ವೇಣುಗೋಪಾಲ್ ನೇತೃತ್ವದಲ್ಲಿ ಸಚಿವರ ಸಭೆ: ಉಸ್ತುವಾರಿಗಳ ನೇಮಕ
ಬೆಂಗಳೂರು, ಮಾರ್ಚ್ 29: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಸಂಬಂಧ ಇಂದು ಕಾಂಗ್ರೆಸ್ ಸಚಿವರ ಸಭೆ ನಡೆಯಿತು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವ 21 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರು ಮತ್ತು ಉಸ್ತುವಾರಿಗಳು, ಪ್ರಚಾರ ಉಸ್ತುವಾರಿಗಳನ್ನು ನೇಮಿಸುವ ದೀರ್ಘ ಸಭೆ ನಡೆಯಿತು.
ಮೈತ್ರಿಯಿಂದ ಕಾರ್ಯಕರ್ತರಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪ್ರತಿಯೊಂದು ಕ್ಷೇತ್ರಕ್ಕೂ ಪ್ರಚಾರ ತಂತ್ರವನ್ನು ಹೆಣೆಯುವ ಬಗ್ಗೆಯೂ ಮಾತುಕತೆ ನಡೆಯಿತು.

ರಾಹುಲ್ ಗಾಂಧಿ ಅವರು ರಾಜ್ಯದ ಯಾವ-ಯಾವ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಬೇಕು, ಎಂದು ಪ್ರಚಾರ ನಡೆಸಬೇಕು ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್, ಸಚಿವ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಪರಮೇಶ್ವರ್, ಆರ್.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್, ಜಮೀರ್ ಅಹ್ಮದ್, ಜಯಮಾಲಾ ಇನ್ನಿತರ ಸಚಿವರು ಭಾಗವಹಿಸಿದ್ದರು.












Click it and Unblock the Notifications