• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಾಮೂಹಿಕವಾಗಿ ನಮಾಜ್ ನಿರ್ಬಂಧ : ಸಚಿವ ಪ್ರಭು ಚವ್ಹಾಣ್

|

ಬೆಂಗಳೂರು, ಏಪ್ರಿಲ್ 1: ದೆಹಲಿಯ ನಿಜಾಮುದ್ದೀನ್ ಜಮತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗದ ಸಾವಿರಾರು ಜನರು ಭಾಗವಹಿಸಿದ್ದರು. ಇಲ್ಲಿ ವಿದೇಶಿಗರು ಕೂಡ ಇದ್ದರು. ಈ ಕಾರ್ಯಕ್ರಮದಲ್ಲಿ ಭಾಗಯಾಗಿದ್ದವರಲ್ಲಿ ಅನೇಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕೆಲವರು ಸಾವನ್ನಪ್ಪಿದ್ದಾರೆ. ಈ ಘಟನೆಯಿಂದ ಮತ್ತಷ್ಟು ಆತಂಕ ಹೆಚ್ಚಾಗಿದೆ.

ಇದೀಗ, ಕರ್ನಾಟಕ ರಾಜ್ಯದಲ್ಲಿ ಸಾಮೂಹಿಕವಾಗಿ ನಮಾಜ್‌ ಮಾಡಲು ನಿರ್ಬಂಧ ಹೇರಲಾಗಿದ್ದು, ಏಪ್ರಿಲ್ 14ರವರೆಗೂ ಈ ಆದೇಶ ಅನ್ವಯವಾಗುತ್ತೆ ಎಂದು ರಾಜ್ಯ ಸರ್ಕಾರ ಸೂಚಿಸಿದೆ.

ಜಮಾತ್ ಮಸೀದಿಗೆ ಹೋಗಿದ್ದವರ ರಾಜ್ಯಾವಾರು ಅಂಕಿ-ಅಂಶ ಇಲ್ಲಿದೆ

'ಇತ್ತಿಚೇಗೆ ಮಸೀದಿಗಳಲ್ಲಿ ನಮಾಜ್ ಮಾಡುತ್ತಿರುವುದು ಮಾಧ್ಯಮಗಳ ಮೂಲಕ ಕಂಡು ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯ ವಕ್ಫ್ ಮಂಡಳಿಯ ಅಧಿಕಾರಿಗಳು ಹಾಗೂ ಕಾರ್ಯದರ್ಶಿಯವರೊಂದಿಗೆ ಚರ್ಚಿಸಿ ಕಟ್ಟುನಿಟ್ಟಾದ ಕ್ರಮಗೈಗೊಳ್ಳಲು ಸೂಚಿಸಲಾಗಿದೆ' ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಮುಸ್ಲೀಂ ಬಾಂಧವರು ದಿನಕ್ಕ 5 ಬಾರಿ ನಮಾಜ್ ಮಾಡುವ ಆಚರಣೆಯಿದ್ದು, ರಾಜ್ಯದ ಎಲ್ಲ ವಕ್ಫ್ ಸಂಸ್ಥೆಗಳ ವ್ಯವಸ್ಥಾಪನಾ ಸಮಿತಿಗಳು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ದಿನಾಂಕ 31.3.2020ರ ವರೆಗೆ ಸಾರ್ವಜನಿಕವಾಗಿ ನಮಾಜ್ ಮಾಡಲು ನಿರ್ಬಂಧಿಸಲಾಗಿತ್ತು. ಇದನ್ನೆ ಈಗ 14.04.2020ರ ವರೆಗೆ ವಿಸ್ತರಿಸಲಾಗಿದೆ.

ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಮೌಲಾನಾ ವಿರುದ್ಧ ಎಫ್ಐಆರ್

ಅಲ್ಲದೆ ಪ್ರತಿದಿನದ 5 ಹೊತ್ತಿನ ನಮಾಜನ್ನು ಯಾವುದೇ ಕಾರಣಕ್ಕೆ ಮಸೀದಿಗೆ ತೆರಳಿ ಮಾಡಬಾರದು. ಮುಂದಿನ ಆದೇಶ ಬರುವವರೆಗೆ ತಮ್ಮ ತಮ್ಮ ಮನೆಗಳಲ್ಲಿ ನಾಮಜ್ ಮಾಡಲು ತಿಳಿಸಲಾಗಿದೆ. ಯಾವುದೇ ಕಾರಣಕ್ಕೂ ನೆರೆಹೊರೆಯವರೊಂದಿಗೆ ಸೇರಿ ನಮಾಜ್ ಮಾಡಲು ಅವಕಾಶ ಇರುವುದಿಲ್ಲ. ಆದೇಶವನ್ನು ಉಲ್ಲಂಘಿಸಿ ಸಾಮೂಹಿಕವಾಗಿ ನಮಾಜ್ ಮಾಡುವುದು ಕಂಡುಬಂದಲ್ಲಿ ಆಯೋಜಕರ ವಿದುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು..

ಕೊವೀಡ್ ರಾಜ್ಯ ಸರ್ಕಾರಕ್ಕೆ ಸವಾಲಾದ ದೆಹಲಿ ಜಮಾತ್ ಧಾರ್ಮಿಕ ಸಭೆ

ವಿಶೇಷವಾಗಿ ಯುವಕರು ಅನಾವಶ್ಯಕವಾಗಿ ಓಡಾಡುವುದು, ಬೀದಿಗಳಲ್ಲಿ ಗುಂಪು ಸೇರುವುದು ಹಾಗೂ ಬೈಕ್ ಓಡಿಸುವುದನ್ನು ಸಹ ನಿಲ್ಲಿಸಬೇಕು. ಸರ್ಕಾರ ಹಾಗೂ ಸ್ಥಳಿಯ ಆಡಳಿತದಿಂದ ಕಾಲಕಾಲಕ್ಕೆ ನೀಡುವ ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಯವಾಗಿ ಪಾಲಿಸಲು ಸೂಚಿಸಲಾಗಿದೆ. ಕೊರೊನಾ ಸೋಂಕು ಅಥವಾ ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ತಕ್ಷಣಕ್ಕೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದ್ದಾರೆ.

English summary
Coronavirus Update: Karnataka Government has banned Collective Namaz till April 14th In the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X