• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈತ್ರಿ ಸರ್ಕಾರ ಪತನಕ್ಕೆ ಇನ್ನು 24 ಗಂಟೆಗಳು ಮಾತ್ರ: ಉಮೇಶ್ ಕತ್ತಿ

|
   ಮೈತ್ರಿ ಸರ್ಕಾರ ಸದ್ಯದಲ್ಲೇ ಪತನವಾಗಲಿದೆ ಎಂದ ಬಿಜೆಪಿ ಶಾಸಕ ಉಮೇಶ್ ಕತ್ತಿ | Oneindia Kannada

   ಬೆಂಗಳೂರು, ಡಿಸೆಂಬರ್ 26: ಒಂದೇ ದಿನದಲ್ಲಿ ಮೈತ್ರಿ ಸರ್ಕಾರ ಪತನವಾಗಲಿದೆ, ಬಿಜೆಪಿ ಹೊಸ ಸರ್ಕಾರವನ್ನು ರಚಿಸಲಿದೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

   ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ಕಾಂಗ್ರೆಸ್‌ನಲ್ಲಿ 15 ಮಂದಿ ಶಾಸಕರು ಸಂಪರ್ಕದಲ್ಲಿದ್ದಾರೆ, ಯಾವುದೇ ಶಾಸಕರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ, ಇನ್ನು 24 ಗಂಟೆಗಳೊಳಗಾಗಿ ಸರ್ಕಾರ ಪತನವಾಗಲಿದೆ ಎಂದರು.

   ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ?

   ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಮ್ಮ ಆತ್ಮೀಯ ಮಿತ್ರರು. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತವನ್ನು ಬಯಸುತ್ತೇವೆ. ಅಲ್ಲದೇ ಬಿಎಸ್‍ವೈ ಹಾಗೂ ರಮೇಶ್ ಇದೂವರೆಗೂ ಯಾವುದೇ ಗುಪ್ತ ಸಭೆ ನಡೆದಿಲ್ಲ.

   ಇಂದು ನಡೆಯಲಿರುವ ಸಭೆಯಲ್ಲಿ ಕೇವಲ ಬೆಳಗಾವಿ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಆಯ್ಕೆ ವಿಚಾರವನ್ನು ಮಾತ್ರ ಚರ್ಚಿಸಲಾಗುತ್ತದೆ ಎಂದು ತಿಳಿಸಿದರು. ಅಲ್ಲದೇ ಮುಂಬರುವ ಒಂದು ವಾರದಲ್ಲೇ ಬಿಜೆಪಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸುತ್ತದೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

   ಸಂಪುಟ ವಿಸ್ತರಣೆ ವಿಳಂಬ ಆಗುವುದಿಲ್ಲ: ದೇವೇಗೌಡರ ಭರವಸೆ

   ಉಮೇಶ್‌ ಕತ್ತಿಯವರ ಮಾತನನ್ನು ತಳ್ಳಿ ಹಾಕಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ಮತನವಾಗುವುದಿಲ್ಲ, ಆ ರೀತಿ ಹೇಳಿಕೆ ನೀಡುವುದು ತಪ್ಪು, ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದ್ದಾರೆ.

   English summary
   BJP MLA Umesh katti opines that, Coalition government fall down within 24 hours.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X