್ದ ವಿಸ್ತರಣೆ ನಾಟಕಕಾರ ಗಿರೀಶ್ ಕಾರ್ನಾಡರ ಸಾವಿನಿಂದಾಗಿ ಮುಂದೂಡಲಾಗಿತ್ತು.

ಶುಕ್ರವಾರ ಮಧ್ಯಾಹ್ನ ರಾಜ್ಯದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ದೋಸ್ತಿ ನಾಯಕರು ಏನೇನೋ ಲೆಕ್ಕಾಚಾರದಲ್ಲಿದ್ದಾರೆ ಎನ್ನುವುದು ಇಂದು ತಿಳಿಯುತ್ತದೆ.

ಬಿಗ್ ಬ್ರೇಕಿಂಗ್ : ಕರ್ನಾಟಕ ಕಾಂಗ್ರೆಸ್‌ನಲ್ಲಿ ಮೂರು ಮಹತ್ವದ ಬದಲಾವಣೆ! ಬಿಗ್ ಬ್ರೇಕಿಂಗ್ : ಕರ್ನಾಟಕ ಕಾಂಗ್ರೆಸ್‌ನಲ್ಲಿ ಮೂರು ಮಹತ್ವದ ಬದಲಾವಣೆ!

ಶುಕ್ರವಾರ ಮಧ್ಯಾಹ್ನ 11.30 ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಕ್ಷೇತರ ಶಾಸಕರಿಬ್ಬರು ಮಂತ್ರಿಗಳಾಗುವುದು ನಿಶ್ಚಿತವಾಗಿದೆಯಾದರೂ ಕೊನೆಯ ಕ್ಷಣದಲ್ಲಿ ಜೆಡಿಎಸ್‌ ವತಿಯಿಂದ ವಿಶ್ವನಾಥ್‌ ಅವರು ಮಂತ್ರಿಯಾಗುವ ಸಾಧ್ಯತೆಗಳಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

Coalition government cabinet expansion today

ಆದರೆ ಈ ಒಂದು ಸ್ಥಾನವನ್ನು ರಾಮಲಿಂಗಾರೆಡ್ಡಿ ಅವರಿಗೆ ನೀಡಬೇಕು ಎಂಬ ಒತ್ತಡ ಹೆಚ್ಚಿದೆಯಾದರೂ ಈ ಸ್ಥಾನವನ್ನು ಭರ್ತಿ ಮಾಡಿದರೆ ಬಿ.ಸಿ ಪಾಟೀಲ್ , ಎಚ್.ಕೆ.ಪಾಟೀಲ್‌ ಸೇರಿದಂತೆ ಉಳಿದ ಹಿರಿಯ ಕಾಂಗ್ರೆಸ್ ನಾಯಕರು ಬಂಡಾಯ ಏಳಬಹುದು ಎಂಬುದು ಕಾಂಗ್ರೆಸ್‌ ಲೆಕ್ಕಾಚಾರ.

ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಸಂಪುಟದಿಂದ ಹೊರಕ್ಕೆ?ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಸಂಪುಟದಿಂದ ಹೊರಕ್ಕೆ?

ಇದೇ ವೇಳೆ ಅಲ್ಪಸಂಖ್ಯಾತ ಕೋಟಾದಡಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಸಚಿವರಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ದಿಢೀರ್ ಬದಲಾವಣೆಯಲ್ಲಿ ವಿಶ್ವನಾಥ್ ಹೆಸರು ಕೇಳಿ ಬರುತ್ತಿದ್ದು ಬಿ.ಎಂ.ಫಾರೂಕ್ ಸಚಿವರಾಗುವುದು ಸಾಧ್ಯತೆ ಕ್ಷೀಣಿಸಿದೆ ಎನ್ನಲಾಗಿದೆ.

ಕಾಂಗ್ರೆಸ್‌ನ ಅತೃಪ್ತರೇ ಸರ್ಕಾರ ಬೀಳಿಸುತ್ತಾರೆ. ಅಲ್ಲಿಯವರೆಗೆ ನಾವು ಸುಮ್ಮನಿರೋಣ ಎಂದು ಬಿಜೆಪಿಗರು ಕಾಯುತ್ತಿದ್ದಾರಂತೆ, ಜೊತೆಗೆ ಸಂಸತ್ ಅಧಿವೇಶನ ಮುಗಿಯುವವರೆಗೆ ಸುಮ್ಮನಿರಿ ಎಂದು ದೆಹಲಿಗೆ ಹೋಗಿದ್ದ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿ ಕಳುಹಿಸಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳು ತಿಳಿಸಿವೆ.

ಸಂಪುಟ ವಿಸ್ತರಣೆ : ಎರಡು ಖಾತೆಗಳಿಗೆ ಕಾಂಗ್ರೆಸ್ ಬೇಡಿಕೆ?ಸಂಪುಟ ವಿಸ್ತರಣೆ : ಎರಡು ಖಾತೆಗಳಿಗೆ ಕಾಂಗ್ರೆಸ್ ಬೇಡಿಕೆ?

ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸಲು ಮುಂದಾಗಿದ್ದಾರೆ. ಬಿಜೆಪಿಯ ಎಲ್ಲ ಶಾಸಕರು, ಪರಿಷತ್ ಸದಸ್ಯರು, ಪಾಲಿಕೆ ಸದಸ್ಯರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

English summary
Karnataka Coalition government Cabinet expansion today, which was postponed to June 12 to 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X