ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಡ್ತಿ, ವರ್ಗಾವಣೆಗೆ 500 ಕೋಟಿ ಲಂಚ: ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ದೂರು

|
Google Oneindia Kannada News

ಬೆಂಗಳೂರು, ಜುಲೈ 11: ಲೋಕೋಪಯೋಗಿ ಇಲಾಖೆಯಲ್ಲಿ ಸೋಮವಾರ ಸಭೆ ನಡೆಸಿ ತರಾತುರಿಯಲ್ಲಿ ಸುಮಾರು 800 ಜನ ಎಂಜಿನಿಯರ್‌ಗಳ ಬಡ್ತಿ ಹಾಗೂ ವರ್ಗಾವಣೆ ಮಾಡಿರುವ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರು ಇದಕ್ಕಾಗಿ 500 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ರೈತ ಮೋರ್ಚಾ ಸಂಘಟನೆಯ ಉಪಾಧ್ಯಕ್ಷ ಎಸ್. ಲಿಂಗಮೂರ್ತಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

'ನಾನು ರೋಡ್ ಮಿನಿಸ್ಟರ್. ರೋಡ್ ಬಗ್ಗೆ ಮಾತ್ರ ಕೇಳಿ...''ನಾನು ರೋಡ್ ಮಿನಿಸ್ಟರ್. ರೋಡ್ ಬಗ್ಗೆ ಮಾತ್ರ ಕೇಳಿ...'

ಎಚ್ ರೇವಣ್ಣ ಅವರ ಸೂಚನೆಯಂತೆ ಸೋಮವಾರ ಇಲಾಖಾ ಪದೋನ್ನತಿ ಸಮಿತಿ ಸಭೆಯನ್ನು ನಡೆಸಲಾಗಿತ್ತು. ಇದರಲ್ಲಿ 800ಕ್ಕೂ ಹೆಚ್ಚು ಎಂಜಿನಿಯರ್‌ಗಳ ಬಡ್ತಿ ಮತ್ತು ವರ್ಗಾವಣೆಗೆ ಅನುಮತಿ ನೀಡಲಾಗಿತ್ತು. ಈ ವರ್ಗಾವಣೆ ಮತ್ತು ಬಡ್ತಿ ದಂಧೆಗಾಗಿ ರೇವಣ್ಣ ಅವರು 500 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಸರ್ಕಾರದ ಬಿಕ್ಕಟ್ಟಿನ ನಡುವೆಯೇ ರಹಸ್ಯವಾಗಿ 1,500 ಕೋಟಿ ರೂ. ಬಿಲ್ ಚುಕ್ತಾ ಮಾಡಿದ ರೇವಣ್ಣಸರ್ಕಾರದ ಬಿಕ್ಕಟ್ಟಿನ ನಡುವೆಯೇ ರಹಸ್ಯವಾಗಿ 1,500 ಕೋಟಿ ರೂ. ಬಿಲ್ ಚುಕ್ತಾ ಮಾಡಿದ ರೇವಣ್ಣ

ಎಸ್‌ಸಿ ಎಸ್‌ಟಿ ಮತ್ತು ಓಬಿಸಿ ಸಮುದಾಯದ ಎಂಜಿನಿಯರ್‌ಗಳು ವರ್ಗಾವಣೆ ಮಾಡಿಸಿಕೊಳ್ಳಲು ಒಂದು ವರ್ಷದಿಂದ ಪ್ರಯತ್ನಿಸುತ್ತಿದ್ದರು. ಈ ಸಮಯದಲ್ಲಿ ಅವರಿಂದ ಹಣ ಪಡೆದು ಎಂಜಿನಿಯರ್‌ಗಳನ್ನು ಏಕಾಏಕಿ ಮನಬಂದಂತೆ ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಅಲ್ಲದೆ, ಈ ವರ್ಗಾವಣೆಯ ಆದೇಶವನ್ನು ಹಿಂಪಡೆಯಬೇಕು ಎಂದು ಎಸ್. ಲಿಂಗಮೂರ್ತಿ ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.

complaint against HD Revanna to governor on bribe allegation

ಲೋಕೋಪಯೋಗಿ ಇಲಾಖೆಯ 34 ಎಇಇ, ಇಬ್ಬರು ಎಸ್‌ಇ, 40 ಇಇ ಮತ್ತು 99 ಮಂದಿ ಜೆಇ/ಎಇಗಳನ್ನು ಕೂಡ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.

ಸರ್ಕಾರ ಉಳಿಸಲು ದೇವರ ಮೊರೆ ಹೋದ ರೇವಣ್ಣ ಸರ್ಕಾರ ಉಳಿಸಲು ದೇವರ ಮೊರೆ ಹೋದ ರೇವಣ್ಣ

ವರ್ಗಾವಣೆ ಕಡಿತದಲ್ಲಿ ಹಿಂದಿನ ದಿನಾಂಕ ನಮೂದಿಸಿ ಸಹಿ ಹಾಕಲಾಗಿದೆ. ಈ ಮೂಲಕ ಆದೇಶ ಜಾರಿಯಾಗುವಂತೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

English summary
S. Lingamurthy, deputy president of a farmer morcha organisation has given a complaint against PWD minister HD Revanna to governor accusing him of taking Rs 500 bribe for transfer and promotion of more than 800 engineers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X