ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಎಸ್ ಐ ಆಸ್ಪತ್ರೆ ಮರಣ ಪ್ರಮಾಣ ಅಧಿಕ ಏಕೆ? ಪತ್ತೆ ಹಚ್ಚಿ

|
Google Oneindia Kannada News

ಬೆಂಗಳೂರು, ಆಗಸ್ಟ್ 9: ರಾಜಾಜಿನಗರದ ಇ.ಎಸ್. ಐ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಮರಣ ಪ್ರಮಾಣ ಹೆಚ್ಚಳವಾಗಿದ್ದು, ಇದಕ್ಕೆ ಕಾರಣ ತಿಳಿಯಲು ಸಮಿತಿ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ. ಸುಧಾಕರ್ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ರೋಗಿಗಳಿಗೆ ದೊರೆಯುತ್ತಿರುವ ಚಿಕಿತ್ಸೆ, ಇತರೆ ಸೌಲಭ್ಯಗಳನ್ನು ಪರಿಶೀಲಿಸಿದರು.

ಆಸ್ಪತ್ರೆಯಲ್ಲಿ ಈವರೆಗೆ 421 ಕೊರೊನಾ ರೋಗಿಗಳು ದಾಖಲಾಗಿದ್ದಾರೆ. ಈವರೆಗೆ 54 ಕೊರೊನಾ ರೋಗಿಗಳು ಮೃತಪಟ್ಟಿದ್ದು, ಮರಣ ಪ್ರಮಾಣ ಶೇ.12.8 ರಷ್ಟಿದೆ ಎಂದು ವೈದ್ಯಾಧಿಕಾರಿಗಳು ಸಚಿವರಿಗೆ ವಿವರಿಸಿದರು. ಈ ರೀತಿ ಮರಣ ಹೆಚ್ಚಳವಾಗಲು ಕಾರಣ ಪತ್ತೆ ಮಾಡಬೇಕು. ಇದಕ್ಕಾಗಿ ಸಮಿತಿಯೊಂದನ್ನು ರಚಿಸಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಸೂಚಿಸಿದರು.

ರಾಜ್ಯದಲ್ಲಿ ಗುಣಮುಖರ ಪ್ರಮಾಣ ಒಂದೇ ವಾರದಲ್ಲಿ ಶೇ.11 ರಷ್ಟು ಹೆಚ್ಚಳರಾಜ್ಯದಲ್ಲಿ ಗುಣಮುಖರ ಪ್ರಮಾಣ ಒಂದೇ ವಾರದಲ್ಲಿ ಶೇ.11 ರಷ್ಟು ಹೆಚ್ಚಳ

ಕ್ಯಾನ್ಸರ್ ಇರುವ ರೋಗಿಗಳು ಹೆಚ್ಚಾಗಿ ದಾಖಲಾಗುತ್ತಿದ್ದಾರೆ. ಇನ್ನೂ ಹಲವು ರೋಗಿಗಳು ತಡವಾಗಿ ಬಂದು ದಾಖಲಾಗಿದ್ದಾರೆ. ಹೀಗಾಗಿ ಮರಣ ಪ್ರಮಾಣ ಹೆಚ್ಚಿದೆ. ಮರಣಕ್ಕೆ ಸಂಬಂಧಿಸಿದಂತೆ ಆಡಿಟ್ ವರದಿ ರೂಪಿಸಲು ಆದೇಶಿಸಲಾಗಿದೆ. ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ವೈದ್ಯಾಧಿಕಾರಿಗಳು ಹೇಳಿದರು. ಇದೇ ವೇಳೆ ಸಚಿವ ಡಾ.ಕೆ.ಸುಧಾಕರ್ ಅವರು ವೀಡಿಯೋ ಮೂಲಕ ರೋಗಿಗಳೊಂದಿಗೆ ಮಾತುಕತೆ ನಡೆಸಿ ಕ್ಷೇಮ ವಿಚಾರಿಸಿದರು.

ಮಾತನಾಡಿದ ಸಚಿವ ಡಾ.ಕೆ.ಸುಧಾಕರ್

ಮಾತನಾಡಿದ ಸಚಿವ ಡಾ.ಕೆ.ಸುಧಾಕರ್

ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್,''ಇಎಸ್ ಐ ಆಸ್ಪತ್ರೆಯಲ್ಲಿ 494 ಹಾಸಿಗೆಗಳಿದ್ದು, ಸುಮಾರು 150 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಲಾಗಿದೆ. ಇಬ್ಬರು ರೋಗಿಗಳ ಸ್ಥಿತಿ ಗಂಭೀರವಾಗಿದೆ. 10 ರೋಗಿಗಳು ಐಸಿಯುನಲ್ಲಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಈ ಆಸ್ಪತ್ರೆಯಲ್ಲಿ ಮನೆಯ ಆರೈಕೆ ದೊರೆಯುತ್ತಿದೆ ಎಂದು ಅವರು ಶ್ಲಾಘಿಸಿದ್ದಾರೆ. ಪಿಜಿ ವಿದ್ಯಾರ್ಥಿಗಳು ಮತ್ತು ವೈದ್ಯರು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೇ ರೀತಿ ಮತ್ತಷ್ಟು ಆಸ್ಪತ್ರೆಗಳಿಗೆ ಭೇಟಿ ನೀಡಿ ರೋಗಿಗಳಲ್ಲಿ ವಿಶ್ವಾಸ ಮೂಡಿಸಬೇಕಿದೆ'' ಎಂದರು.

ಇಎಸ್ ಐ ನಲ್ಲಿ ಯಶಸ್ವಿಯಾಗಿ ಹೆರಿಗೆ

ಇಎಸ್ ಐ ನಲ್ಲಿ ಯಶಸ್ವಿಯಾಗಿ ಹೆರಿಗೆ

ಕೊರೊನಾ ಸೋಂಕಿತರಾಗಿದ್ದ 42 ಗರ್ಭಿಣಿಯರಿಗೆ ಇಎಸ್ ಐ ನಲ್ಲಿ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ. ಆಸ್ಪತ್ರೆಯಲ್ಲಿ ಆರ್ ಟಿಪಿಸಿಆರ್ ಲ್ಯಾಬ್ ನಿರ್ಮಿಸಿದ್ದು, ಮುಂದಿನ ವಾರದಿಂದ ಕಾರ್ಯಾರಂಭಿಸಲಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ದೇಶದ ಪ್ರಥಮ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಚಾಲನೆದೇಶದ ಪ್ರಥಮ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಚಾಲನೆ

1,500 ಹಾಸಿಗೆಗಳು ಖಾಲಿ ಇವೆ

1,500 ಹಾಸಿಗೆಗಳು ಖಾಲಿ ಇವೆ

ಕೋವಿಡ್ ಆರೈಕೆ ಕೇಂದ್ರಗಳಲ್ಲಿ 1,500 ಹಾಸಿಗೆಗಳು ಖಾಲಿ ಇವೆ. ಹಾಸಿಗೆ ಸಾಕಷ್ಟು ಲಭ್ಯವಿದೆ. ಪ್ರತಿ ಜಿಲ್ಲೆಯಲ್ಲಿ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಹಾಸಿಗೆ ಸಾಮರ್ಥ್ಯ ಹೆಚ್ಚಿಸಲಾಗಿದೆ.

ಮೋದಿ ನಿಲುವು ಬಗ್ಗೆ ಸಮೀಕ್ಷೆ ವರದಿ

ಮೋದಿ ನಿಲುವು ಬಗ್ಗೆ ಸಮೀಕ್ಷೆ ವರದಿ

ಕೋವಿಡ್ ಪಿಡುಗು ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ನಿಲುವುಗಳನ್ನು ದೇಶದ ಶೇ.91 ರಷ್ಟು ಜನರು ಒಪ್ಪಿದ್ದಾರೆ ಎಂದು ಸಮೀಕ್ಷೆಯೊಂದರಲ್ಲಿ ತಿಳಿದುಬಂದಿದೆ. ಇದು ತಪ್ಪು ಎಂದಾದಲ್ಲಿ, ಅಷ್ಟೂ ಜನರ ಭಾವನೆಗಳಿಗೆ ವಿರುದ್ಧವಾಗಿ ಹೇಳಿದಂತಾಗುತ್ತದೆ.

ಕೊವಿಡ್ ಮರಣ ದರ‌: ಮಹಾರಾಷ್ಟ್ರ, ದೆಹಲಿಗಿಂತ ರಾಜ್ಯವೇ ಉತ್ತಮಕೊವಿಡ್ ಮರಣ ದರ‌: ಮಹಾರಾಷ್ಟ್ರ, ದೆಹಲಿಗಿಂತ ರಾಜ್ಯವೇ ಉತ್ತಮ

ರೋಗಿಗಳ ಯೋಗಕ್ಷೇಮ ವಿಚಾರಿಸಿದರು

ರೋಗಿಗಳ ಯೋಗಕ್ಷೇಮ ವಿಚಾರಿಸಿದರು

ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ಅವರು ರಾಜಾಜಿನಗರದ ESI ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಮತ್ತು ಕೋವಿಡ್ ಅಲ್ಲದ ರೋಗಗಳಿಗೆ ಇಲ್ಲಿ ನೀಡಲಾಗುತ್ತಿರುವ ಚಿಕಿತ್ಸಾ ವಿಧಾನಗಳ ಪರಿವೀಕ್ಷಣೆ ನಡೆಸಿದರು. ಅಲ್ಲಿನ ರೋಗಿಗಳ ಯೋಗಕ್ಷೇಮ ವಿಚಾರಿಸಿ ಧೈರ್ಯ ತುಂಬಿದರು.

English summary
A committee will be formed to study the reasons for high mortality of Covid patients in ESI hospital in Rajajinagar, Bengaluru. Said Medical Education Minister Dr.K.Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X