ಕರ್ನಾಟಕ ಚುನಾವಣೆ: ಗೊಂದಲದ ಗೂಡಾದ ವಿ.ಸೋಮಣ್ಣ ಸ್ಪರ್ಧೆ: ಸಚಿವರ ಬೆಂಬಲಿಗರಿಂದ ಬಿಜೆಪಿ ರಾಜ್ಯಾದ್ಯಕ್ಷರಿಗೆ ಎಚ್ಚರಿಕೆ
ಬೆಂಗಳೂರು, ಏಪ್ರಿಲ್ 11: ರಾಜ್ಯ ವಿಧಾನಸಭಾ ಚುನಾವಣೆ 2023 ಹತ್ತಿರವಾಗುತ್ತಿದೆ. ಇತ್ತ ಆಡಳಿತಾರೂ ಬಿಜೆಪಿಯು ಯಾರಿಗೆ ಯಾವ ಕ್ಷೇತ್ರದ ಟಕೆಟ್ ಎಂಬುದನ್ನು ಇನ್ನೂವರೆಗೆ ಹೇಳುತ್ತಿಲ್ಲ. ಈ ನಡುವೆ ಪ್ರಭಾವಿ ಸಚಿವರೊಬ್ಬರ ಬೆಂಬಲಿಗರು ಟಿಕೆಟ್ ವಿಚಾರವಾಗಿ ಪಕ್ಷದ ರಾಜ್ಯಾಧ್ಯಕ್ಷರಿಗೆ ಎಚ್ಚರಿಕೆ ನೀಡಿದ್ದಾರೆ.
ವಿರೋಧ ಪಕ್ಷದ ನಾಯಕರಾದ ಸಿದ್ದರಾಯ್ಯನವರ ವಿರುದ್ಧ ಸಾಕಷ್ಟು ಚರ್ಚೆಗಳ ನಂತರ ಕೋಲಾರದ ಸ್ಪರ್ಧೆ ನಿರ್ಧಾರ ಹಿಂದೆ ಸರಿದು ವರುಣಾ ಕ್ಷೇತ್ರವನ್ನು ಅಂತಿಮಗೊಳಿಸಿದರು. ಅವರ ವಿರುದ್ಧ ಬಿಜೆಪಿಯಿಂದ ಸೂಕ್ತ ನಾಯಕನನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದ ಬಿಜೆಪಿಯು ವಸತಿ ಸಚಿವ ವಿ.ಸೋಮಣ್ಣನವರಿಗೆ ವರುಣ ಟಿಕೆಟ್ ನೀಡಲು ನಿರ್ಧರಿಸಿತ್ತು. ಇದೀಗ ಅವರ ಬೆಂಬಲಿಗರು ಈ ರೀತಿ ಎಚ್ಚರಿಕೆ ನೀಡಿದ್ದಾರೆ.

ಸಚಿವ ವಿ.ಸೋಮಣ್ಣ ಗೋವಿಂದರಾನಗರ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿ ನಾಯಕ. ಅವರಿಗೆ ಸ್ವಕ್ಷೇತ್ರ ಬಿಟ್ಟು ವರುಣ ನೀಡಿದರೆ ಪಕ್ಷಕ್ಕೆ ಆಗುವ ನಷ್ಟದ ಕುರಿತು ಸಚಿವ ಸೋಮಣ್ಣ ಬೆಂಬಲಿಗರು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಕ್ಷೇತ್ರ ಕೈ ತಪ್ಪುವ ಕುರಿತು ಎಚ್ಚರಿಕೆಯನ್ನೂ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯ ವಿಧಾನಸಭೆ ಚುನಾವಣೆ ಸಂಬಂಧ ಬಿಜೆಪಿ ಸ್ಫರ್ಧಾಳುಗಳ ಪಟ್ಟಿ ಬಿಡುಗಡೆಗೆ ಸಿದ್ದವಾಗಿದೆ. ಈ ನಡುವೆ ಸಚಿವ ವಿ. ಸೋಮಣ್ಣ ಅವರಿಗೆ ಬೇರೆ ಕ್ಷೇತ್ರ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಬಿಜೆಪಿ ಚಿಂತನೆ ಖಂಡಿಸಿರುವ ಸಚಿವರ ಬೆಂಬಲಿಗರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪತ್ರ ಬರೆದಿದ್ದಾರೆ.
ಸಚಿವರಿಗೆ ಸ್ವಕ್ಷೇತ್ರ ಬದಲಿಸಬೇಡಿ: ಮನವಿ
ಸೋಮಣ್ಣನವರನ್ನು ಸ್ವ ಕ್ಷೇತ್ರ ಗೋವಿಂದರಾಜನಗರ ಕ್ಷೇತ್ರದಿಂದ ಬದಲಿಸದಂತೆ ಅವರು ಕೋರಿದ್ದಾರೆ. ಕ್ಷೇತ್ರ ಬದಲಿಸುವುದೇ ಆದರೆ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್ ಅನ್ನು ಅವರ ಪುತ್ರ ಅರುಣ್ ಸೋಮಣ್ಣ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಪತ್ರದಲ್ಲಿ ಬಿಜೆಪಿ ಅಧ್ಯಕ್ಷರು, ಮಾಜಿ ಕಾರ್ಪೊರೇಟರ್ಗಳು, ಮೋರ್ಚಾಗಳ ಅಧ್ಯಕ್ಷರು ಸೇರಿದಂತೆ ಹತ್ತಾರು ಕಾರ್ಯಕರ್ತರು ಪತ್ರದಲ್ಲಿ ಉಲ್ಲೇಖಿಸಿ ಮನವಿ ಮಾಡಿದ್ದಾರೆ.


ಸಚಿವ ಸೋಮಣ್ಣ ಇಲ್ಲವೇ ಅವರ ಪುತ್ರ ಅರುಣ್ ಸೋಮಣ್ಣ ಅವರು ಗೋವಿಂದರಾಜನಗರದಿಂದ ಸ್ಪರ್ಧಿಸದಿದ್ದರೆ ಕ್ಷೇತ್ರ ಕೈ ತಪ್ಪುವ ಸಾಧ್ಯತೆ ಇದೆ. ಬೇರೆಯವರನ್ನು ಅಭ್ಯರ್ಥಿ ಮಾಡಿದರೆ ಪಕ್ಷಕ್ಕೆ ನಷ್ಟವಾಗಲಿದೆ. ಅಷ್ಟೇ ಅಲ್ಲದೇ ವಿಜಯನಗರ, ರಾಜಾಜಿನಗರ, ಚಿಕ್ಕಪೇಟೆ ಮತ್ತು ಮಹಾಲಕ್ಷ್ಮೀ ಲೇಔಟ್ ಕ್ಷೇತ್ರಗಳ ಮೇಲೂ ಪರಿಣಾಮ ಇದರ ವ್ಯತಿರಿಕ್ತ ಪ್ರಭಾವ ಉಂಟಾಗಲಿದೆ.
ಗೋವಿಂದರಾಜನಗರ ಟಿಕೆಟ್ ನೀಡದಿದ್ದರೆ ಬಂಡಾಯ?
ಸೋಮಣ್ಣನವರಿಗೆ ಸ್ವಕ್ಷೇತ್ರದ ಟಿಕೆಟ್ ನೀಡದಿದ್ದರೆ ಮುಖಂಡರು ಮತ್ತು ಕಾರ್ಯಕರ್ತರು ಬಂಡಾಯ ಏಳಬಹುದು. ಈ ಬೆಳವಣಿಗೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಹಿನ್ನೆಡೆ ತರಬಹುದು ಎಂದು ಕ್ಷೇತ್ರದ ಬಿಜೆಪಿ ಅಧ್ಯಕ್ಷ ವಿಶ್ವನಾಥ್ ಗೌಡ ನೇತೃತ್ವದಲ್ಲಿ ಪತ್ರದ ಮೂಲಕ ಸಚಿವರ ಬೆಂಬಲಿಗರು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಚುನಾವಣೆಯಲ್ಲಿ ಸೋಮಣ್ಣನವರಿಗೆ ಯಾವ ಕ್ಷೇತ್ರದಿಂದ ಟಿಕೆಟ್ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಅಲ್ಲದೆ, ಅವರು ಗೋವಿಂದರಾಜನಗರ ಬಿಟ್ಟು, ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಅನುಮಾನಗಳು ಹುಟ್ಟಿದ್ದವು. ಹೈಕಮಾಂಡ್ ಕೂಡ ಚಾಮರಾಜನಗರದಲ್ಲೇ ಸೆಟಲ್ ಆಗಿ ಎಂದು ಸೋಮಣ್ಣ ಅವರಿಗೆ ಸಲಹೆ ನೀಡಿತ್ತು. ಅವರು ಅಲ್ಲಿಂದಲೇ ಈ ಬಾರಿಯ ಚುನಾವಣೆ ಎದುರಿಸುತ್ತಾರೆ ಎಂದು ಹೇಳಲಾಗಿತ್ತು.
ವರುಣಾದಿಂದ ಸ್ಪರ್ಧೆ ಬಗ್ಗೆ ಚರ್ಚೆ ಆಗಿಲ್ಲ: ಸೋಮಣ್ಣ
ಈ ಮಧ್ಯೆ ದೆಹಲಿಯಲ್ಲಿ ವಿ.ಸೋಮಣ್ಣನವರೇ ವರುಣ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಚರ್ಚೆ ಆಗಿಲ್ಲ. ಅದರಲ್ಲವು ಊಹಾಪೋಹ ಎಂದು ಸ್ಪಷ್ಟಪಡಿಸಿದ್ದರು. ಈ ನಡುವೆ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಅವರು ಸೋಮಣ್ಣನವರು ಗೋವಿಂದರಾಜನಗರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ತಿಳಿಸಿದ್ದರು. ಈ ಮೂಲಕ ಸೋಮಣ್ಣನವರ ಸ್ಪರ್ಧೆ ವಿಚಾರ ಗೊಂದಲಮಯವಾಗಿದೆ.
ಕಾಂಗ್ರೆಸ್ ನ ಸಿದ್ದರಾಮಯ್ಯ ಸ್ಪರ್ಧಿಸುವ ವರುಣಾ ಕ್ಷೇತ್ರದ ಟಿಕೆಟ್ ಸೋಮಣ್ಣ ಅವರಿಗೆ ನೀಡಲಾಗುತ್ತದೆ ಎಂದಿದ್ದರೂ ಸಹ ಬಳಿಕ ವಿರುದ್ಧ ಬಿವೈ ವಿಜಯೇಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಬಿಜೆಪಿ ಚರ್ಚಿಸಿತ್ತು. ಆದರೆ ವಿಜಯೇಂದ್ರ ಶಿಕಾರಿಪುರದಿಂದ ಕಣಕ್ಕಿಳಿಯುವ ಬಗ್ಗೆ ನಿಶ್ಚಯವಾಯಿತು. ಆದರೆ ಸೋಮಣ್ಣನವರ ಸ್ಪರ್ಧೆ ಇನ್ನೂ ಅಂತಿಮವಾಗಿಲ್ಲ. ಇಂದು ಮಂಗಳವಾರ ಇಲ್ಲ ನಾಳೆ ಬುಧವಾರ ಏಪ್ರಿಲ್ 12ರಂದು ಬಿಡುಗಡೆಗೊಳ್ಳುವ ಬಿಜೆಪಿ ಪಟ್ಟಿಯಲ್ಲಿ ಈ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications