ಪಿಕ್ ಪಾಕೇಟ್ ಕಾಂಗ್ರೆಸ್, ಕನ್ನಡಿಗರ ಕೈಗೆ 'ಚಿಪ್ಪು' ಪೋಸ್ಟರ್ ಬಿಡುಗಡೆ: ಬಿಜೆಪಿ ತಿರುಗೇಟು
ಬೆಂಗಳೂರು, ಏಪ್ರಿಲ್ 23: ಬಿಜೆಪಿಯಿಂದ ರಾಜ್ಯಕ್ಕೆ ಚೊಂಬು ಕೊಡುಗೆ ಎಂದು ಜಾಹೀರಾತು ನೀಡಿದ್ದ ಕಾಂಗ್ರೆಸ್‌ಗೆ ಬಿಜೆಪಿಯು ತಿರುಗೇಟು ನೀಡಿದೆ. ಕಾಂಗ್ರೆಸ್ ಸತ್ಯ ಸಂಗತಿ ಮರೆಮಾಚಿ ಜನರನ್ನು ವಂಚಿಸುತ್ತಿದೆ ಎಂದ ವಿಪಕ್ಷ ನಾಯಕ ಆರ್. ಅಶೋಕ್ ಅವರು "ಪಿಕ್ ಪಾಕೇಟ್ ಕಾಂಗ್ರೆಸ್" ಮತ್ತು "ಕನ್ನಡಿಗರ ಕೈಗೆ ಚಿಪ್ಪು" ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದರು.
ಮಂಗಳವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದೆ. ಇದನ್ನೇ ನ್ಯಾಯಾಲಯದಲ್ಲಿ ತಿಳಿಸಲಾಗಿದೆ. ಈ ವಿಷಯವನ್ನು ತಮಗೆ ಸಿಕ್ಕಿದ ಜಯ ಎಂದು ಸಿಎಂ ಸಿದ್ದರಾಮಯ್ಯ ಸುಳ್ಳು ಬಿಂಬಿಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆಗೆ ಅನುಮತಿಗಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ತಿಳಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ವೇಳೆಯೂ ಇದನ್ನು ತಿಳಿಸಲಾಗಿದೆ.
ಕಾಂಗ್ರೆಸ್ ಪಾತ್ರ ಏನು ಇಲ್ಲ: ಬಿಜೆಪಿ
ಆದರೆ ಕಾಂಗ್ರೆಸ್ ನಾಯಕರು ಜಯ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಹಣ ಬಿಡುಗಡೆಗಾಗಿಯೇ ಅನುಮತಿ ಕೇಳಿರುವಾಗ ಕಾಂಗ್ರೆಸ್ ಪಾತ್ರ ಇದರಲ್ಲಿ ಏನೂ ಇಲ್ಲ. ಜಯ ಸಿಗಲು ಕಾಂಗ್ರೆಸ್‌ನ ವಕೀಲರು ಏನೂ ವಾದ ಮಾಡಿಲ್ಲ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲಾ ಅವರು ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಾರೆ? ಇಲ್ಲಿ ಬಾಂಬ್ ಸ್ಫೋಟ ಆಗಿರುವಾಗ ನಿಮಗೆ ಮತ ಕೇಳಲು ಯಾವ ಅಧಿಕಾರ ಇದೆ? ಕೇಂದ್ರ ಸರ್ಕಾರ ಕ್ರಮ ವಹಿಸಿದ್ದರಿಂದಲೇ ಬರ ಪರಿಹಾರ ಹಲವಾರು ರಾಜ್ಯಗಳಿಗೆ ದೊರೆಯುತ್ತಿದೆ.
ಸಿಎಂ ತಾವು ನೀಡಿದ್ದಾಗಿ ಹೇಳಿಕೊಳ್ಳುತ್ತಿದ್ದಾರೆ
ಈಗಾಗಲೇ ಬರ ಪರಿಹಾರವನ್ನು ರಾಜ್ಯ ಸರ್ಕಾರದ ವತಿಯಿಂದ ನೀಡಬೇಕಿತ್ತು. ಎಸ್‌ಡಿಆರ್‌ಎಫ್‌ನಿಂದ 700 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ಆದರೆ ರಾಜ್ಯ ಸರ್ಕಾರವೇ ನೀಡಿದಂತೆ ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ ಎಂದರು.
2013-14 ರಲ್ಲಿ ಬರ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ 9 ತಿಂಗಳು ತೆಗೆದುಕೊಂಡಿದ್ದರು. ಕೇಂದ್ರದಲ್ಲೀಗ ಬಿಜೆಪಿ ಇದೆ ಎಂಬ ಕಾರಣಕ್ಕೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಮೋದಿ ಸರ್ಕಾರ 7,940 ಕೋಟಿ ರೂ. ಪರಿಹಾರ ನೀಡಿದ್ದರೆ, ಮನಮೋಹನ್ ಸಿಂಗ್ ಸರ್ಕಾರ 3,000 ಕೋಟಿ ರೂ. ನೀಡಿದೆ. ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ ಎಂದರು.
ಹುಬ್ಬಳ್ಳಿ ಕೊಲೆ ಕೇಸ್ ಸಿಬಿಐಗೆ ತನಿಖೆ ವಹಿಸಿ
ಕಾಂಗ್ರೆಸ್ ಸರ್ಕಾರ ಪಾಪರ್ ಆಗಿ ಬೀದಿಗೆ ಬಂದಿದ್ದು, ಮುಂದೆ ಸಂಬಳ ಕೊಡಲು ಹಣ ಇರುವುದಿಲ್ಲ. ಕಾಂಗ್ರೆಸ್ ವಿರುದ್ಧ ಹಿಂದೂಗಳು ಕೆರಳುತ್ತಿದ್ದಾರೆ. ಹಿಂದೂಗಳ ರಕ್ತವನ್ನು ಮತಾಂಧರು ಹರಿಸುತ್ತಿದ್ದು, ಇದನ್ನು ಮರೆಮಾಚಿಸಲು ಈ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ. ನೇಹಾ ಹತ್ಯೆಯ ತನಿಖೆಯನ್ನು ಸಿಬಿಐಗೆ ಕೊಡದೆ ಸಿಐಡಿಗೆ ನೀಡಿ ಮುಚ್ಚಿಹಾಕುವ ಕೆಲಸ ಮಾಡುತ್ತಿದ್ದಾರೆ. ಅವರ ತಂದೆಯೇ ಲವ್ ಜಿಹಾದ್ ಹೇಳಿದ್ದಾರೆ. ಈ ಪ್ರಕರಣವನ್ನು ಸೂಕ್ತವಾಗಿ ತನಿಖೆ ಮಾಡಲು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ನರೇಂದ್ರ ಮೋದಿ ಮಾಂಗಲ್ಯ ಕುರಿತು ನೀಡುವ ಹೇಳಿಕೆ ಸರಿಯಾಗಿಯೇ ಇದೆ. ಹಿಂದೆ ಮನಮೋಹನ್ ಸಿಂಗ್ ಅವರು ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ ಬಗ್ಗೆ ಹೇಳಿದ್ದರು ಎಂದು ತಿಳಿಸಿದರು.
ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ವಿಧಾನಸೌಧದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಅವಕಾಶ ನೀಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪ್ರತಿಭಟಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ವಿಧಾನಸೌಧದ ಒಳಗೆ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ವಿರೋಧಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ಪ್ರಯೋಜನವಾಗಿಲ್ಲ.
ಈಗ ವಿಧಾನಸೌಧದ ಮುಂಭಾಗ ಕಾಂಗ್ರೆಸ್ ನಾಯಕರು ಪ್ರತಿಭಟಿಸಲು ಅವಕಾಶ ಕೊಟ್ಟ ಮುಖ್ಯ ಕಾರ್ಯದರ್ಶಿಯ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ವಿಧಾನಸೌಧವನ್ನು ಈಗಾಗಲೇ ಮೂರು ನಾಲ್ಕು ಬಾರಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಕಿಡಿ ಕಾರಿದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications