• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಸಿದ ಕಾಂಗ್ರೆಸ್

|

ಬೆಂಗಳೂರು, ಸೆಪ್ಟೆಂಬರ್ 22: ಬಿಜೆಪಿ ತನ್ನ ಶಾಸಕರಿಗೆ ಹಣದ ಆಮಿಷವೊಡ್ಡಿ ಸರ್ಕಾರವನ್ನು ಬೀಳಿಸುವ ಕುತಂತ್ರ ನಡೆಸಿದೆ ಎಂದು ಆದಾಯ ತೆರಿಗೆ ಇಲಾಖೆಗೆ ದೂರು ನೀಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

ಶಾಸಕ ಶಿವಳ್ಳಿ ಅವರಿಗೆ ಬಿಜೆಪಿ ಶಾಸಕರಾದ ಅಶ್ವತ್ಥ್ ನಾರಾಯಣ್ ಮತ್ತು ಸಿ.ಪಿ. ಯೋಗೇಶ್ವರ್ ಅವರ ಮೂಲಕ ಐದು ಕೋಟಿ ರೂ. ಆಮಿಷವೊಡ್ಡಿರುವ ಆಡಿಯೋವನ್ನು ಆದಾಯ ತೆರಿಗೆ ಇಲಾಖೆಗೆ ನೀಡಿದ್ದೇನೆ. ಆದರೆ, ಇಲಾಖೆ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದ್ದಾರೆ.

ಯಡಿಯೂರಪ್ಪ ಮೇಲೆ ಎಚ್ಡಿಕೆ ಆರೋಪ ಭಾವನಾತ್ಮಕ ಎಂದ ದಿನೇಶ್

ಸರ್ಕಾರವನ್ನು ಉರುಳಿಸಿ ಮತ್ತೆ ಕುರ್ಚಿ ಹಿಡಿಯಲು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಹಣ ಹಾಗೂ ಸಚಿವ ಸ್ಥಾನದ ಆಮಿಷ ನೀಡುವ ಮೂಲಕ ಪ್ರಯತ್ನಿಸುತ್ತಿದೆ. ಇದರಿಂದ ಬಿಜೆಪಿಗೆ ಅಧಿಕಾರದ ದಾಹ ಎಷ್ಟಿದೆ ಎನ್ನುವುದು ಗೊತ್ತಾಗುತ್ತಿದೆ ಎಂದರು.

ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

ಶಾಸಕ ಎಂಟಿಬಿ ನಾಗರಾಜ್ ಸೇರಿದಂತೆ ಎಲ್ಲ ಶಾಸಕರೂ ನಮ್ಮ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಸೆ. 25ರಂದು ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿದೆ. ಅಂದು ಎಲ್ಲರೂ ಸಭೆಗೆ ಹಾಜರಾಗಲಿದ್ದಾರೆ. ಪಕ್ಷದ ಯಾರೂ ಕೂಡ ಬಿಜೆಪಿ ಜತೆಗೆ ಹೋಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಮನೆಗೆ ಕರೆದು ಡಿ.ಕೆ.ಶಿವಕುಮಾರ್‌ಗೆ ಬುದ್ಧಿವಾದ ಹೇಳಿದ ಸಿದ್ದರಾಮಯ್ಯ

ಬಿಜೆಪಿಗೆ ಅಧಿಕಾರದ ದಾಹ ಎಷ್ಟೊಂದು ಇದೆ ಎನ್ನುವುದು ಇದರಿಂದ ಗೊತ್ತಾಗುತ್ತಿದೆ. ಎಂಟಿಬಿ ನಾಗರಾಜ್ ಸೇರಿದಂತೆ ಎಲ್ಲ ಶಾಸಕರೂ ನಿರಂತರ ಸಂಪರ್ಕದಲ್ಲಿದ್ದಾರೆ. ಸೆ. 25ರ ಸಂಜೆ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಅಂದು ಎಲ್ಲರೂ ಹಾಜರಾಗಲಿದ್ದಾರೆ. ಯಾರೂ ಕೂಡ ಬಿಜೆಪಿ ಜೊತೆಗೆ ಹೋಗುವುದಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ತೀವ್ರ ಮಾತುಕತೆ ನಡೆದಿದೆ. ಆನಂದ್ ಸಿಂಗ್, ಜಮೀರ್ ಅಹ್ಮದ್ ಅವರು ಸಿದ್ದರಾಮಯ್ಯ ಅವರೊಂದಿಗೆ ಸತತ ಸಮಾಲೋಚನೆ ನಡೆಸಿದರು. ಸಂಜೆ ಅವರನ್ನು ದಿನೇಶ್ ಗುಂಡೂರಾವ್ ಅವರೂ ಸೇರಿಕೊಂಡರು.

English summary
KPCC President Dinesh Gundurao said that he has given a complaint to Income Tax Department against BJP for luring Party's MLAs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X