ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕ್ಷೇತ್ರ ಹಂಚಿಕೆ ಕುರಿತು ಇಂದು ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆ

|
Google Oneindia Kannada News

ಬೆಂಗಳೂರು, ಮಾರ್ಚ್ 4: ಲೋಕಸಭೆ ಕ್ಷೇತ್ರಗಳ ಹಂಚಿಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್-ಜೆಡಿಎಸ್ ನಾಯಕರ ಮಹತ್ವದ ಸಮನ್ವಯ ಸಮಿತಿ ಸಭೆ ನಡೆಯಲಿದೆ.
ಬೆಳಗ್ಗೆ 9.30ಕ್ಕೆ ಸಭೆ ಆರಂಭಗೊಳ್ಳಲಿದ್ದು, ಲೋಕಸಭಾ ಕ್ಷೇತ್ರಗಳ ಸ್ಥಾನ ಹಂಚಿಕೆಗೆ ಸಂಬಂಧಪಟ್ಟಂತೆ ಚರ್ಚೆಯಾಗಲಿದೆ.

ಕಾಂಗ್ರೆಸ್‌ನಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಜೆಡಿಎಸ್‍ನಿಂದ ಸಚಿವ ಎಚ್.ಡಿ.ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಪರಸ್ಪರ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಮಂಡ್ಯದಿಂದ ಸ್ಪರ್ಧೆ: ಎಲ್ಲಾ ಸುದ್ದಿಗಳಿಗೆ ತೆರೆ ಎಳೆದ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ: ಎಲ್ಲಾ ಸುದ್ದಿಗಳಿಗೆ ತೆರೆ ಎಳೆದ ನಿಖಿಲ್ ಕುಮಾರಸ್ವಾಮಿ

ಆದರೆ, ಆ ಚರ್ಚೆಯಲ್ಲಿ ಯಾವುದೇ ಅಂತಿಮ ನಿರ್ಣಯ ತೆಗೆದುಕೊಳ್ಳಲಾಗದೆ ಅಪೂರ್ಣಗೊಂಡಿದೆ.

ಚುನಾವಣಾ ಪೂರ್ವ ಮೈತ್ರಿಯ ಬಗ್ಗೆ ಸಮ್ಮಿಶ್ರ ಸರ್ಕಾರ ರಚನೆ ಸಂದರ್ಭದಲ್ಲೇ ಎರಡೂ ಪಕ್ಷದ ನಾಯಕರು ಅಧಿಕೃತವಾಗಿ ಘೋಷಣೆ ಮಾಡಿದ್ದರು.

ಆದರೆ, ಸೀಟು ಹಂಚಿಕೆಗೆ ಸಂಬಂಧಪಟ್ಟಂತೆ ಈವರೆಗೂ ಚರ್ಚೆಗಳು ನಡೆದಿರಲಿಲ್ಲ. ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಈಗ ಸೀಟು ಹಂಚಿಕೆ ಸಂಬಂಧಪಟ್ಟಂತೆ ಮಾತುಕತೆಗಳು ಆರಂಭಗೊಳ್ಳುತ್ತಿವೆ.

Congress and JDS will decide their parliament election coalition Today

ಜೆಡಿಎಸ್ ನಾಯಕರು ಕಾಂಗ್ರೆಸ್ ಹೈಕಮಾಂಡ್ ನಾಯಕರ ಜತೆ ನೇರವಾಗಿ ಚರ್ಚಿಸಿ ಸೀಟು ಹಂಚಿಕೆ ಮಾಡಿಕೊಳ್ಳಲು ಮುಂದಾಗಿದ್ದರು.

ನಾವು ಅಮೇಥಿ ಗೆದ್ದಿಲ್ಲ, ಇಲ್ಲಿಯ ಜನರ ಹೃದಯ ಗೆದ್ದಿದ್ದೇವೆ : ನರೇಂದ್ರ ಮೋದಿನಾವು ಅಮೇಥಿ ಗೆದ್ದಿಲ್ಲ, ಇಲ್ಲಿಯ ಜನರ ಹೃದಯ ಗೆದ್ದಿದ್ದೇವೆ : ನರೇಂದ್ರ ಮೋದಿ

ಆದರೆ, ಸ್ಥಳೀಯ ನಾಯಕರ ಅಭಿಪ್ರಾಯ ಕಡೆಗಣಿಸಿ ಮಾತುಕತೆ ನಡೆಸುವುದು ಸೂಕ್ತ ಅಲ್ಲ ಎಂದು ಹೈಕಮಾಂಡ್ ಅಭಿಪ್ರಾಯಪಟ್ಟಿದ್ದು, ಮೊದಲು ರಾಜ್ಯ ನಾಯಕರ ಜತೆ ಚರ್ಚಿಸುವಂತೆ ಸಲಹೆ ನೀಡಿದೆ. ಹೀಗಾಗಿ ಇಂದು ಸಮನ್ವಯ ಸಮಿತಿ ಆಯೋಜನೆಗೊಂಡಿದೆ.

ಜೆಡಿಎಸ್ ಮಂಡ್ಯ, ಮೈಸೂರು, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಹುಬ್ಬಳ್ಳಿ-ಧಾರವಾಡ, ಚಿತ್ರದುರ್ಗ, ಉಡುಪಿ, ಚಿಕ್ಕಮಗಳೂರು ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಪಟ್ಟು ಹಿಡಿದಿದೆ.

ಆದರೆ, ಈ ಕ್ಷೇತ್ರಗಳ ಪೈಕಿ ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಹಾಲಿ ಸಂಸದರಿದ್ದಾರೆ. ಹಾಲಿ ಸಂಸದರಿಗೂ ಟಿಕೆಟ್ ವಂಚಿಸಿ ಆ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಕಾಂಗ್ರೆಸ್ ಸಿದ್ಧವಿಲ್ಲ.

ಈ ನಡುವೆ ಮೈಸೂರು ಕ್ಷೇತ್ರವನ್ನು ಕಾಂಗ್ರೆಸ್‍ನಲ್ಲೇ ಉಳಿಸಿಕೊಳ್ಳಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಆ ಕ್ಷೇತ್ರಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ಚಿಂತನೆ ನಡೆಸಿದೆ.

English summary
Congress and JDS leaders will hold the final meeting to discuss the seat sharing for Parliamentary election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X