ದ್ವೇಷ ಭಾಷಣ, ದಬ್ಬಾಳಿಕೆ ನಡೆಯಲ್ಲ: ಕುಸುಮಾ ಹನುಮಂತರಾಯಪ್ಪ
ಬೆಂಗಳೂರು: ಚುನಾವಣೆ ಕಾವು ಹೆಚ್ಚಾಗಿದ್ದು, ರಾಜರಾಜೇಶ್ವರಿ ನಗರ ರಾಜ್ಯದ ಗಮನ ಸೆಳೆದಿದೆ. ಹೈವೋಲ್ಟೇಜ್ ಕ್ಷೇತ್ರ ರಾಜರಾಜೇಶ್ವರಿದಲ್ಲಿ ಸಚಿವ ಮುನಿರತ್ನ ಮತ್ತು ಕುಸುಮಾ ಮಧ್ಯೆ ಜಿದ್ದಾಜಿದ್ದಿನ ಹಣಾಹಣಿ ಏರ್ಪಟ್ಟಿದೆ. ಖಾಸಗಿ ಸಂದರ್ಶನದಲ್ಲಿ ಮಾತನಾಡಿರುವ ಕುಸುಮಾ ಹನುಮಂತರಾಯಪ್ಪ, ಪರೋಕ್ಷವಾಗಿ ಮುನಿರತ್ನಂ ನಾಯ್ಡು ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಈಗಾಗಲೇ ರಾಜರಾಜೇಶ್ವರಿ ನಗರದಲ್ಲಿ ಗೆಲುವಿಗಾಗಿ ಸಖತ್ ಫೈಟ್ ಶುರುವಾಗಿದೆ. ಇನ್ನೊಂದು ಕಡೆ ಕೆಲವಾರಗಳ ಹಿಂದೆ ಸಚಿವ ಮುನಿರತ್ನ ವಿರುದ್ಧ ಕನ್ನಡಿಗರು ಮತ್ತು ತಮಿಳರ ಮಧ್ಯೆ ಸಂಘರ್ಷಕ್ಕೆ ದಾರಿಯಾಗುವ ರೀತಿಯಲ್ಲಿ ಮಾತನಾಡಿದ ಆರೋಪದಡಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ದೂರು ನೀಡಿದ್ದರು. ಈಗ ಮತ್ತೊಮ್ಮೆ ಸಚಿವ ಮುನಿರತ್ನ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿರುವ ಕುಸುಮಾ ಹನುಮಂತರಾಯಪ್ಪ, ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ದಬ್ಬಾಳಿಕೆ ನಡೆಯಲ್ಲ ಎಂದಿದ್ದಾರೆ.

ಸತ್ಯವನ್ನ ಜನರಿಗೆ ತೋರಿಸುತ್ತಿದ್ದೇವೆ
ವರ್ಕೌಟ್ ಆಗಲಿ ಅಂತಾ ನಾವು ಇಲ್ಲಿ ಏನನ್ನೂ ಮಾಡುತ್ತಿಲ್ಲ, ಏನ್ ಸಮಸ್ಯೆ ಆಗಿದೆ ಮತ್ತು ಏನೇನು ಸಮಸ್ಯೆಗಳು ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ನಡೆಯುತ್ತಿದೆ ಅದು ಜನಗಳಿಗೆ ಗೊತ್ತಾಗಬೇಕು, ಯಾವ ರೀತಿ ದ್ವೇಷ ಭಾಷಣವನ್ನು ಮಾಡಿ. ಇನ್ನೊಬ್ಬರ ಮೇಲೆ ದಬ್ಬಾಳಿಕೆಯನ್ನ ಮಾಡಿ, ಇನ್ನೊಬ್ಬರ ಬಗ್ಗೆ ಕೆಟ್ಟದಾಗಿ ಕೀಳಾಗಿ ಮಾತನಾಡುವ ಪ್ರವೃತ್ತಿ ಬೆಳೆಸಿಕೊಂಡಿರುವ ಅಭ್ಯರ್ಥಿ ಈ ಕ್ಷೇತ್ರಕ್ಕೆ ಬೇಕಾ? ಎಂಬುದನ್ನ ಜನರೇ ತೀರ್ಮಾನ ಮಾಡಲಿದ್ದಾರೆ ಎಂದು ಸಚಿವ ಮುನಿರತ್ನಗೆ ತಿರುಗೇಟು ನೀಡಿದ್ದಾರೆ ಕುಸುಮಾ ಹನುಮಂತರಾಯಪ್ಪ.
ಬಿಜೆಪಿ ಅಭ್ಯರ್ಥಿಯಾಗಿ 2ನೇ ಚುನಾವಣೆ
2020ರ ಅಕ್ಟೋಬರ್‌ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆರ್.ಆರ್. ನಗರದಿಂದ ಕಣಕ್ಕಿಳಿದಿದ್ದರು ಸಚಿವ ಮುನಿರತ್ನ. ಬಳಿಕ ಈಗ ಮತ್ತೊಮ್ಮೆ ಬಿಜೆಪಿ ಟಿಕೆಟ್ ಪಡೆದು ಸ್ಪರ್ಧಿಸುತ್ತಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ಶಾಸಕರಾಗಿ ಇದೇ ಕ್ಷೇತ್ರದಿಂದ ಮುನಿರತ್ನ ಆಯ್ಕೆಯಾಗುತ್ತಿದ್ದರು. ಮುನಿರತ್ನ ಎದುರು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಕಣಕ್ಕೆ ಇಳಿದಿದ್ದಾರೆ. ಉಪಚುನಾವಣೆಯಲ್ಲೂ ಸಚಿವ ಮುನಿರತ್ನ ವಿರುದ್ಧ ಕುಸುಮಾ ಸ್ಪರ್ಧಿಸಿದ್ದರು. ಇದೀಗ ಮತ್ತೊಮ್ಮೆ ರಾಜರಾಜೇಶ್ವರಿ ನಗರ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ.

ಮನೆಮನೆಗೆ ತೆರಳಿ ಕುಸಮಾ ಮನವಿ
ಇನ್ನು ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಳಿಕ, ಕಳೆದ ಉಪಚುನಾವಣೆಯಿಂದಲೂ ಕ್ಷೇತ್ರದಲ್ಲಿ ಕುಸುಮಾ ಹನುಮಂತರಾಯಪ್ಪ ಗ್ರೌಂಡ್ ವರ್ಕ್ ಮಾಡುತ್ತಿದ್ದಾರೆ ಎಂಬುದು ಸ್ಥಳೀಯರ ಮಾತು. ಜೊತೆಗೆ ಮೆರವಣಿಗೆ, ದೊಡ್ಡದೊಡ್ಡ ಸಮಾವೇಶಕ್ಕೆ ಸೀಮಿತವಾಗಿ ಇರದೆ ಕ್ಷೇತ್ರದಲ್ಲಿರುವ ಮನೆಗಳಿಗೆ ನೇರವಾಗಿ ತೆರಳಿ ಕುಸುಮಾ ಮತಯಾಚನೆ ಮಾಡುತ್ತಿದ್ದಾರೆ. ಈ ಮೂಲಕ ಮತದಾರನಿಗೆ ಕಾಂಗ್ರೆಸ್ ಬೆಂಬಲಿಸಲು ಮನವಿ ಮಾಡುತ್ತಿದ್ದಾರೆ.
ಅತ್ತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದರೆ, ಇತ್ತ ಸಚಿವ ಮುನಿರತ್ನಂ ನಾಯ್ಡು ಕೂಡ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಸಾಕಷ್ಟು ಹಿಡಿತ ಇರುವ ಕಾರಣ, 2018ರ ಚುನಾವಣೆ ಮತ್ತು ಆ ನಂತರ ನಡೆದ ಉಪಚುನಾವಣೆಯಲ್ಲಿ ಗೆದ್ದಷ್ಟೇ ಅಂತರದಲ್ಲಿ ತಾವು ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದಾರೆ.

ಒಟ್ನಲ್ಲಿ ರಣಕಣವಾಗಿ ಏರ್ಪಟ್ಟಿರುವ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಬಿಗ್ ಫೈಟ್ ಶುರುವಾಗಿದೆ. ಮತಗಳ ಓಲೈಕೆಗಾಗಿ ಇಲ್ಲಿ ನಾನಾ ಅಸ್ತ್ರ ಪ್ರಯೋಗಿಸಲಾಗುತ್ತಿದೆ. ಇದೆಲ್ಲಾ ಎಷ್ಟರಮಟ್ಟಿಗೆ ವರ್ಕೌಟ್ ಆಗುತ್ತೆ ಅನ್ನೋದನ್ನ ತಿಳಿಯಲು ಇನ್ನು ಕೆಲವೇ ದಿನ ಕಾದು ನೋಡಬೇಕು. ಮೇ 10ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಕೂಡ ಪ್ರಕಟವಾಗಲಿದೆ. ಅಂದೇ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಗೆಲುವು ಯಾರಿಗೆ ಅನ್ನೋದು ಕೂಡ ಕನ್ಫರ್ಮ್ ಆಗಲಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications