ಬಿಎಸ್ ವೈ ಮನೆಯಲ್ಲೇ ನನ್ನ ವಿರುದ್ಧ ದೂರು ಸಿದ್ಧ: ಎಚ್ ಡಿಕೆ
ಆದಾಯ ತೆರಿಗೆ ಇಲಾಖೆಯಲ್ಲಿ ತಮ್ಮ ವಿರುದ್ಧ ದಾಖಲಿಸಲಾಗಿರುವ ದೂರು ಬಿಎಸ್ ವೈ ಮನೆಯಲ್ಲೇ ತಯಾರಾಗಿದೆ. ಹಾಗಾಗಿ, ದೂರಿನ ಪ್ರತಿಯಲ್ಲಿ ದೂರುದಾರರ ವಿಳಾಸವಿಲ್ಲ ಎಂದು ಕುಮಾರ ಸ್ವಾಮಿ ಆರೋಪಿಸಿದ್ದಾರೆ.
ಬೆಂಗಳೂರು, ಮೇ 24: ತಮ್ಮ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಲಾಗಿರುವ ದೂರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದಲ್ಲೇ ಸೃಷ್ಟಿಯಾಗಿದ್ದು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರ ಸ್ವಾಮಿ ಆರೋಪಿಸಿದ್ದಾರೆ.
ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ನನ್ನ ವಿರುದ್ಧ ನೀಡಲಾದ ದೂರಿನಲ್ಲಿ ದೂರುದಾರನ ವಿಳಾಸವೇ ಇಲ್ಲ. ಇದು ನಿಯಮಗಳಿಗೆ ವಿರುದ್ಧ. ಅಲ್ಲದೆ, ಈ ದೂರು ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲೇ ಸಿದ್ಧವಾಗಿದೆ'' ಎಂದು ಆರೋಪಿಸಿದರು.['ಕುಮಾರಸ್ವಾಮಿಯನ್ನು ಸಿಎಂ ಮಾಡಿದ್ದು ದೇವೇಗೌಡರಲ್ಲ, ನಾವು']

''ಗೃಹ ಸಚಿವ ಪರಮೇಶ್ವರ್ ಅವರು ಇತ್ತೀಚೆಗೆ ಹೇಳಿಕೆಯೊಂದನ್ನು ನೀಡಿ ವೆಂಕಟೇಶ್ ಗೌಡ ಎಂಬುವರಿಂದ ಆದಾಯ ತೆರಿಗೆ ಕಚೇರಿಯಲ್ಲಿ ಕುಮಾರ ಸ್ವಾಮಿ ವಿರುದ್ಧ ದೂರು ಸಲ್ಲಿಕೆಯಾಗಿದೆ ಎಂದು ಹೇಳಿದ್ದಾರೆ. ಆದರೆ, ಆ ದೂರಿನ ಪ್ರತಿಯಲ್ಲಿ ವೆಂಕಟೇಶ್ ಗೌಡ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಎಂದಷ್ಟೇ ಇದೆ. ಆದರೆ, ದೂರುದಾರನ ವಿಳಾಸವೇ ಇಲ್ಲ. ಇದು ಹೇಗೆ ಸಾಧ್ಯ. ಇದರಿಂದ ಈ ದೂರು ಪಿತೂರಿಯ ಉದ್ದೇಶದಿಂದ ಸಲ್ಲಿಕೆಯಾಗಿದೆ ಎಂಬುದು ಖಾತ್ರಿಯಾಗುತ್ತದೆ'' ಎಂದು ಅವರು ತಿಳಿಸಿದರು.[ಜಂತಕಲ್ ಗಣಿಗಾರಿಕೆ: ಎಚ್ಡಿಕೆ ನಿರೀಕ್ಷಣಾ ಜಾಮೀನು ಅವಧಿ ವಿಸ್ತರಣೆ]
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೇ ತಮ್ಮ ಹಾಗೂ ತಮ್ಮ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಸುತ್ತಿದ್ದಾರೆಂದು ಅವರು ಆರೋಪಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications