ಕಾಂಗ್ರೆಸ್ ಶಾಸಕನಿಗೆ ಹಣದ ಆಮಿಷ: ಜನಾರ್ದನ ರೆಡ್ಡಿ ವಿರುದ್ಧ ದೂರು

Recommended Video

      Janardhan Reddy Audio Leaked:ಅಖಾಡಕ್ಕಿಳಿದ ಜನಾರ್ದನ ರೆಡ್ಡಿ,ಕಾಂಗ್ರೆಸ್‌ ಶಾಸಕನಿಗೆ ಗಾಳ? |Oneindia Kannada

      ಬೆಂಗಳೂರು, ಮೇ 19: ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಾಲ್ ಅವರಿಗೆ 100 ಕೋಟಿ ರೂ ಆಮಿಷವೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಗಾಲಿ ಜನಾರ್ದನ ರೆಡ್ಡಿ ವಿರುದ್ಧ ದೂರು ದಾಖಲಿಸಿದೆ.

      ದದ್ದಾಲ್ ಅವರಿಗೆ ಹಣದ ಆಮಿಷವೊಡ್ಡುತ್ತಿರುವ ಆಡಿಯೋ ಕ್ಲಿಪ್ ವೊಂದನ್ನು ಖಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿತ್ತು. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ನಂತರ ಅತಂತ್ರ ವಿಧಾನಸಭೆ ಅಸ್ತಿತ್ವದಲ್ಲಿರುವ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸಬೇಕಾದ ಒತ್ತಡದಲ್ಲಿರುವ ಬಿಜೆಪಿ ಶಾಸಕರಿಗೆ ಆಮಿಷವೊಡ್ಡುತ್ತಿದೆ ಎಂದು ಕಾಂಗ್ರೆಸ್ ದೂರಿದೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಆಡಿಯೋ ಕ್ಲಿಪ್ ನೀಡಿದೆ.

      Complaint filed against Janardhan Reddy for offering money to Raichur rural MLA

      ಇಂದು ಅಪರಾಹ್ನ 4 ಗಂಟೆಗೆ ವಿಶ್ವಾಸಮತ ಯಾಚನೆ ನಡೆಯಲಿದ್ದು, ಬಿಜೆಪಿಗೆ ಇದು ಅಗ್ನಿ ಪರೀಕ್ಷೆ ಎನ್ನಿಸಿದ್ದರೆ, ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿವೆ. ಮೇ 17 ರಂದು ಕರ್ನಾಟಕ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಬಿ ಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+