ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸಕೋಟೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಅಂತಿಮ?

|
Google Oneindia Kannada News

ಬೆಂಗಳೂರು, ಅಕ್ಟೋಬರ್ 02 : ಚುನಾವಣಾ ಆಯೋಗ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕ್ಷೇತ್ರ ಉಪ ಚುನಾವಣೆ ರಾಜ್ಯದ ಗಮನ ಸೆಳೆದಿದೆ. ಎಂಟಿಬಿ ನಾಗರಾಜ್ ಸೋಲಿಸಬೇಕು ಎಂದು ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಎಂಟಿಬಿ ನಾಗರಾಜ್ 2018ರ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ್ದ ಅವರನ್ನು ಸ್ಪೀಕರ್ ಅನರ್ಹಗೊಳಿಸಿದ್ದಾರೆ.

ಹೊಸಕೋಟೆ; ಹುಲಿ, ಸಿಂಹ, ಗುಳ್ಳೇನರಿ ಹೋಲಿಕೆ, ಬೈಗುಳಗಳು!ಹೊಸಕೋಟೆ; ಹುಲಿ, ಸಿಂಹ, ಗುಳ್ಳೇನರಿ ಹೋಲಿಕೆ, ಬೈಗುಳಗಳು!

"ನನ್ನ ಎದೆಯಲ್ಲಿ ಈಗ ಸಿದ್ದರಾಮಯ್ಯ ಇಲ್ಲ. ಅವರನ್ನು ಪಕ್ಕಕ್ಕೆ ಇಟ್ಟಿದ್ದೇನೆ. ನನ್ನ ಎದೆಯಲ್ಲಿ ಈಗ ಕ್ಷೇತ್ರದ ಮತದಾರರು ಇದ್ದಾರೆ" ಎಂದು ಹೇಳಿರುವ ಎಂಟಿಬಿ ನಾಗರಾಜ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿಗಳನ್ನು ನಡೆಸುತ್ತಿದ್ದಾರೆ. ಹೊಸಕೋಟೆಯಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಉಪ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ಚಾಲನೆ ನೀಡಿದೆ.

ಕಾಂಗ್ರೆಸ್ ನಾಯಕರ ಬಗ್ಗೆ ಎಂಟಿಬಿ ನಾಗರಾಜ್ ಸ್ಫೋಟಕ ಹೇಳಿಕೆ!ಕಾಂಗ್ರೆಸ್ ನಾಯಕರ ಬಗ್ಗೆ ಎಂಟಿಬಿ ನಾಗರಾಜ್ ಸ್ಫೋಟಕ ಹೇಳಿಕೆ!

ಡಿಸೆಂಬರ್ 5ರಂದು ನಿಗದಿಯಾಗಿರುವ ಹೊಸಕೋಟೆ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಟಿಕೆಟ್‌ಗೆ ಭಾರಿ ಪೈಪೋಟಿ ನಡೆಯುತ್ತಿದೆ. ಮತ್ತೊಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಳಿಸಿದ್ದು, ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳಲು ತಂತ್ರ ರೂಪಿಸುತ್ತಿದೆ.

15 ಕ್ಷೇತ್ರದ ಉಪ ಚುನಾವಣೆ; ಮತ ಎಣಿಕೆ ದಿನಾಂಕ ನಿಗದಿ15 ಕ್ಷೇತ್ರದ ಉಪ ಚುನಾವಣೆ; ಮತ ಎಣಿಕೆ ದಿನಾಂಕ ನಿಗದಿ

ಪದ್ಮಾವತಿ ಸುರೇಶ್ ಅಭ್ಯರ್ಥಿ

ಪದ್ಮಾವತಿ ಸುರೇಶ್ ಅಭ್ಯರ್ಥಿ

ಪದ್ಮಾವತಿ ಸುರೇಶ್ ಹೊಸಕೋಟೆಯಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಪದ್ಮಾವತಿ ಅವರು ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಪತ್ನಿ. ಕಾಂಗ್ರೆಸ್ ನಾಯಕರು ಉಪ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ಕೃಷ್ಣ ಬೈರೇಗೌಡ ಉಸ್ತುವಾರಿ

ಕೃಷ್ಣ ಬೈರೇಗೌಡ ಉಸ್ತುವಾರಿ

ಮಾಜಿ ಸಚಿವ ಕೃಷ್ಣ ಬೈರೇಗೌಡ ಹೊಸಕೋಟೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ. ಜೊತೆಗೆ ಬೈರತಿ ಸುರೇಶ್ ಅವರು ಸಹ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಪಣ ತೊಟ್ಟಿದ್ದಾರೆ.

ಬಿಜೆಪಿ ಟಿಕೆಟ್ ಯಾರಿಗೆ?

ಬಿಜೆಪಿ ಟಿಕೆಟ್ ಯಾರಿಗೆ?

ಹೊಸಕೋಟೆ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಎಂಟಿಬಿ ನಾಗರಾಜ್, ಶರತ್ ಬಚ್ಚೇಗೌಡ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಅನರ್ಹ ಶಾಸಕರಿಗೆ ಟಿಕೆಟ್ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಟಿಕೆಟ್‌ಗಾಗಿ ಶರತ್ ಬಚ್ಚೇಗೌಡ ಪಟ್ಟು ಹಿಡಿದಿದ್ದಾರೆ.

ಚುನಾವಣಾ ಪ್ರಚಾರ ಆರಂಭ

ಚುನಾವಣಾ ಪ್ರಚಾರ ಆರಂಭ

ಹೊಸಕೋಟೆ ಕ್ಷೇತ್ರದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಕಾಂಗ್ರೆಸ್ ಉಪ ಚುನಾವಣೆ ಪ್ರಚಾರಕ್ಕೆ ಚಾಲನೆ ಕೊಟ್ಟಿದೆ. ಎಂಟಿಬಿ ನಾಗರಾಜ್‌ಗೆ ಕ್ಷೇತ್ರದಲ್ಲಿ ಸೋಲುಣಿಸಬೇಕು ಎಂದು ಕಾಂಗ್ರೆಸ್ ನಾಯಕರು ತಂತ್ರ ರೂಪಿಸುತ್ತಿದ್ದಾರೆ.

English summary
Congress finalized the Hebbal MLA Byrathi Suresh wife Padmavathi Suresh as candidate for Hoskote assembly seat by election. Election will be held on December 5, 2019. Who is BJP candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X