ಬಿಬಿಎಂಪಿ ಚುನಾವಣೆ ಮುಂದೂಡುವಂತಿಲ್ಲ : ಹೈಕೋರ್ಟ್

ಬೆಂಗಳೂರು, ಮಾ. 30 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಸಕಾಲದಲ್ಲಿ ನಡೆಸಿ ಎಂದು ಕರ್ನಾಟಕ ಹೈಕೋರ್ಟ್ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ. ಏ.22ಕ್ಕೆ ಬಿಬಿಎಂಪಿಯ ಆಡಳಿತಾವಧಿ ಕೊನೆಗೊಳ್ಳಲಿದೆ.

ಬಿಜೆಪಿಯ ಬಿಬಿಎಂಪಿ ಸದಸ್ಯ­ರಾದ ಸಿ.ಕೆ.ರಾಮಮೂರ್ತಿ ಮತ್ತು ಬಿ.ಸೋಮಶೇಖರ್‌ ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸಕಾಲದಲ್ಲಿ ಚುನಾವಣೆ ನಡೆಸಿ, ಬಿಬಿಎಂಪಿ ವಿಭಜನೆ ಪ್ರಸ್ತಾಪ ಮುಂದಿಟ್ಟುಕೊಂಡು ಚುನಾವಣೆಯನ್ನು ಮುಂದೂಡಬೇಡಿ ಎಂದು ಸೋಮವಾರ ಆದೇಶ ನೀಡಿದೆ. ಹೈಕೋರ್ಟ್ ಆದೇಶದ ಅನ್ವಯ ಮೇ.30ರೊಳಗೆ ಬಿಬಿಎಂಪಿ ಚುನಾವಣೆ ನಡೆಯಬೇಕಾಗಿದೆ. [ಬಿಬಿಎಂಪಿ ವಿಭಜನೆ ಹೇಗೆ?, ಸಂಕ್ಷಿಪ್ತ ಮಾಹಿತಿ]

High Court

ಏ.22ಕ್ಕೆ ಬಿಬಿಎಂಪಿ ಸದಸ್ಯರ ಆಡಳಿತ ಅವಧಿ ಪೂರ್ಣಗೊಳ್ಳುತ್ತಿದೆ. ಆದರೆ, ರಾಜ್ಯ ಸರ್ಕಾರ ಹೊಸ ಚುನಾವಣೆಯ ಬಗ್ಗೆ ಗಂಭೀರ ಆಲೋಚನೆ ಮಾಡಿಲ್ಲ. ಬದಲಿಗೆ ಬಿಬಿಎಂಪಿ ವಿಭಜನೆ ವಿಚಾರದಲ್ಲಿ ಮಗ್ನವಾಗಿದ್ದು, ಚುನಾವಣೆಯನ್ನು ಮುಂದೂಡಲು ಪ್ರಯತ್ನ ನಡೆಸಿದೆ ಎಂದು ರಿಟ್ ಅರ್ಜಿ ಸಲ್ಲಿಕೆಯಾಗಿತ್ತು.[2015-16ಸಾಲಿನ ಬಿಬಿಎಂಪಿ ಬಜೆಟ್ ಮುಖ್ಯಂಶಗಳು]

ಸದಸ್ಯರ ಅವಧಿ ಮುಗಿಯುವ ಆರು ತಿಂಗಳ ಮುನ್ನವೇ ವಾರ್ಡ್‌ಗಳ ಪುನರ್‌ ವಿಂಗಡಣೆ ಮತ್ತು ಮೀಸಲಾತಿಗಳನ್ನು ಗುರುತಿಸಬೇಕು. ಆದರೆ, ಸರ್ಕಾರ ಈ ಯಾವುದೇ ಪ್ರಕ್ರಿಯೆಗಳನ್ನು ಕೈಗೊಳ್ಳದೇ ಚುನಾವಣೆಯನ್ನು ಮುಂದೂಡಲು ಪ್ರಯತ್ನ ನಡೆಸಿದೆ ಸಕಾಲದಲ್ಲಿ ಚುನಾವಣೆ ನಡೆಸಲು ಆದೇಶ ನೀಡಬೇಕು ಎಂದು ರಿಟ್ ಅರ್ಜಿಯಲ್ಲಿ ಕೋರಲಾಗಿತ್ತು.

ಪಾಲಿಕೆ ವಿಭಜನೆಗೆ ಸರ್ಕಾರದ ಒಪ್ಪಿಗೆ : 198 ವಾರ್ಡ್‌ಗಳನ್ನು ಹೊಂದಿರುವ ಬಿಬಿಎಂಪಿಯನ್ನು ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ಎಂದು ಮೂರು ಪಾಲಿಕೆಗಳಾಗಿ ವಿಭಜಿಸಲಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+