ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪಗೆ ಗೋಮೂತ್ರ ಸಿಂಪಡಿಸಿದರೂ ಕಳಂಕ ಮುಕ್ತರಾಗುವುದಿಲ್ಲ: ಕಾಂಗ್ರೆಸ್

|
Google Oneindia Kannada News

ಬೆಂಗಳೂರು, ಏಪ್ರಿಲ್ 1: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಗೋಮೂತ್ರ ಸಿಂಪಡಿಸಿದರೂ ಕಳಂಕಮುಕ್ತರಾಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಟ್ವೀಟ್ ಮಾಡಿರುವ ಕಾಂಗ್ರೆಸ್, ದೇವನಹಳ್ಳಿ ಅಕ್ರಮ ಡಿನೋಟಿಫಿಕೇಷನ್ ಹಗರಣ, ದೇವರಬೀಸನಹಳ್ಳಿ ಅಕ್ರಮ ಡಿನೋಟಿಫಿಕೇಷನ್ ಹಗರಣ, ಆಪರೇಷನ್ ಕಮಲದಲ್ಲಿ ಹಣ ಆಮಿಷದ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಆರೋಪಗಳನ್ನು ಮಾಡಿರುವ ಕಾಂಗ್ರೆಸ್, ಕಳಂಕಿತರಾಗಿ ಅಧಿಕಾರ ನಡೆಸಲು ಸ್ವಲ್ಪವೂ ನಾಚಿಕೆ ಎನಿಸುತ್ತಿಲ್ಲವೇ? ಕಿಡಿಕಾರಿದೆ.

ಮುಖ್ಯಮಂತ್ರಿ ಯಡಿಯೂರಪ್ಪಗೆ ಮತ್ತೊಂದು ತನಿಖೆಯ ಕಂಟಕಮುಖ್ಯಮಂತ್ರಿ ಯಡಿಯೂರಪ್ಪಗೆ ಮತ್ತೊಂದು ತನಿಖೆಯ ಕಂಟಕ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕೊರಳಲ್ಲಿರುವ ಆರೋಪಗಳ ಸರಮಾಲೆಯನ್ನು ವಿವರಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಯಡಿಯೂರಪ್ಪ ಅವರೇ, ಗೋಮೂತ್ರ ಸಿಂಪಡಿಸಿದರೂ ನಿಮಗಂಟಿದ ಕಳಂಕ ಶುದ್ಧವಾಗುವುದಿಲ್ಲ ಎಂದು ಟೀಕಾ ಪ್ರಹಾರ ನಡೆಸಿದೆ.

ಯಡಿಯೂರಪ್ಪ ವಿರುದ್ಧ ಈಶ್ವರಪ್ಪ, ಯತ್ನಾಳ್ ಹಾಗೂ ವಿಜಯೇಂದ್ರ ಹೀಗೆ ಬಿಜೆಪಿ ಆಂತರಿಕ ಕಿತ್ತಾಟದಲ್ಲಿ ರಾಜ್ಯ ಬಡವಾಗುತ್ತಿದೆ. ಯತ್ನಾಳ್ ಅವರ ಆರೋಪಗಳನ್ನು ಸಚಿವ ಕೆ.ಎಸ್. ಈಶ್ವರಪ್ಪ ಅನುಮೋದಿಸುತ್ತಿದ್ದಾರೆ. ನಿಮಗೆ ಅಧಿಕಾರ ಸಿಕ್ಕಿದ್ದು, ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ ಎಂದು ಕಾಂಗ್ರೆಸ್ ಟ್ವಿಟರ್ ಖಾತೆಯಲ್ಲಿ ಯಡಿಯೂರಪ್ಪ ವಿರುದ್ಧ ತೀವ್ರ ದಾಳಿ ನಡೆಸಲಾಗಿದೆ.

ಆಪರೇಷನ್ ಕಮಲಕ್ಕಾಗಿ ಆಮಿಷವೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ತನಿಖೆಯ ಕಂಟಕ ಎದುರಾಗಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿರುವ ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ.

Congress Criticize Land Denotification Case Against Yediyurappa

ಎಫ್‌ಐಆರ್ ರದ್ದುಕೋರಿ ಯಡಿಯೂರಪ್ಪ ಈ ಹಿಂದೆ ಜಲಪ್ರತಿನಿಧಿಗಳ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಎಫ್‌ಐಆರ್‌ಗೆ ತಡೆ ನೀಡಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ, ಇದೀಗ ತಡೆಯಾಜ್ಞೆ ತೆರವುಗೊಳಿಸಿ ಯಡಿಯೂರಪ್ಪ ವಿರುದ್ಧ ತನಿಖೆಗೆ ಆದೇಶಿಸಿದೆ.

Recommended Video

ಇಂದಿನಿಂದ ಸಾರಿಗೆ ನೌಕರರ ಚಳುವಳಿ ಆರಂಭ, ಏ.7ಕ್ಕೆ ಬಸ್‌ ಸಂಚಾರ ಸ್ಥಗಿತ | Oneindia Kannada

ಜೆಡಿಎಸ್ ಬಿಟ್ಟು ಬಿಜೆಪಿಗೆ ಬರುವಂತೆ ಆಮಿಷವೊಡ್ಡಿ ಆಪರೇಷನ್ ಕಮಲ ನಡೆಸಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ಶಾಸಕ ನಾಗನಗೌಡ ಪುತ್ರ ಶರಣಗೌಡ ದೂರು ದಾಖಲಿಸಿದ್ದರು.

English summary
Congress Tweeted and Criticises the Land Denotification Case Against chief minister BS Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X