• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸುಪ್ರೀಂಕೋರ್ಟ್‌ ಆದೇಶ ಉಲ್ಲಂಘನೆ ಆರೋಪ; ಅಪ್ಪಚ್ಚು ರಂಜನ್ ವಿರುದ್ಧ ದೂರು

|

ಬೆಂಗಳೂರು, ಮೇ 14: ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಆರೋಪದಡಿ ಮಾಜಿ ಸಚಿವ, ಶಾಸಕ ಅಪ್ಪಚ್ಚು ರಂಜನ್ ಅವರ ಮೇಲೆ ದೂರು ದಾಖಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಐವರ ವಿರುದ್ಧ ದೂರು ದಾಖಲಿಸಲಾಗಿದೆ.

   Vijay Mallya ask Govt to accept repayment of loan and close the case | Oneindia Kannada

   ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ನಿವಾಸಿ ಚರಣ್ ಎಂ. ಎಂ. ಎಂಬುವರು ದೂರು ದಾಖಲಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಸವಣ್ಣ ದೇವರ ಬನ ಟ್ರಸ್ಟ್‌ನಿಂದ ಅರಣ್ಯ ಕುಶಾಲನಗರ ವಲಯ ಅರಣ್ಯಾಧಿಕಾರಿ ಕಚೇರಿಗೂ ದೂರು ಕೊಡಲಾಗಿದೆ.

   ಆದೇಶವಿಲ್ಲದೆ ಕಾವೇರಿ ನದಿ ಹೂಳು ತೆಗೆಯುವ ಕಾಮಗಾರಿಗೆ ಅನಧಿಕೃತವಾಗಿ ಚಾಲನೆ ಕೊಟ್ಟಿರುವ ಆರೋಪದಡಿ ದೂರು ಸಲ್ಲಿಸಲಾಗಿದೆ. ಆದೇಶವಿಲ್ಲದೆ ಅನಧಿಕೃತವಾಗಿ 89 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದರಿಂದಾಗಿ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿದಂತಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

   ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಮಾಜಿ ಅಧ್ಯಕ್ಷ ಎಚ್. ಎಸ್. ಅಶೋಕ್, ಗುತ್ತಿಗೆದಾರ ಪುರುಶೋತ್ತಮ್ ರೈ, ಕಾವೇರಿ ನದಿ ರಕ್ಷಣಾ ವೇದಿಕೆ ಮುಖಂಡ ಚಂದ್ರಮೋಹನ್ ಹಾಗೂ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜುಗೌಡ ಅವರುಗಳ ವಿರುದ್ಧ ದೂರು ದಾಖಲಿಸಲಾಗಿದೆ.

   English summary
   A complaint has been lodged against former minister and MLA Appassu Ranjan on charges of violating the Supreme Court order.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X