• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕುಸುಮಾ ಬಯೊಡೇಟಾದಲ್ಲಿ ಪತಿ ದಿ. ಡಿ.ಕೆ. ರವಿ ಪ್ರಸ್ತಾಪವೇ ಇಲ್ಲ!

|

ಬೆಂಗಳೂರು, ಅ. 07: ಅಚ್ಚರಿ ಎಂಬಂತೆ ಆರ್‌.ಆರ್‌. ನಗರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಸುಮಾ ಹನುಮಂತಪ್ಪ ಅವರು ತಮ್ಮ ವ್ಯಕ್ತಿ ಚಿತ್ರಣವನ್ನು ಕೆಪಿಸಿಸಿ ವಾಟ್ಸಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡಂತೆಯೆ ಓದುಗರಿಗೆ ಅವರ ಬಯೊಡೆಟಾವನ್ನು ಒದಗಿಸುತ್ತಿದ್ದೇವೆ. ವಿಪರ್ಯಾಸ ಎಂದರೆ ಪತಿ, ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ದಿ. ಡಿ.ಕೆ. ರವಿ ಅವರಬ ಕುರಿತು ಯಾವುದೇ ಉಲ್ಲೇಖವನ್ನು ಕುಸುಮಾ ಹನುಮಂತಪ್ಪ ಅವರು ಮಾಡಿಲ್ಲ. ತಮ್ಮ ವಿದ್ಯಾಭ್ಯಾಸ, ಸಮಾಜ ಸೇವೆ ಸೇರಿದಂತೆ ತಮ್ಮ ವೈಯಕ್ತಿಕ ಮಾಹಿತಿಯನ್ನು ಅವರು ಕೊಟ್ಟಿದ್ದಾರೆ.

ಆದರೆ ಎಲ್ಲಿಯೂ ಕೂಡ ದಿ. ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಪತ್ನಿ ಎಂದು ಬರೆದುಕೊಂಡಿಲ್ಲ. ಇದು ಇಡೀ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಪತಿ ಡಿ.ಕೆ. ರವಿ ಅವರ ಹೆಸರನ್ನು ಪ್ರಸ್ತಾಪಿಸದಿರಬಹುದು ಎಂಬುದರ ಮುನ್ಸೂಚನೆ ಎನ್ನಲಾಗುತ್ತಿದೆ. ಹಾಗಾದ್ರೆ ಅವರ ಬಯೊಡೇಟಾದಲ್ಲಿ ಏನಿದೆ? ಬದಲಾವಣೆ ಮಾಡದೆ ಅವರೆ ಕೊಟ್ಟಿರುವಂತೆ ನಿಮ್ಮ ಮುಂದಿದೆ, ಓದಿ.

ಆರ್‌.ಆರ್‌. ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪ್ರಚಾರ ಶುರು!

ಕುಸುಮಾ ಅವರ ಪರಿಚಯ

ಕುಸುಮಾ ಅವರ ಪರಿಚಯ

ಸಮಾಜ ಸೇವೆ ಹಾಗೂ ರಾಜಕೀಯ ಒಂದೇ ನಾಣ್ಯದ ಎರಡು ಮುಖಗಳು. ಆ ನಾಣ್ಯದ ಪರ್ಯಾಯ ಪದವಾಗಲು ರಾಜಕೀಯ ರಂಗಕ್ಕೆ ಧುಮುಕಿರುವ ಕುಸುಮಾ ಎಚ್ ಅವರು ಇದೀಗ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ.

ಸುಶಿಕ್ಷಿತ ಯುವಸಮುದಾಯ ರಾಜಕೀಯಕ್ಕೆ ಬರಬೇಕು, ಅವರಿಂದ ಬದಲಾವಣೆ, ಸಮಾಜದ ಸುಧಾರಣೆ ಸಾಧ್ಯ ಎಂಬ ಮಾತು ಪದೇಪದೇ ಕೇಳಿಬರುತ್ತದೆ. ಕುಸುಮಾ ಅವರು ಈ ಮಾತಿಗೆ ಅನ್ವರ್ಥವಾಗಿದ್ದಾರೆ.

ಕುಸುಮಾ ಅವರ ಸಮಾಜ ಸೇವೆ

ಕುಸುಮಾ ಅವರ ಸಮಾಜ ಸೇವೆ

ಯುವ, ವಿದ್ಯಾವಂತ, ಶಿಕ್ಷಣ ಹಾಗೂ ಸಮಾಜ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಕುಸುಮಾ ಅವರು ಸಮಾಜ ಸುಧಾರಣೆಗೆ ಆಧುನಿಕ ಚಿಂತನೆ ಉಳ್ಳವರು. ರಾಜಕೀಯ ರಂಗದಲ್ಲಿ ಏನಾದರೂ ಸಾಧಿಸಬೇಕೆಂಬ ಹಂಬಲ ಹೊಂದಿರುವರು. ರಾಜಕೀಯ ಹಿನ್ನೆಲೆ ಇರುವ ಕುಟುಂಬದಿಂದ ಬಂದಿರುವುದು ಅವರಿಗೆ ಪ್ಲಸ್ ಪಾಯಿಂಟ್.

ಬೆಂಗಳೂರಿನಲ್ಲಿ 1989ರ ಜೂನ್ 6 ರಂದು ಜನಿಸಿದ ಕುಸುಮಾ ಅವರು ಜಾತ್ಯಾತೀತ ಜನತಾದಳ ಮುಖಂಡರಾದ ಹನುಮಂತರಾಯಪ್ಪ ಅವರ ಪುತ್ರಿ. 2010ರಲ್ಲಿ ಡಾ.ಅಂಬೇಡ್ಕರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದ ಕುಸುಮಾ ಅವರು, 2018ರಲ್ಲಿ ಯೂನಿವರ್ಸಿಟಿ ಆಫ್ ಮ್ಯಾಸಚೂಸೆಟ್ಸ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ (ಎಂ.ಎಸ್) ಪದವಿ ಪಡೆದಿದ್ದಾರೆ.

ಸ್ವಯಂ ಸೇವಾ ಸಂಸ್ಥೆಯಲ್ಲಿ ಕೆಲಸ

ಸ್ವಯಂ ಸೇವಾ ಸಂಸ್ಥೆಯಲ್ಲಿ ಕೆಲಸ

ಬೆಂಗಳೂರಿನ ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿರುವ ಕುಸುಮಾ ಅವರು 2016ರಿಂದ 'ನಿರಾಂತಕ' ಸ್ವಯಂ ಸೇವಾ ಸಂಸ್ಥೆಯಲ್ಲಿ ಪ್ರವರ್ತಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಮಾಜ ಸೇವೆಯ ಜತೆಗೆ ಓದು, ಬರವಣಿಗೆಯಂತಹ ಹವ್ಯಾಸಗಳು ಕುಸುಮಾ ಅವರದ್ದಾಗಿದೆ.

ನಿರಾತಂಕ ಸ್ವಯಂ ಸೇವಾ ಸಂಘದಲ್ಲಿ ನೊಂದ ವೃದ್ಧರಿಗೆ ಮತ್ತು ಮಹಿಳೆಯರ ಪರವಾಗಿ ಕಾರ್ಯ ನಿರ್ವಹಿಸಿರುವ ಕುಸುಮಾ ಅವರು ಈಗ ರಾಜಕೀಯ ಪ್ರವೇಶಿಸಿ ಜನ ಸೇವೆಗೆ ಮುಂದಾಗಿದ್ದಾರೆ. ಚುನಾವಣಾ ಕಣದಲ್ಲಿ ಆ ಸೇವೆಯ ಮತ್ತೊಂದು ಮೆಟ್ಟಿಲು ಏರಲು ಉತ್ಸುಕರಾಗಿದ್ದಾರೆ.

  Kusuma : ರಾಜಕೀಯ ವ್ಯಾಪಾರ ಅಲ್ಲ ,ಪ್ರತಿ ಸ್ಪರ್ಧಿ ಬಗ್ಗೆ NO TENSION | Oneindia Kannada
  ಸೋನಿಯಾ ಗಾಂಧಿ ಅವರ ಆಯ್ಕೆ

  ಸೋನಿಯಾ ಗಾಂಧಿ ಅವರ ಆಯ್ಕೆ

  ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಬೇಕೆಂಬ ಅವರ ಆಕಾಂಕ್ಷೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈಗ ನೀರೆರಿದ್ದಾರೆ. ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಸದಾ ಮುಂದು ಎಂಬುದಕ್ಕೆ ಇದೊಂದು ನಿದರ್ಶನ ಎಂದು ಕೆಪಿಸಿಸಿ ವಾಟ್ಸಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದಾರೆ.

  English summary
  RR Nagara Congress candidate Kusuma is not mentioned anywhere Her husband, Late IAS Officer DK Ravi's name in biodata.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X