Bigg Boss: ಬಿಗ್ ಬಾಸ್ ಕಾರ್ಯಕ್ರಮದ ವಿರುದ್ಧ ದೂರು ದಾಖಲು

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ 11ನೇ ಸೀಸನ್ ಕಾರ್ಯಕ್ರಮದ ವಿರುದ್ಧ ಎರಡು ದೂರು ದಾಖಲಾಗಿದೆ. ವಕೀಲೆ ರಕ್ಷಿತಾ ಸಿಂಗ್ ಅವರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ದೂರು ನೀಡಿದ್ದರೆ, ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಎನ್ನುವವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮ ಪ್ರತಿ ಆವೃತ್ತಿಯಲ್ಲಿ ಒಂದಿಲ್ಲೊಂದು ವಿವಾದಕ್ಕೆ ಕಾರಣವಾಗಿದ್ದು, ಈ ಬಾರಿ ಕೂಡ ಸ್ಪರ್ಧಿಗಳಿಗೆ ಹಿಂಸೆ ಕೊಡಲಾಗುತ್ತಿದೆ ಎನ್ನುವ ಆರೋಪದ ಮೇಲೆ ದೂರು ಕೊಡಲಾಗಿದೆ.

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎನ್ನುವ ಆರೋಪ ಮಾಡಲಾಗಿದೆ. ರಕ್ಷಿತಾ ಸಿಂಗ್ ನೀಡಿರುವ ದೂರಿನಲ್ಲಿ, ಕಿಚ್ಚ ಸುದೀಪ್ ನಡೆಸಿಕೊಡುತ್ತಿರುವ ಬಿಗ್ ಬಾಸ್ 11 ಕಾರ್ಯಕ್ರಮದಲ್ಲಿ ಸ್ವರ್ಗ ನರಕ ವಿಚಾರದ ಮೇಲೆ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸಲು ಹಕ್ಕನ್ನು ಹೊಂದಿರುವುದಿಲ್ಲ.

Complaints Filed Against Kannada Reality Show Bigg Boss 11

ಕಾರ್ಯಕ್ರಮದಲ್ಲಿ ಪುರುಷ ಮತ್ತು ಮಹಿಳೆಯರನ್ನು ಜೈಲಿನ ಮಾದರಿಯಲ್ಲಿರುವ ಬಂಧಿಖಾನೆಯಂತಹ ಕೊಠಡಿಯಲ್ಲಿ ಹತ್ತಾರು ಕ್ಯಾಮೆರಾಗಳಲ್ಲಿ ಚಿತ್ರೀಕರಣವಾಗುವಂತೆ ಅಕ್ರಮವಾಗಿ ಬಂಧನದಲ್ಲಿಡಲಾಗಿದೆ. ಸ್ಪರ್ಧಿಗಳಿಗೆ ಕೇವಲ ಗಂಜಿಯನ್ನು ಆಹಾರವನ್ನಾಗಿ ನೀಡುತ್ತಿದ್ದು, ಸಂವಿಧಾನದ ಪ್ರಕಾರ ನಾಗರಿಕರಿಗೆ ಪೌಷ್ಠಿಕ ಆಹಾರ ಕೊಡದೇ ಇರುವುದು ಅಪರಾಧವಾಗುತ್ತದೆ.

ಮಹಿಳಾ ಸ್ಪರ್ಧಿಗಳಿಗೆ ಪ್ರತ್ಯೇಕ ಶೌಚಾಲಯ, ಮಲಗಲು ವ್ಯವಸ್ಥೆ ನೀಡದೇ ಅವರಿಗೆ ಶೌಚಕ್ಕೆ ಹೋಗಲು ಬೇರೊಬ್ಬರ ಅನುಮತಿ ಪಡೆಯುವಂತಹ ಸ್ಥಿತಿ ಇದ್ದು, ಶೌಚಾಲಯ ಬಳಕೆ ಮಾಡಲು ಬಲವಂತಕ್ಕೆ ಒಳಪಡಿಸಿವುದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ಬಿಗ್‌ ಬಾಸ್ 11ರ ಕಾರ್ಯಕ್ರಮದಲ್ಲಿ ಸ್ಪರ್ಧಿಗಳ ಜೊತೆ ಕಾನೂನು ಬದ್ದವಾಗಿ ಒಪ್ಪಂದ ಮಾಡಿಕೊಂಡಿದ್ದು, ಇಂತಹ ನಿರ್ಧಾರಗಳನ್ನು ಹೇರುವುದು ಸಂವಿಧಾನದ ಪ್ರಕಾರ ಅಪರಾಧವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಾರ್ಯಕ್ರವನ್ನು ತಕ್ಷಣವೇ ನಿಲ್ಲಿಸುವಂತೆ ಪ್ರಸಾರಕರಿಗೆ ಸೂಚಿಸಲು ಮನವಿ ಮಾಡಲಾಗಿದ್ದು, ಸ್ಪರ್ಧಿಗಳಿಗೆ ಹಿಂಸೆ ಕೊಟ್ಟಿದ್ದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕೇಳಲಾಗಿದೆ.

ಮಾನವ ಹಕ್ಕುಗಳ ಆಯೋಗಕ್ಕೆ ದೂರು

ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಎಂ. ನಾಗಮಣಿ ಎನ್ನುವವರು ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ತಕ್ಷಣ ಕಾರ್ಯಕ್ರಮ ಪ್ರಸಾರ ನಿಲ್ಲಿಸಿ, ಸಂಬಂಧಪಟ್ಟ ಇಲಾಖೆಗಳಿಂದ ತನಿಖೆ ನಡೆಸಬೇಕು ಎಂದು ದೂರು ಕೊಟ್ಟಿದ್ದಾರೆ. ಈ ದಿನ.ಕಾಂ ವರದಿ ಮಾಡಿರುವ ಪ್ರಕಾರ, ಅವರು, ರಾಜ್ಯ ಮಾನವ ಹಕ್ಕುಗಳ ಆಯೋಗದ ಕಚೇರಿಯಲ್ಲಿ ದೂರು ಕೊಟ್ಟಿದ್ದು, ನಿರೂಪಕ ಕಿಚ್ಚ ಸುದೀಪ್, ಕಲರ್ಸ್ ಕನ್ನಡ ಬಿಸಿನೆಸ್ ಹೆಡ್, ವಯಾಕಾಮ್ 18 ಸಂಸ್ಥೆ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+