Bengaluru: ಗೆದ್ದಲಹಳ್ಳಿ ರೈಲ್ವೆ ವೆಂಟ್ ಕಾಮಗಾರಿಗೆ ಡೆಡ್‌ಲೈನ್, ಈ ರಸ್ತೆಗಳ ವೈಟ್ ಟಾಪಿಂಗ್ ಕೆಲಸ ಪೂರ್ಣ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ತ್ವರಿತ ಪೂರ್ಣಗೊಳಿಸುವುದು. ಪ್ರಮುಖ ಜಂಕ್ಷನ್‌ನಲ್ಲಿ ಲಿಫ್ಟ್ ವ್ಯವಸ್ಥೆ ಹಾಗೂ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಬುಧವಾರ ಜಿಬಿಎ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಗೆದ್ದಲಹಳ್ಳಿ ರೈಲ್ವೆ ವೆಂಟ್ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿ ಮುಂದಿನ ಪೂರ್ವ ಮಾನ್ಸೂನ್ ಒಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.

ಒಂದು ವೆಂಟ್‌ನ ಕಾಸ್ಟಿಂಗ್ ಕೆಲಸ ಈಗಾಗಲೇ ಪೂರ್ಣಗೊಂಡಿದೆ., ಅದನ್ನು ರೈಲ್ವೆ ಹಳಿ ಕೆಳಗಡೆ ಪುಶ್ ಮಾಡಬೇಕಿದೆ. ಈ ಸಂಬಂಧ ಕೂಡಲೇ ಪುಶ್ ಮಾಡುವ ಕೆಲಸವನ್ನು ಪ್ರಾರಂಭಿಸುವ ಜೊತೆಗೆ ಮತ್ತೊಂದು ವೆಂಟ್‌ನ ಕಾಸ್ಟಿಂಗ್ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ, ಆರ್.ಸಿ.ಸಿ ತಡೆಗೋಡೆ ಸೇರಿದಂತೆ ಸಂಪೂರ್ಣ ಕಾಮಗಾರಿಯನ್ನು 2026 ಏಪ್ರಿಲ್ ಅಂತ್ಯದೊಳಗಾಗಿ ಮುಗಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ನಾಗವಾರ ಜಂಕ್ಷನ್‌ನಲ್ಲಿ ಫ್ರೀ ಲೆಫ್ಟ್ ವ್ಯವಸ್ಥೆ
ನಾಗವಾರ ಜಂಕ್ಷನ್‌ನಲ್ಲಿ ಜಲಮಂಡಳಿಯಿಂದ ಪೈಪ್‌ಲೈನ್ ಕಾಮಗಾರಿ ಪ್ರಗತಿಯಲ್ಲಿದೆ. ಅದನ್ನು ತ್ವರಿತವಾಗಿ ಪೂರ್ಣಗೊಳಿಸಿ ರಸ್ತೆ ಅಭಿವೃದ್ಧಿಪಡಿಸಬೇಕು. ಜಂಕ್ಷನ್‌ನಿಂದ ಟ್ಯಾನರಿ ರಸ್ತೆ ಕಡೆಗೆ ಹೋಗುವ ಭಾಗದಲ್ಲಿರುವ ಕೆಲವು ಸ್ವತ್ತುಗಳನ್ನು ತೆರವುಗೊಳಿಸಿ ಫ್ರೀ ಲೆಫ್ಟ್ ವ್ಯವಸ್ಥೆ ಮಾಡಲು ಮೆಟ್ರೋ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಳ್ಳಬೇಕು. ಈ ಜಂಕ್ಷನ್‌ನಲ್ಲಿ ಮಳೆಯಾದ ಸಂದರ್ಭದಲ್ಲಿ ನೀರು ನಿಲ್ಲುವುದನ್ನು ತಪ್ಪಿಸುವ ಸಲುವಾಗಿ ಸ್ಪಾಂಜ್ ಮಾದರಿಯ ಇಂಗು ಗುಂಡಿ ನಿರ್ಮಾಣ ಮಾಡಲು ತಿಳಿಸಿದರು.
ವಿವಿಧ ಕಡೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ
ಗೆದ್ದಲಹಳ್ಳಿ ಮತ್ತು ಹೆಚ್.ಆರ್.ಬಿ.ಆರ್ ಲೇಔಟ್ ಪ್ರದೇಶಗಳಲ್ಲಿ 10-15 ಟ್ರ್ಯಾಕ್ಟರ್‌ಗಳನ್ನು ಬಳಸಿಕೊಂಡು ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ನಡೆಸಬೇಕು. ಪಾಲಿಕೆ ಸದಸದ್ಯರು ಸಮನ್ವಯದಲ್ಲಿ ಕೆಲಸ ಆಗಬೇಕು. ಹೆಣ್ಣೂರು-ಬಾಗಲೂರು ರಸ್ತೆಯಲ್ಲಿ 5 ಕಿ.ಮೀ ಉದ್ದದ ರಸ್ತೆಗೆ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ರಸ್ತೆಯ ಒಂದು ಭಾಗದಲ್ಲಿ 3.2 ಕಿ.ಮೀ ಉದ್ದದ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಕ್ಯೂರಿಂಗ್ ಮುಗಿದ ಭಾಗಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ನಿರಂತರವಾಗಿ ತಪಾಸಣೆಯನ್ನು ಹಮ್ಮಿಕೊಳ್ಳುವ ಮೂಲಕ ಕಾಮಗಾರಿ ತ್ವರಿತವಾಗಿ ಪೂರ್ಣಗೊಳ್ಳಲು ಕ್ರಮ ವಹಿಸಲಾಗಿದೆ.
ಹೊಸದಾಗಿ ಕಾಂಕ್ರೀಟ್ ಹಾಕಿರುವ ಸ್ಥಳಗಳಲ್ಲಿ ಸಾರ್ವಜನಿಕರು ಓಡಾಡಿ ಯಾವುದೇ ಹೆಜ್ಜೆ ಗುರುತುಗಳು ಬೀಳದಂತೆ ಗ್ರೀನ್ ಕ್ಲಾತ್ ಅಳವಡಿಸುವಂತೆ ಹಾಗೂ ಪಾದಚಾರಿ ಮಾರ್ಗಗಳ ಕಾಮಗಾರಿಯನ್ನೂ ಸಮಾನಾಂತರವಾಗಿ ಪೂರ್ಣಗೊಳಿಸಲು ಹೆಚ್ಚಿನ ಗಮನ ಹರಿಸಬೇಕು. ಹೆಣ್ಣೂರು-ಬಾಗಲೂರು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗದಂತೆ ಸಂಚಾರ ಪೊಲೀಸ್ ರವರೊಂದಿಗೆ ನಿರಂತರವಾಗಿ ಸಮನ್ವಯ ಮಾಡಿಕೊಂಡು ಹಂತ-ಹಂತವಾಗಿ ಭಾಗಶಃ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಆಯುಕ್ತರಿಗೆ ಮಾಹಿತಿ ನೀಡಿದರು.
5 ಕಿಮೀ ರಸ್ತೆಗೆ ವೈಟ್ ಟಾಪಿಂಗ್ ಕಾಮಗಾರಿ
2.4 ಕಿ.ಮೀ ಉದ್ದದ ನಾಗವಾರ ರಸ್ತೆ ಹಾಗೂ 2.6 ಕಿ.ಮೀ ಉದ್ದದ ಟ್ಯಾನರಿ ರಸ್ತೆ ಸೇರಿ ಒಟ್ಟು 5 ಕಿ.ಮೀ ರಸ್ತೆಗೆ ವೈಟ್ ಟಾಪಿಂಗ್ ಕಾಮಗಾರಿ ಕೆಲಸ ಅರಂಭವಾಗಲಿದೆ. ಈ ಸಂಬಂಧ, ನಾಗವಾರ ರಸ್ತೆಯ 1ಕಿ.ಮೀ ಉದ್ದದ ಭಾಗದಲ್ಲಿ ಜಲಮಂಡಳಿಯ ಪೈಪ್‌ಲೈನ್ ಕಾಮಗಾರಿ ಪೂರ್ಣಗೊಂಡಿದೆ. ಆ ರಸ್ತೆಯ ಅರ್ಧ ಭಾಗದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಸಲು ಪೊಲೀಸ್ ಇಲಾಖೆ ಕೂಡಲೇ ಅನುಮತಿ ನೀಡುವುದು ಬಾಕಿ ಇದೆ.
ಹೆಣ್ಣೂರು 80 ಅಡಿ ರಸ್ತೆ ವೈಟ್ ಟಾಪಿಂಗ್
ಹೆಣ್ಣೂರು 80 ಅಡಿ ರಸ್ತೆಯಲ್ಲಿ 2 ಕಿ.ಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪಾದಚಾರಿ ಮಾರ್ಗ ಅಭಿವೃದ್ಧಿ ಕಾರ್ಯ ಬಾಕಿಯಿದ್ದು, ಪಾದಚಾರಿ ಮಾರ್ಗದ ಜೊತೆಗೆ ಬೀದಿ ದೀಪಗಳು, ಬೊಲಾರ್ಡ್‌ಗಳು ಸೇರಿದಂತೆ ಇತರೆ ಸಂಬಂಧಿತ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹೇಳಿದರು.
ಪೋಲಿಸರ ಅನುಮತಿ ಪಡೆದು ಲೇಜರ್ ರಸ್ತೆಯಲ್ಲಿ 450 ಮೀಟರ್ ಉದ್ದದ ರಸ್ತೆಗೆ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಬೇಕು. ಈ ಸಂಬಂಧ ಕೂಡಲೇ ಅನುಮತಿ ಪಡೆದು ಕಾಮಗಾರಿ ಪ್ರಾರಂಭಿಸಲು ಸೂಚಿಸಿದರು. ಇದೇ ರಸ್ತೆಯಲ್ಲಿ ಪಾಲಿಕೆ ಜಾಗದಲ್ಲಿರುವ ಕಟ್ಟಡವನ್ನು ಮೇಲ್ದರ್ಜೆಗೇರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್‌ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications