ಕಾಮನ್‌ವೆಲ್ತ್‌ನಲ್ಲಿ ಬೆಳ್ಳಿ ಗೆದ್ದ ಅಶ್ವಿನಿ ಪೊನ್ನಪ್ಪಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಬಹುಮಾನ ಘೋಷಣೆ
ಬೆಂಗಳೂರು, ಆಗಸ್ಟ್ 09: ಬರ್ಮಿಗ್ ಹ್ಯಾಮ್‌ನಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿರುವ ಭಾರತೀಯ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಭಾರತದ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚಿನ ಪದಕ ಗೆಲ್ಲುವ ಮೂಲಕ ಪದಕಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ಪೊನ್ನಪ್ಪರಿಗೆ 15 ಲಕ್ಷ ನಗದು ಪುರಸ್ಕಾರ
ಬ್ಯಾಡ್ಮಿಂಟನ್ ಮಿಕ್ಸಡ್ ಡಬಲ್ಸ್‌ನಲ್ಲಿ ಬೆಳ್ಳಿ ಗೆದ್ದ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ ನಗದು ಪುರಸ್ಕಾರವನ್ನು ಸಚಿವ ಡಾ.ನಾರಾಯಣಗೌಡ ಘೋಷಿಸಿದ್ದಾರೆ.

ಈಗಾಗಲೇ ಕ್ರಿಕೆಟ್‌ನಲ್ಲಿ ಬೆಳ್ಳಿ ಪದಕ ವಿಜೇತೆ ರಾಜೇಶ್ವರಿ ಗಾಯಕ್ವಾಡ್ ಗೆ 15 ಲಕ್ಷ ಹಾಗೂ ವೇಟ್ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಗುರುರಾಜ ಪೂಜಾರಿಗೆ 8 ಲಕ್ಷ ನಗದು ಪುರಸ್ಕಾರ ಘೋಷಿಸಲಾಗಿದೆ. ಇವರೆಲ್ಲರಿಗೂ ಶೀಘ್ರದಲ್ಲೇ ಮುಖ್ಯಮಂತ್ರಿಗಳ ಮೂಲಕ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಇದೇ ವೇಳೆ ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ ಆಯ್ಕೆಯಾಗಿರುವ ಕ್ರೀಡಾಪಟುಗಳನ್ನು ಸತ್ಕರಿಸಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

ಅಮೃತ ಕ್ರೀಡಾ ದತ್ತು ಯೋಜನೆ ಪ್ರೋತ್ಸಾಹ
"ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಅಮೃತ ಕ್ರೀಡಾ ದತ್ತು ಯೋಜನೆ ಮೂಲಕ ಕರ್ನಾಟಕದ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದ ಇನ್ನೂ ಹೆಚ್ಚಿನ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಹೆಚ್ಚಿನ ಪದಕಗಳನ್ನು ತಂದು ಕೊಡುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯ ಹಾಗೂ ಪ್ರೋತ್ಸಾಹ ನೀಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಚಿವ ಡಾ.ನಾರಾಯಣಗೌಡ" ತಿಳಿಸಿದ್ದಾರೆ.
Recommended Video
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?











Click it and Unblock the Notifications