• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಾನು ನಿಮ್ಮ ಮನೆ ಮಗಳು, ನಿಮ್ಮ ಸೇವೆಗೆ ಒಂದು ಅವಕಾಶ ಕೊಡಿ

|

ಬೆಂಗಳೂರು, ಅ. 24: ಬದಲಾದ ಪರಿಸ್ಥಿತಿಯಲ್ಲಿ ರಾಜಕೀಯಕ್ಕೆ ಬಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ದಿ. ಡಿ.ಕೆ. ರವಿ ಪತ್ನಿ ಕುಸುಮಾ ಅವರು ಇದೀಗ ಭರ್ಜರಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಆರ್ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಳಿದಿರುವ ಅವರು ದಿನಕಳೆದಂತೆ ಪ್ರಚಾರ ಭಾಷಣದಲ್ಲಿ ಮತದಾರರ ಮನ ಸೆಳೆಯುತ್ತಿದ್ದಾರೆ.

ನಾನು ನಿಮ್ಮ ಮನೆಮಗಳು. ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಮಾಡಿ ಕೊಡಿ' ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ ಮತದಾರರಲ್ಲಿ ಇಂದು ಮನವಿ ಮಾಡಿದರು. ಆರ್ ಆರ್ ನಗರದ ವಿವಿಧ ವಾರ್ಡ್‌ಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರಚಾರ ನಡೆಸಿದ ಕುಸುಮಾ ಅವರು ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಮಾಡಿಕೊಡಿ. ನಿಮ್ಮ ಮಗಳಾಗಿ ನಾನು ಸದಾ ನಿಮ್ಮ ಕಷ್ಟ ಸುಖದಲ್ಲಿ ಭಾಗಿಯಾಗಿರುತ್ತೇನೆ. ನೀವು ಕೊಡುವ ಅವಕಾಶವನ್ನು ಬಳಸಿಕೊಂಡು ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ಕೆಲಸ ಮಾಡಿ ನಿಮ್ಮ ನಂಬಿಕೆ ಉಳಿಸಿಕೊಳ್ಳುತ್ತೇನೆ ಎಂದರು.

ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಹುದ್ದೆ ಚರ್ಚೆ: ಕೊನೆಗೂ ಮೌನ ಮುರಿದ ಡಿಕೆಶಿ!

   Corona ಓಡಿಸೋ ಸಮಯ ದೂರ ಇಲ್ಲಾ | Corona Vaccine | Oneindia Kannada

   ನೀವು ಕೊಡುವ ಅವಕಾಶ ಪ್ರೋತ್ಸಾಹವನ್ನು ಹಣ ಅಥವಾ ಅಧಿಕಾರದ ಆಸೆಗೆ ಮಾರಿಕೊಳ್ಳುವುದಿಲ್ಲ. ನವೆಂಬರ್ 3ರಂದು ನಡೆಯುವ ಚುನಾವಣೆಯಂದು ಕ್ರಮ ಸಂಖ್ಯೆ 1, ಹಸ್ತದ ಗುರುತಿಗೆ ನಿಮ್ಮ ಮತ ನೀಡಿ ಮನೆ ಮಗಳಿಗೆ ಆಶೀರ್ವಾದ ಮಾಡಿ ಎಂದು ಮನದಾರರಲ್ಲಿ ಮನವಿ ಮಾಡಿಕೊಂಡರು.

   English summary
   Congress candidate Kusuma has been campaigned with KPCC president DK Shivakumar in various wards of the RR Nagara assembly constituency, Know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X