ದ್ವೇಷ ಭಾಷಣ, ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು, ಮಾರ್ಚ್ 21: ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ದ್ವೇಷ ಭಾಷಣ ಮಾಡಿದ ಆರೋಪ ಮೇಲೆ ಬಿಜೆಪಿ ನಾಯಕ ಮತ್ತು ದಕ್ಷಿಣ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಅಜಾನ್ ಸಮಯದಲ್ಲಿ ಜೋರಾಗಿ ಸಂಗೀತ ನುಡಿಸಿದ್ದಕ್ಕಾಗಿ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಎಂಬುವರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪವಿದೆ. ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿಯೂ 'ದ್ವೇಷ ಭಾಷಣ' ಮಾಡಿದ್ದಾರೆ ಎನ್ನುವ ಆರೋಪವಿದೆ.

ದ್ವೇಷದ ಭಾಷಣದ ವಿರುದ್ಧ ಹೋರಾಡುವ ಕಾರ್ಯಕರ್ತರು ಮತ್ತು ನಾಗರಿಕರ ಗುಂಪು 'ದ್ವೇಷದ ಭಾಷಣ ಬೇಡ' ಸಂಸ್ಥೆ ಸಲ್ಲಿಸಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ತೇಜಸ್ವಿ ಸೂರ್ಯ ಮಾಡಿದ ಭಾಷಣ "ವಾಸ್ತವವಾಗಿ ತಪ್ಪು ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಹಿಂಸಾಚಾರಕ್ಕೆ ಸ್ಪಷ್ಟ ಕರೆ" ಎಂದು ಆರೋಪಿಸಲಾಗಿದೆ.
ಚುನಾವಣಾ ಆಯೋಗ ಮತ್ತು ಕರ್ನಾಟಕ ಪೊಲೀಸರಿಗೆ 'ದ್ವೇಷದ ಭಾಷಣ ಬೇಡ' ಸಂಸ್ಥೆ ಸಲ್ಲಿಸಿದ ದೂರಿನಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ, ಕೋಮು ಸೌಹಾರ್ದತೆಗೆ ಭಂಗ ಮತ್ತು ಕಾನೂನುಬಾಹಿರ ಸಭೆ ಎಂಬ ಗಂಭೀರ ಪ್ರಕರಣಗಳನ್ನು ಆರೋಪಿಸಿದ್ದಾರೆ.

"ಇಂತಹ ಹೇಳಿಕೆಗಳು ವಾಸ್ತವಿಕವಾಗಿ ತಪ್ಪು ಮತ್ತು ಕೆರಳಿಸುವಂತಹವು ಮಾತ್ರವಲ್ಲದೆ ಮುಸ್ಲಿಂ ಸಮುದಾಯದ ವಿರುದ್ಧ ಹಿಂಸಾಚಾರಕ್ಕೆ ಸ್ಪಷ್ಟವಾದ ಕರೆಯೂ ಆಗಿದೆ. ಅವರು ಅವರನ್ನು (ಮುಸ್ಲಿಮರನ್ನು) 'ಸಮಾಜ ವಿರೋಧಿ ಅಂಶಗಳು' ಎಂದು ಕರೆದಿದ್ದಾರೆ. 'ಜಿಹಾದಿಗಳಿಗೆ' ರಾಜಕೀಯ ಬೆಂಬಲವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಾ, ನಮ್ಮ ರಾಜ್ಯದಲ್ಲಿ ಹಿಂದೂಗಳ ಮೇಲಿನ ಅಪರಾಧ ಹೆಚ್ಚಿದೆ ಎಂದಿದ್ದಾರೆ.
ತೇಜಸ್ವಿ ಸೂರ್ಯ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷವನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿದ್ದಾರೆ. ಅವರನ್ನು 'ಜಿಹಾದಿಗಳು' ಎಂದು ಕರೆದು ಚುನಾವಣೆಗೆ ಮುನ್ನ ಕೋಮು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, ಪೊಲೀಸರು ಈಗಾಗಲೇ ಕೆಲವು ಸೆಕ್ಷನ್‌ಗಳ ಅಡಿಯಲ್ಲಿ ಅದನ್ನು ದಾಖಲಿಸಲಾಗಿದೆ. ದ್ವೇಷದ ಭಾಷಣದ ಮೇಲೆ ಮತ್ತೊಂದು ದೂರು ದಾಖಲಾಗಿದೆ. ಪೊಲೀಸರು 1963 ರ ಕರ್ನಾಟಕ ಪೊಲೀಸ್ ಕಾಯಿದೆಯ ಸೆಕ್ಷನ್ 7 (1) ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗಳನ್ನು ಮಾತ್ರ ಮಾಡಬಹುದು ಮತ್ತು ಅನಧಿಕೃತ ಘೋಷಣೆ ಮತ್ತು ಪ್ರತಿಭಟನೆಯನ್ನು ಅನುಮತಿಸಲಾಗುವುದಿಲ್ಲ. ನಮಗೆ ದೂರು ಬಂದಿದೆ, ಏನು ಮಾಡಬೇಕೋ ಅದನ್ನು ಮಾಡುತ್ತೇವೆ" ಎಂದು ಹೇಳಿದ್ದಾರೆ.
ಮಾರ್ಚ್ 18 ರಂದು, ದಕ್ಷಿಣ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಟ್ವಿಟರ್‌ನಲ್ಲಿ ದ್ವೇಷ ಭಾಷಣ ಮಾಡಿದ್ದರು. ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದಿದ್ದ ಅವರು, 'ಜಿಹಾದಿ'ಗಳಿಗೆ ಲಭ್ಯವಿರುವ ರಾಜಕೀಯ ಬೆಂಬಲದಿಂದ ಕರ್ನಾಟಕದಲ್ಲಿ ಹಿಂದೂಗಳ ಮೇಲಿನ ಅಪರಾಧದ ಘಟನೆಗಳು ಹೆಚ್ಚುತ್ತಿವೆ ಎಂದು ಹೇಳಿದ್ದರು.
ಮಂಗಳವಾರ (ಮಾರ್ಚ್ 19) ನಗರ್ತಪೇಟೆಯಲ್ಲಿರುವ ಹಿಂದೂ ಅಂಗಡಿಯವನ ಮೇಲೆ ಹಲ್ಲೆ ನಡೆಸಿದ ಆರೋಪದ ವಿರುದ್ಧ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಸಂಘಟನೆಗಳ ಪ್ರತಿಭಟನೆ ನಡೆಯಿತು. ತೇಜಸ್ವಿ ಸೂರ್ಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಅವರು ಕೆಲ ಕಾಲ ಬಂಧಿಸಿ ಬಳಿ ಬಿಡುಗಡೆ ಮಾಡಲಾಯಿತು.
'ಹನುಮಾನ್ ಚಾಲೀಸಾ' ನುಡಿಸಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಅಂಗಡಿ ಮಾಲೀಕ ಮುಖೇಶ್ ಆರೋಪಿಸಿದ್ದಾರೆ. ಆದರೆ, ಪೊಲೀಸ್ ಎಫ್‌ಐಆರ್‌ನಲ್ಲಿ ಆರೋಪಿಗಳು ಜೋರಾಗಿ ಸಂಗೀತ ನುಡಿಸಿದ್ದಕ್ಕಾಗಿ ಅವರನ್ನು ಥಳಿಸಿದ್ದಾರೆ ಎಂದು ಮಾತ್ರ ಉಲ್ಲೇಖಿಸಲಾಗಿದೆ.












Click it and Unblock the Notifications