KCET 2023: ವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆ ದಿನಾಂಕ ಘೋಷಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಮೇ 22, 2023 ರಂದು ನಡೆಸಲಾಗುವುದು.
ಬೆಂಗಳೂರು, ಫೆಬ್ರವರಿ. 24: ಈ ವರ್ಷದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೇ 20 ಮತ್ತು 21 ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರಕಟಿಸಿದ್ದಾರೆ. ಸಿಇಟಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಾಗಿದೆ.
ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಮೇ 22, 2023 ರಂದು ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. ಇದೇ ಮಾರ್ಚ್ 9 ರಿಂದ ಮಾರ್ಚ್ 29ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಇದಾದ ಬಳಿಕ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪಡೆಯಲು ಸಿಇಟಿ ಪರೀಕ್ಷೆ ಇರಲಿದೆ.

ದ್ವಿತೀಯ ಪಿಯುಸಿ ತೇರ್ಗಡೆಯ ನಂತರ ಎಂಜಿನಿಯರಿಂಗ್ / ವಾಸ್ತುಶಿಲ್ಪ ಕೋರ್ಸುಗಳು, ಬಿಎಸ್‌ಸಿ (ಕೃಷಿ), ಬಿ.ಎಸ್.ಸಿ (ರೇಷ್ಮೆ ಕೃಷಿ), ಬಿಎಸ್‌ಸಿ (ತೋಟಗಾರಿಕೆ), ಬಿಎಸ್‌ಸಿ (ಅರಣ್ಯ) ಬಿ.ಎಸ್.ಬಿ.ಎಸ್.ಕೆ (ಆಹಾರ ಮತ್ತು ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್‌ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ ಮತ್ತು ಟೆಕ್) ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಸೇರ;ಲು ಬಯಸುವ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಈ ಪರೀಕ್ಷೆಯನ್ನು ಬರೆಯುತ್ತಾರೆ. ಮೆರಿಟ್ ಆಧಾರದಲ್ಲಿ ಸೀಟು ಹಂಚಿಕೆಯಾಗಲಿದೆ.












Click it and Unblock the Notifications