ಕೆ. ಗೋಪಾಲಯ್ಯ ವಿರುದ್ಧ ಬಿಜೆಪಿ ಹೈಕಮಾಂಡ್‌ಗೆ ದೂರು

ಬೆಂಗಳೂರು, ನವೆಂಬರ್ 07 : ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಭಾರಿ ಪೈಪೋಟಿ ನಡೆದಿದೆ. ಅನರ್ಹ ಶಾಸಕ ಕೆ. ಗೋಪಾಲಯ್ಯಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿ ಹೈಕಮಾಂಡ್‌ಗೆ ದೂರು ನೀಡಲಾಗಿದೆ.

ಕೆ. ಗೋಪಾಲಯ್ಯಗೆ ಒಂದು ಕಡೆ ಸುಪ್ರೀಂಕೋರ್ಟ್ ತೀರ್ಪು ಏನು ಬರಲಿದೆ? ಎಂಬುದು ಚಿಂತೆಯಾಗಿದೆ. ಮತ್ತೊಂದು ಕಡೆ ಕ್ಷೇತ್ರದಲ್ಲಿನ ಬಿಜೆಪಿ ನಾಯಕರು ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದಾಗಿ ಉಪ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.

ಭಾನುವಾರ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾಗಿದ್ದ ಕೆ. ಗೋಪಾಲಯ್ಯ, "ಉಪ ಚುನಾವಣೆ ಟಿಕೆಟ್ ನನಗೆ ಅಥವ ನನ್ನ ಪತ್ನಿಗೆ ನೀಡಬೇಕು. ಕ್ಷೇತ್ರದ ಬಿಜೆಪಿ ಮುಖಂಡರು ತನ್ನ ವಿರುದ್ಧ ಸಂಚು ರೂಪಿಸುತ್ತಿದ್ದಾರೆ ಅವರನ್ನು ನಿಯಂತ್ರಿಸಬೇಕು" ಎಂದು ಮನವಿ ಮಾಡಿದ್ದರು.

ಈಗ ಕೆ. ಗೋಪಾಲಯ್ಯ ವಿರುದ್ಧ ಬಿಜೆಪಿ ಹೈಕಮಾಂಡ್‌ಗೆ ದೂರು ನೀಡಲಾಗಿದೆ. ಉಪ ಚುನಾವಣೆ ಟಿಕೆಟ್‌ ಅನ್ನು ಗೋಪಾಲಯ್ಯಗೆ ನೀಡಬಾರದು. ಅವರ ಪರವಾಗಿ ಕೆಲಸ ಮಾಡಲು ಕಾರ್ಯಕರ್ತರು ಒಪ್ಪುತ್ತಿಲ್ಲ ಎಂದು ಮನವಿ ಮಾಡಲಾಗಿದೆ.

ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಎಂ. ಶಿವರಾಜ್ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಬಿಜೆಪಿ ಟಿಕೆಟ್‌ಗಾಗಿ ಪೈಪೋಟಿ ಜೋರಾಗಿದೆ. ಜೆಡಿಎಸ್ ಮೌನಕ್ಕೆ ಶರಣಾಗಿದ್ದು, 2018ರಲ್ಲಿ ಗೆದ್ದಿದ್ದ ಕ್ಷೇತ್ರ ಉಳಿಸಿಕೊಳ್ಳುವ ಯಾವುದೇ ಉತ್ಸಾಹ ಪಕ್ಷದಲ್ಲಿ ಕಾಣಿಸುತ್ತಿಲ್ಲ.

ಜೆ. ಪಿ. ನಡ್ಡಾಗೆ ದೂರು

ಜೆ. ಪಿ. ನಡ್ಡಾಗೆ ದೂರು

ಕೆ. ಗೋಪಾಲಯ್ಯಗೆ ಬಿಜೆಪಿ ಟಿಕೆಟ್ ನೀಡಬಾರದು ಎಂದು ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಮುಖಂಡ ಎಸ್. ಹರೀಶ್ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾಗೆ ದೂರು ನೀಡಿದ್ದಾರೆ. ಕೆ. ಗೋಪಾಲಯ್ಯಗೆ ಟಿಕೆಟ್ ನೀಡಲು ಮೊದಲಿನಿಂದಲೂ ವಿರೋಧ ವ್ಯಕ್ತವಾಗುತ್ತಿದೆ.

ದೂರಿನಲ್ಲಿ ಏನಿದೆ?

ದೂರಿನಲ್ಲಿ ಏನಿದೆ?

ಕೆ. ಗೋಪಾಲಯ್ಯ ವಿರುದ್ಧ ನಾವು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಈಗ ಅವರಿಗೆ ಉಪ ಚುನಾವಣೆ ಟಿಕೆಟ್ ಕೊಟ್ಟರೆ ಹೇಗೆ? ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಗೋಪಾಲಯ್ಯ ವಿರುದ್ಧ ಕಾರ್ಯಕರ್ತರಿಗೆ ಸಿಟ್ಟಿದೆ. ಅವರ ಮೇಲೆ ಕೊಲೆ ಆರೋಪವಿದೆ, ಅವರ ಪರವಾಗಿ ಕೆಲಸ ಮಾಡಲು ಯಾರೂ ಒಪ್ಪುತ್ತಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಯಡಿಯೂರಪ್ಪ ಭೇಟಿ

ಯಡಿಯೂರಪ್ಪ ಭೇಟಿ

ಕೆ. ಗೋಪಾಲಯ್ಯ ಭಾನುವಾರ ಯಡಿಯೂರಪ್ಪ ಭೇಟಿ ಮಾಡಿ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದರು. "ಕ್ಷೇತ್ರದ ಬಿಜೆಪಿ ಮುಖಂಡರು ತನ್ನ ವಿರುದ್ಧ ಸಂಚು ರೂಪಿಸುತ್ತಿದ್ದಾರೆ. ಅವರನ್ನು ನಿಯಂತ್ರಿಸಬೇಕು. ಸುಪ್ರೀಂಕೋರ್ಟ್ ತೀರ್ಪು ಏನೇ ಬಂದರೂ ನಮ್ಮ ಕೈ ಬಿಡಬಾರದು" ಎಂದು ಮನವಿ ಮಾಡಿದ್ದರು.

ಬಿಜೆಪಿ ಟಿಕೆಟ್‌ಗೆ ಪೈಪೋಟಿ

ಬಿಜೆಪಿ ಟಿಕೆಟ್‌ಗೆ ಪೈಪೋಟಿ

ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್‌ಗೆ ಭಾರಿ ಪೈಪೋಟಿ ನಡೆಯುತ್ತಿದೆ. ಕಳೆದ ಬಾರಿ ಸೋತಿದ್ದ ನೆ. ಲ. ನರೇಂದ್ರ ಬಾಬು, ಎಸ್. ಹರೀಶ್ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ. ಯಡಿಯೂರಪ್ಪ ಅನರ್ಹ ಶಾಸಕ ಕೆ. ಗೋಪಾಲಯ್ಯ ಪರವಾಗಿದ್ದಾರೆ. ಇದರಿಂದಾಗಿ ಗೊಂದಲ ಸೃಷ್ಟಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+