ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಟು ಶಿವಾಜಿನಗರ ಮೆಟ್ರೋ ಸುರಂಗ ಮಾರ್ಗಕ್ಕೆ ಚಾಲನೆ
ಬೆಂಗಳೂರು, ಜುಲೈ 30: ಮೆಟ್ರೋ-2 ಹಂತದಲ್ಲಿ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಿಂದ ಮತ್ತು ಶಿವಾಜಿನಗರ ಮೆಟ್ರೋ ನಿಲ್ದಾಣಗಳ ನಡುವೆ ಸುರಂಗ ಮಾರ್ಗಕ್ಕೆ ಅಬ್ದುಲ್ ಬ್ಯಾರಿ ಹೈಸ್ಕೂಲ್ ಮೈದಾನ, ಸುಲ್ತಾನಾ ಗುಂಟಾ, ಶಿವಾಜಿನಗರದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಚಾಲನೆ ನೀಡಿದರು.
Recommended Video
ನಮ್ಮ ಮೆಟ್ರೋ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಕ್ಷಿಪ್ರಗತಿಯಲ್ಲಿ ಪ್ರಯಾಣಿಕರನ್ನು ತಮ್ಮ ಗಮ್ಯಕ್ಕೆ ತಲುಪಿಸುವ ನಿಟ್ಟಿನಲ್ಲಿ ಅತ್ಯುತ್ತಮ ಸೇವೆಯನ್ನು ಒದಗಿಸುತ್ತಿದೆ. ಮೆಟ್ರೋ ಹಂತ-2 ರ ಭಾಗವಾಗಿ ಗೊಟ್ಟಿಗೆರೆಯಿಂದ ನಾಗವಾರದವರೆಗೆ 21.40 ಕಿ.ಮೀ ಉದ್ದದ ಹೊಸ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ.
ಶಿವಾಜಿನಗರ ನಿಲ್ದಾಣದಿಂದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಕಡೆಗೆ ಸುರಂಗ ಮಾರ್ಗ 855 ಮೀಟರ್ ಉದ್ದವಿದೆ. ಸುರಂಗ ಮಾರ್ಗದ ಕಾಮಗಾರಿಯನ್ನು ಲಾರ್ಸನ್ ಮತ್ತು ಟ್ಯೂಬ್ರೋ ಲಿಮಿಟೆಡ್ ಸಂಸ್ಥೆಯವರಿಗೆ ವಹಿಸಲಾಗಿದೆ ಎಂದು ಸಿಎಂ ಹೇಳಿದರು. ಮುಂದೆ ಓದಿ...

ಊರ್ಜಾ ಮತ್ತು ವಿಂಧ್ಯಾ ಹೆಸರು
ಸುರಂಗ ಕೊರೆಯುವ ಯಂತ್ರಗಳಿಗೆ ಊರ್ಜಾ ಮತ್ತು ವಿಂಧ್ಯಾ ಎಂದು ಹೆಸರಿಡಲಾಗಿದೆ. ಇವುಗಳ ಪುನರ್ ಜೋಡಣೆ ಕಾರ್ಯದ ನಂತರ ಸ್ಥಳ ಪರೀಕ್ಷೆ ಪೂರ್ಣಗೊಳಿಸಿ ಸುರಂಗ ಕೊರೆಯಲು ಸಿದ್ಧವಾಗಿದೆ. ಹೊಸ ಮಾರ್ಗದಲ್ಲಿ 7.5 ಕಿ.ಮೀ ಉದ್ದದ ಎಲಿವೇಟೆಡ್ ಕಾರಿಡಾರ್ ಇದ್ದು, ಆರು ಎಲಿವೇಟೆಡ್ ನಿಲ್ದಾಣಗಳನ್ನು ಹೊಂದಿದೆ. ಹಾಗೂ 12 ನೆಲದಡಿಯ ನಿಲ್ದಾಣಗಳು ಹಾಗೂ 10.37 ಕಿ.ಮೀ ಅವಳಿ ಸುರಂಗ ಮಾರ್ಗಗಳನ್ನು ಹೊಂದಿದೆ. ಶೀಘ್ರ ನಿರ್ಮಾಣದ ಸಲುವಾಗಿ ಸುರಂಗ ಮಾರ್ಗ ಕಾಮಗಾರಿಗಳನ್ನು ನಾಲ್ಕು ಪ್ಯಾಕೇಜ್‍ಗಳನ್ನಾಗಿ ವಿಂಗಡಿಸಲಾಗಿದೆ. ಮೆಟ್ರೋ ಹಂತ-2 ರ ಯೋಜನೆಯ ಒಟ್ಟಾರೆ ನಿರ್ಮಾಣದ ವೆಚ್ಚ ರೂ. 30,695 ಕೋಟಿ ರೂ.ಗಳು ಎಂದರು.

2024ರ ವೇಳೆಗೆ ಪೂರ್ಣ
ಸೆಂಟ್ರಲ್ ಸಿಲ್ಕ್‍ಬೋರ್ಡ್ ಜಂಕ್ಷನ್- ಕೆ.ಆರ್.ಪುರಂ - ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲಾಗುವುದು. ಕಾಮಗಾರಿಯ ವೆಚ್ಚ 9,934.58 ಕೋಟಿಗಳಾಗಿದ್ದು, ಯೋಜನೆಯ ವಿಸ್ತøತ ಯೋಜನಾ ವರದಿಗೆ ಕೇಂದ್ರ ಸರ್ಕಾರದ ಅನುಮೋದನೆಯನ್ನು ನಿರೀಕ್ಷಿಸಿದೆ. ಮೆಟ್ರೋ - 2ನೇ ಹಂತದ ಎಲ್ಲಾ ರೀಚ್‍ನ ಕಾಮಗಾರಿಗಳು ಪ್ರಾರಂಭವಾಗಿದ್ದು, 2024ರ ವೇಳೆಗೆ ಪೂರ್ಣಗೊಳಿಸುವ ನಿರೀಕ್ಷೆಯಿದೆ. ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು
ಜಾಗತಿಕ ಮಟ್ಟದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ನಮ್ಮ ಬೆಂಗಳೂರು ಗುರುತಿಸಿಕೊಂಡಿದೆ. ಈ ಮಾನ್ಯತೆಗೆ ತಕ್ಕಂತೆ ಮೂಲಸೌಲಭ್ಯ- ಸೇವೆಗಳನ್ನು ಒದಗಿಸುವುದು ಸರ್ಕಾರದ ಹೊಣೆಗಾರಿಕೆ. ನಿನ್ನೆಯಷ್ಟೇ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಂಗಳೂರು ಲೈಫ್ ಸೈನ್ಸಸ್ ಪಾರ್ಕ್‍ನ ಭೂಮಿ ಪೂಜಾ ಕಾರ್ಯಕ್ರಮ ನೆರವೇರಿಸಿದ್ದು, ಇದು ಬೆಂಗಳೂರನ್ನು ಜಾಗತಿಕ ಜೈವಿಕ ತಂತ್ರಜ್ಞಾನದ ಹಬ್ ಆಗಿ ಸ್ಥಾಪಿಸುವಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು.

1,500 ಕೋಟಿ ವೆಚ್ಚದ ಯೋಜನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಗ್ರಾಮಗಳ ಕುಡಿಯುವ ನೀರಿನ ಯೋಜನೆ ಮತ್ತು ಲೆಕ್ಕಕ್ಕೆ ಸಿಗದ ನೀರಿನ ನಿಯಂತ್ರಣ ಯೋಜನೆಯನ್ನು ರೂ. 1,500 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸುಗಮ ಸಂಚಾರ ವ್ಯವಸ್ಥೆಯ ಅವಿಭಾಜ್ಯ ಅಂಗವಾದ ಉತ್ತಮ ರಸ್ತೆಗಳ ಜಾಲವನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಪ್ರಮುಖ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಸ್ಮಾರ್ಟ್‍ಸಿಟಿ ಯೋಜನೆಯಡಿ 456.5 ಕೋಟಿ ರೂ. ವೆಚ್ಚದಲ್ಲಿ ನಗರದ ಹೃದಯ ಭಾಗದ ರಸ್ತೆಗಳನ್ನು ಪುನರುಜ್ಜೀವನಗೊಳಿಸಲಾಗುತ್ತಿದೆ.

36 ರಸ್ತೆಗಳನ್ನು ಸ್ಮಾರ್ಟ್ ರಸ್ತೆ
ಒಟ್ಟು 28.56 ಕಿ.ಮೀ. ಉದ್ದದ 36 ರಸ್ತೆಗಳನ್ನು ಸ್ಮಾರ್ಟ್ ರಸ್ತೆಗಳನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಸದ್ಯ ನಗರದಲ್ಲಿ ಹೆಚ್ಚುತ್ತಿರುವ ಹರಡುತ್ತಿರುವ ಕೋವಿಡ್-19 ಸೋಂಕನ್ನು ಹೆಚ್ಚು ಪರಿಣಾಮಕಾರಿಯಾಗಿ ನಿಯಂತ್ರಿಸುವುದರ ಜೊತೆಗೆ ಮೂಲಸೌಲಭ್ಯ-ಸೇವೆಗಳನ್ನು ಒದಗಿಸುವ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪಡೆದು ಪೂರ್ಣಗೊಳಿಸಲಾಗುವುದು. ಹಾಗೆಯೇ ಇಂದು ಚಾಲನೆ ನೀಡಿರುವ ಈ ಕಾಮಗಾರಿಗಳು ನಿಗದಿತ ವೇಳೆಯಲ್ಲಿ ಪೂರ್ಣಗೊಂಡು ಬೆಂಗಳೂರಿನ ವಾಹನ ದಟ್ಟಣೆಯನ್ನು ನಮ್ಮ ಮೆಟ್ರೋ ನಿವಾರಿಸಲಿ ಎಂದು ಆಶಿಸಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications