ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ದಕ್ಷಿಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್

|
Google Oneindia Kannada News

ಬೆಂಗಳೂರು, ಮಾರ್ಚ್ 24 : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಕುತೂಹಲಕ್ಕೆ ಕಾರಣವಾಗಿದೆ.

ಭಾನುವಾರ ಎಐಸಿಸಿ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್‌-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸ್ಥೂಲ ಪರಿಚಯಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸ್ಥೂಲ ಪರಿಚಯ

ಶನಿವಾರ ಕಾಂಗ್ರೆಸ್ 18 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಧಾರವಾಡ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ ಬಾಕಿ ಇತ್ತು. ಬೆಂಗಳೂರು ದಕ್ಷಿಣಕ್ಕೆ ಅಭ್ಯರ್ಥಿ ಅಂತಿಮವಾಗಿದ್ದು, ಧಾರವಾಡ ಕ್ಷೇತ್ರ ಬಾಕಿ ಇದೆ.

ಲೋಕಸಭಾ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿಲೋಕಸಭಾ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿವೆ. ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡುತ್ತಿದ್ದು, 8 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ....

ಲೋಕಸಭಾ ಚುನಾವಣೆ : ಕರ್ನಾಟಕ ಬಿಜೆಪಿ ಪಟ್ಟಿಯಲ್ಲಿ ಅಚ್ಚರಿಯೇ ಇಲ್ಲಲೋಕಸಭಾ ಚುನಾವಣೆ : ಕರ್ನಾಟಕ ಬಿಜೆಪಿ ಪಟ್ಟಿಯಲ್ಲಿ ಅಚ್ಚರಿಯೇ ಇಲ್ಲ

ಕಾಂಗ್ರೆಸ್‌ನಿಂದ ಅಭಿನಂದನೆ

ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಬಿ.ಕೆ.ಹರಿಪ್ರಸಾದ್ ಅವರಿಗೆ ಕರ್ನಾಟಕ ಕಾಂಗ್ರೆಸ್ ಅಭಿನಂದನೆ ಸಲ್ಲಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಪ್ರಗತಿಗಾಗಿ ಬಿ.ಕೆ.ಹರಿಪ್ರಸಾದ್ ಎಂದು ಹೇಳಿದೆ.

ತೀವ್ರ ಕುತೂಹಲ ಕೆರಳಿಸಿದ್ದ ಕ್ಷೇತ್ರ

ತೀವ್ರ ಕುತೂಹಲ ಕೆರಳಿಸಿದ್ದ ಕ್ಷೇತ್ರ

ಬೆಂಗಳೂರು ದಕ್ಷಿಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಮಾಜಿ ಶಾಸಕ ಪ್ರಿಯಾ ಕೃಷ್ಣ, ಶಾಸಕ ರಾಮಲಿಂಗಾ ರೆಡ್ಡಿ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರ ಹೆಸರುಗಳು ಕೇಳಿ ಬಂದಿತ್ತು. ಅಂತಿಮವಾಗಿ ಬಿ.ಕೆ.ಹರಿಪ್ರಸಾದ್ ಅವರು ಅಭ್ಯರ್ಥಿಯಾಗಿದ್ದಾರೆ.

ಅನಂತ್ ಕುಮಾರ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ

ಅನಂತ್ ಕುಮಾರ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ

ಬೆಂಗಳೂರು ದಕ್ಷಿಣ ಬಿಜೆಪಿಯ ಭದ್ರಕೋಟೆ. 1996 ರಿಂದ 2014ರ ತನಕ ಸತತವಾಗಿ ಬಿಜೆಪಿ ಅಭ್ಯರ್ಥಿ ಕ್ಷೇತ್ರದಲ್ಲಿ ಜಯಗಳಿಸುತ್ತಿದ್ದಾರೆ. ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರವಿದು.

ಬಿಜೆಪಿ ಅಭ್ಯರ್ಥಿ ಯಾರು?

ಬಿಜೆಪಿ ಅಭ್ಯರ್ಥಿ ಯಾರು?

ಬೆಂಗಳೂರು ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ. ತೇಜಸ್ವಿನಿ ಅನಂತ್ ಕುಮಾರ್ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಆದರೆ, ನಾಮಪತ್ರ ಸಲ್ಲಿಸಲು ಎರಡು ದಿನಗಳು ಬಾಕಿ ಇದೆ. ಆದರೆ, ಅಭ್ಯರ್ಥಿ ಘೋಷಣೆ ಮಾಡಿಲ್ಲ.

ಬಿ.ಕೆ.ಹರಿಪ್ರಸಾದ್

ಬಿ.ಕೆ.ಹರಿಪ್ರಸಾದ್

1999ರ ಚುನಾವಣೆಯಲ್ಲಿ ಬಿ.ಕೆ.ಹರಿಪ್ರಸಾದ್ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಅನಂತ್ ಕುಮಾರ್ ಅವರ ವಿರುದ್ಧ 65 ಸಾವಿರ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.

English summary
AICC on Sunday announced candidate for Bangalore South Lok sabha seat. AICC General Secretary and Rajya sabha member from Karnataka B.K. Hariprasad candidate for Bangalore South.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X