ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂಟಿಬಿ ನಾಗರಾಜ್ ಸೋಲಿಸಲು ಕಣಕ್ಕಿಳಿದ ಕಾಂಗ್ರೆಸ್ ನಾಯಕರು!

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 16 : ರೋಲ್ಸ್ ರಾಯ್ಸ್‌ ಮಾಲೀಕ, ಹೊಸಕೋಟೆ ಕ್ಷೇತ್ರದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಸೋಲಿಸಲು ಕಾಂಗ್ರೆಸ್ ನಾಯಕರು ತಂತ್ರ ರೂಪಿಸಿದ್ದಾರೆ. ಸೆ.21ರಂದು ಹೊಸಕೋಟೆಯಲ್ಲಿ ಬೃಹತ್ ಸಮಾವೇಶ ನಡೆಸಲಿದ್ದು, ಉಪ ಚುನಾವಣೆ ಪ್ರಚಾರಕ್ಕೆ ಚಾಲನೆ ಸಿಗಲಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಎಂಟಿಬಿ ನಾಗರಾಜ್ ಪಕ್ಷದ ನಾಯಕರ ಮನವೊಲಿಕೆ ಬಳಿಕವೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದ ನಾಯಕರು ನೀಡಿದ ದೂರಿನ ಅನ್ವಯ ಸ್ಪೀಕರ್ ರಮೇಶ್ ಕುಮಾರ್ ಶಾಸಕ ಸ್ಥಾನದಿಂದ ಎಂಟಿಬಿ ನಾಗರಾಜ್ ಅನರ್ಹಗೊಳಿಸಿದ್ದರು.

ದುಬಾರಿ ಕಾರು ಖರೀದಿಸಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್ದುಬಾರಿ ಕಾರು ಖರೀದಿಸಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್

"ನನ್ನ ಎದೆಯಲ್ಲಿ ಈಗ ಸಿದ್ದರಾಮಯ್ಯ ಇಲ್ಲ ಅವರನ್ನು ಪಕ್ಕಕ್ಕೆ ಇಟ್ಟಿದ್ದೇನೆ. ನನ್ನ ಎದೆಯಲ್ಲಿ ಕ್ಷೇತ್ರದ ಮತದಾರರು ಇದ್ದಾರೆ" ಎಂದು ಎಂಟಿಬಿ ನಾಗರಾಜ್ ಎರಡು ದಿನಗಳ ಹಿಂದೆ ಹೇಳಿದ್ದ ಮಾತಿನ ಬಗ್ಗೆ ಈಗಲೂ ಚರ್ಚೆ ನಡೆಯುತ್ತಿದೆ.

ಬ್ರೇಕಿಂಗ್ ನ್ಯೂಸ್ ಕೊಟ್ಟ ರೋಲ್ಸ್ ರಾಯ್ ಮಾಲೀಕ ಎಂಟಿಬಿ ನಾಗರಾಜ್!ಬ್ರೇಕಿಂಗ್ ನ್ಯೂಸ್ ಕೊಟ್ಟ ರೋಲ್ಸ್ ರಾಯ್ ಮಾಲೀಕ ಎಂಟಿಬಿ ನಾಗರಾಜ್!

ಉಪಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಸೋಲಿಸಲು ಕಾಂಗ್ರೆಸ್ ನಾಯಕರು ಪಣತೊಟ್ಟಿದ್ದಾರೆ. ಅದಕ್ಕಾಗಿ ಹಲವಾರು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.

ಎಂಟಿಬಿ ನಾಗರಾಜ್ ಎದೆಯಲ್ಲೀಗ ಸಿದ್ದರಾಮಯ್ಯ ಇಲ್ಲ, ಮತ್ತಿನ್ಯಾರಿದ್ದಾರೆ?ಎಂಟಿಬಿ ನಾಗರಾಜ್ ಎದೆಯಲ್ಲೀಗ ಸಿದ್ದರಾಮಯ್ಯ ಇಲ್ಲ, ಮತ್ತಿನ್ಯಾರಿದ್ದಾರೆ?

ಕೆಪಿಸಿಸಿ ಕಚೇರಿಯಲ್ಲಿ ಸಭೆ

ಕೆಪಿಸಿಸಿ ಕಚೇರಿಯಲ್ಲಿ ಸಭೆ

ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವ ಕೃಷ್ಣ ಬೈರೇಗೌಡ, ಎಚ್. ಸಿ. ಮಹದೇವಪ್ಪ, ಹೆಬ್ಬಾಳ ಶಾಸಕ ಬೈರತಿ ಸುರೇಶ್ ಹೊಸಕೋಟೆ ಕ್ಷೇತ್ರದ ಪಕ್ಷದ ನಾಯಕರು, ಕಾರ್ಯಕರ್ತರ ಸಭೆ ನಡೆಸಿದರು. ಕ್ಷೇತ್ರದ ಉಪ ಚುನಾವಣೆ ಬಗ್ಗೆ ಸಭೆಯಲ್ಲಿ ವಿವರವಾದ ಚರ್ಚೆ ನಡೆಸಲಾಯಿತು.

ಸೆಪ್ಟೆಂಬರ್ 21ರಂದು ಸಮಾವೇಶ

ಸೆಪ್ಟೆಂಬರ್ 21ರಂದು ಸಮಾವೇಶ

ಸೆಪ್ಟೆಂಬರ್ 21ರಂದು ಹೊಸಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ. 'ಶಾಸಕ ಸೇಲಾದ' ಹೆಸರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಎಂಟಿಬಿ ನಾಗರಾಜ್‌ ಸೋಲಿಗೆ ಮುನ್ನುಡಿ ಬರೆಯಲಾಗುತ್ತದೆ.

ಕೃಷ್ಣ ಬೈರೇಗೌಡ ಉಸ್ತುವಾರಿ

ಕೃಷ್ಣ ಬೈರೇಗೌಡ ಉಸ್ತುವಾರಿ

ಹೊಸಕೋಟೆ ಕ್ಷೇತ್ರದ ಉಪ ಚುನಾವಣೆ ಉಸ್ತುವಾರಿಯಾಗಿ ಕೃಷ್ಣ ಬೈರೇಗೌಡರನ್ನು ನೇಮಕ ಮಾಡಲಾಗಿದೆ. ಕ್ಷೇತ್ರದಲ್ಲಿ ಉಪ ಚುನಾವಣೆಯಲ್ಲಿ ಗೆಲ್ಲಲು ಅವರು ತಂತ್ರ ರೂಪಿಸಲಿದ್ದಾರೆ. ಪಕ್ಷಕ್ಕೆ ದ್ರೋಹ ಮಾಡಿದ ಎಂಟಿಬಿ ನಾಗರಾಜ್‌ರನ್ನು ಸೋಲಿಸಬೇಕು ಎಂದು ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದಾರೆ.

ನನ್ನ ಎದೆಯಲ್ಲಿ ಸಿದ್ದರಾಮಯ್ಯ ಇಲ್ಲ

ನನ್ನ ಎದೆಯಲ್ಲಿ ಸಿದ್ದರಾಮಯ್ಯ ಇಲ್ಲ

"ನನ್ನ ಎದೆ ಬಗೆದರೆ ಸಿದ್ದರಾಮಯ್ಯ ಕಾಣುತ್ತಾರೆ" ಎಂದು ಹೇಳಿದ್ದ ಎಂಟಿಬಿ ನಾಗರಾಜ್ ಈಗ ಉಲ್ಟಾ ಹೊಡೆದಿದ್ದಾರೆ. "ನನ್ನ ಎದೆಯಲ್ಲಿ ಈಗ ಸಿದ್ದರಾಮಯ್ಯ ಇಲ್ಲ, ಕ್ಷೇತ್ರದ ಮತದಾರರು ಇದ್ದಾರೆ. ಸಿದ್ದರಾಮಯ್ಯ ಅವರನ್ನು ಪಕ್ಕಕ್ಕೆ ಇಟ್ಟಿದ್ದೇನೆ" ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

English summary
Karnataka Congress all set to Hoskote assembly seat by election. Hoskote MLA MTB Nagaraj disqualified recently. Who is Congress candidate?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X