CD ಶಿವಕುಮಾರ್ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್: ದೇವೇಗೌಡರ ಸಾವಿಗೆ ಕಾಂಗ್ರೆಸ್ ಸಂಚು: JDS ಕಿಡಿ

ಬೆಂಗಳೂರು, ಮೇ 19: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್‌ಡ್ರೈವ್ ಹಂಚಿಕೆ ಕುರಿತು, ಜೆಡಿಎಸ್ ಪಕ್ಷ ರಾಜ್ಯ ಕಾಂಗ್ರೆಸ್ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದಿದೆ. ಕಾಂಗ್ರೆಸ್‌ನ ಅಸಲಿ ಮುಖ ಕಳಚಿ ಬಿದ್ದಿದೆ, ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ ಎಂದು ಜೆಡಿಎಸ್ ದೂರಿದಿದೆ.

ಪೆನ್ ಡ್ರೈವ್ ಪ್ರಕರಣ ಹಿಂದಿರುವ ಕೈವಾಡ ಕುರಿತು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ಆರೋಪ, ಪ್ರತ್ಯಾರೋಪ ಕೇಳಿ ಬಂದಿದ್ದವು. ಇದೀಗ ಈ ವಿಚಾರ ಕುರಿತು ಜೆಡಿಎಸ್ ಭಾನುವಾರ ಟ್ವೀಟ್ ಮಾಡಿದೆ. ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದೆ. ಪೆನ್‌ಡ್ರೈವ್ ಸಂಚನ್ನು CD ಶಿವಕುಮಾರ್ ಗ್ಯಾಂಗ್ ಮಾಡಿದೆ ಎಂದು ಆರೋಪಿಸಿರುವ ಜೆಡಿಎಸ್ ಸಂಚುಗಳ ಪಟ್ಟಿಯನ್ನು ಪ್ರಕಟಿಸಿದೆ.

congress-conspired-to-kill-hd-deve-gowda

ಹೊಂಚು ಹಾಕಿ ಸಂಚು ಮಾಡುವ ಕರ್ನಾಟಕ ಕಾಂಗ್ರೆಸ್ ಪಕ್ಷದ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಹೌದಲ್ಲವೇ ಕಾಂಗ್ರೆಸ್ಸಿಗರೇ? ಸತ್ಯ ನಿಮ್ಮ ಮುಂದೆಯೇ ಇದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. CDಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ.

ಬಿಜೆಪಿಯ ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್? ಎಂದು ಜೆಡಿಎಸ್ ಪ್ರಶ್ನಿಸಿದೆ. ಮಾತಿನುದ್ದಕ್ಕೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದೆ.

ಇಲ್ಲಿವೆ CDಶಿವಕುಮಾರ್ ಗ್ಯಾಂಗಿನ ಸಂಚುಗಳು ಪಟ್ಟಿ: ಜೆಡಿಎಸ್

* ಸಂಚು ನಂ.1: ಪ್ರಧಾನಿ ನರೇಂದ್ರಿ ಮೋದಿಯವರಿಗೆ ಅಪಖ್ಯಾತಿ ತರುವುದು.

* ಸಂಚು ನಂ.2: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ನಾಯಕತ್ವ ಹಾಳು ಮಾಡುವುದು.

* ಸಂಚು ನಂ.3: ಜನತಾ ದಳ (ಜಾತ್ಯಾತೀತ) ಮತ್ತು ಕರ್ನಾಟಕ ಬಿಜೆಪಿ ಜೊತೆಗಿನ ಮೈತ್ರಿ ಮುರಿದು ಬೀಳುವಂತೆ ಮಾಡುವುದು.

* ಸಂಚು ನಂ.4: ಮಾಜಿ ಪ್ರಧಾನಿ ಎಚ್‌.ಡಿ.ದೇವೆಗೌಡರ ಜೀವವನ್ನು ಬಲಿ ಪಡೆಯುವುದು.

ಈ ಎಲ್ಲ ಈ ಸಂಚುಗಳ ಜಾರಿಗೆ CDಶಿವಕುಮಾರ್ ಸ್ಲೀಪರ್ ಸೆಲ್ ನ ಟೂಲ್ ಕಿಟ್ ವ್ಯವಹಾರ ಇದೆ. ಅದರ ಪಟ್ಟಿ ಹೀಗೆ ಎಂದು ಜೆಡಿಎಸ್ ವ್ಯವಹಾರದ ಒಂದಷ್ಟು ಅಂಕಿ ಸಂಖ್ಯೆ ವಿವರಿಸಿದೆ.

congress-conspired-to-kill-hd-deve-gowda

ಪೆನ್ ಡ್ರೈವ್ ರೆಡಿ ಮಾಡಿದ್ದೇ CDಶಿವಕುಮಾರ್: ಜೆಡಿಎಸ್

* ಈ ಮಹಾಸಂಚು ಸಾಕಾರಕ್ಕೆ CDಶಿವಕುಮಾರ್ ಹೂಡಲಿದ್ದ ಬಂಡವಾಳ ಬರೋಬ್ಬರಿ ₹100 ಕೋಟಿ!

* ಎಚ್.ಡಿ.ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಹಂಚಿದ್ದಾರೆ ಎಂದು ಹೇಳಲು ವಕೀಲ ದೇವರಾಜೇಗೌಡರಿಗೆ ₹100 ಕೋಟಿ ಆಫರ್! ನೀಡಲಾಗಿದೆ.

* ಅಡ್ವಾನ್ಸ್ ಆಗಿ ₹5 ಕೋಟಿ ಹಣವನ್ನು ಬೌರಿಂಗ್ ಕ್ಲಬ್ಬಿನ ಕೊಠಡಿ ಸಂಖ್ಯೆ 110ಕ್ಕೆ ರವಾನಿಸಲಾಗಿದೆ

* ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ರೆಡಿ ಮಾಡಿದ್ದೇ CDಶಿವಕುಮಾರ್.

* ಪ್ರಧಾನಿ ಮೋದಿ, ಕುಮಾರಸ್ವಾಮಿ ಅವರುಗಳ ವಿರುದ್ಧ ಅಪಪ್ರಚಾರ ನಡೆಸಲು, ಇಡೀ ಸಂಚು ಅನುಷ್ಠಾನಕ್ಕೆ ನಾಲ್ವರು ಪ್ರಮುಖ ಸಚಿವರ ಸಮಿತಿ ರಚಿಸಿದ್ದೇ CDಶಿವಕುಮಾರ್.

* ದೇವೇಗೌಡರನ್ನು ಸಾವಿನ ದವಡೆಗೆ ನೂಕುವುದು ಈ ಸ್ಲೀಪರ್ ಸೆಲ್ ನ ಮಹಾನ್ ಟಾರ್ಗೆಟ್!!

ದೇವೇಗೌಡರ ಸಾವು ಬಯಸುವ ಕಾಂಗ್ರೆಸ್‌ಗೆ ಧಿಕ್ಕಾರ

ವಕೀಲರಾದ ದೇವೇರಾಜೇಗೌಡರೇ ಸ್ವತಃ ಬಿಚ್ಚಿಟ್ಟ ಈ ಸತ್ಯಗಳು ಹಾಗೂ ಆಡಿಯೋ ಟೇಪುಗಳು ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಮಾನವನ್ನು ಬೀದಿ ಬೀದಿಯಲ್ಲಿ ಹರಾಜು ಹಾಕಿವೆ. ಕಂಡವರ ಮನೆಯಲ್ಲಿ ಸಾವು ಬಯಸುವ ಕಾಂಗ್ರೆಸ್‌ಗೆ ಧಿಕ್ಕಾರ ಎಂದು ಜೆಡಿಎಸ್ ದೂರಿದೆ.

ವಕೀಲ ದೇವರಾಜೇಗೌಡ ಅವರು, ''ತಮಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಕೆಡಿಸಲು ಡಿಸಿಎಂ ಡಿಕೆ ಶಿವಕುಮಾರ್ ಅವರು 100ಕೋಟಿ ರೂಪಾಯಿ ಆಫರ್ ನೀಡಿದ್ದರು'' ಎಂದು ಆರೋಪಿಸಿದ್ದರು. ಈ ಹೇಳಿಕೆ ಕುರಿತು ಜೆಡಿಎಸ್ ಟ್ವೀಟ್ ಮೂಲಕ ಕಾಂಗ್ರೆಸ್‌ಗೆ, ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+