ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಕೊಡಗು ಎಸ್ಪಿಯನ್ನು ಅಮಾನತುಗೊಳಿಸಿ- ಕಾಂಗ್ರೆಸ್ ಆಗ್ರಹ

|
Google Oneindia Kannada News

ಬೆಂಗಳೂರು, ಆಗಸ್ಟ್‌ 19: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣ ಕುರಿತು ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ದಾಳಿ ಮಾಡಿದಾಗ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಾಳಿಕೋರರ ರಕ್ಷಣೆಗೆ ನಿಂತಿದ್ದರು ಎಂದಿರುವ ಕಾಂಗ್ರೆಸ್, ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಗೂಂಡಾಗಳಿಗೆ ರಕ್ಷಣೆ ನೀಡುವುದು ಸರಕಾರದ ನಿರ್ದೇಶನವಾಗಿತ್ತೇ? ಎಂದು ಬಸವರಾಜ ಬೊಮ್ಮಾಯಿ ಸರಕಾರದ ವಿರುದ್ಧ ಕಿಡಿಕಾರಿದೆ.

ಬೆಂಗಳೂರು: ಮಕ್ಕಳಲ್ಲಿ ಹೆಚ್ಚಾದ ಉಸಿರಾಟ ತೊಂದರೆ, ಇದಕ್ಕೆ ಕಾರಣವೇನು? ಬೆಂಗಳೂರು: ಮಕ್ಕಳಲ್ಲಿ ಹೆಚ್ಚಾದ ಉಸಿರಾಟ ತೊಂದರೆ, ಇದಕ್ಕೆ ಕಾರಣವೇನು?

"ಸಿದ್ದರಾಮಯ್ಯ ಅವರು ಸಾಗುವ ದಾರಿಯಲ್ಲಿ ಹಾಗೂ ಅವರ ಆಗಮಿಸುವ ಸ್ಥಳದಲ್ಲೇ ಬಿಜೆಪಿ ಗೂಂಡಾಗಳು ಜಾಮಾಯಿಸಿದ್ದರೂ, ಮುನ್ಸೂಚನೆ ಇದ್ದರೂ ಪೊಲೀಸರು ಅವರನ್ನು ವಶಕ್ಕೆ ಪಡೆಯದೆ ಅವರ ರಕ್ಷಣೆಗೇ ನಿಂತಿದ್ದರು. ಗೂಂಡಾಗಳಿಗೆ ರಕ್ಷಣೆ ನೀಡುವುದು ಸರ್ಕಾರದ ನಿರ್ದೇಶನವಾಗಿತ್ತೇ.. ? ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ SPಯನ್ನು ಕೂಡಲೇ ಅಮಾನತುಗೊಳಿಸಿ" ಎಂದು ಒತ್ತಾಯಿಸಿದೆ.

Congress demand Govt to suspend Kodagu SP over BJP workers protest over Siddaramaiah Visit

"ಸಿದ್ದರಾಮಯ್ಯ ಅವರ ಮೇಲೆ ದಾಳಿ ಮಾಡಿದ ಬಂಧಿಸಲಾಗಿದ್ದ ಗೂಂಡಾಗಳನ್ನು ರಾತ್ರೋರಾತ್ರಿ ಶಾಸಕ ಅಪ್ಪಚ್ಚು ರಂಜನ್ ಬಿಡಿಸಿಕೊಂಡು ಬಂದಿದ್ದಾರೆ. ಆರಗ ಜ್ಞಾನೇಂದ್ರ ಅವರೇ, ದಾಳಿಕೋರರ ಮೇಲೆ ಗಂಭೀರ ಪ್ರಕರಣ ದಾಖಲಿಸದಿರುವುದೇಕೆ..? ಇದು ಸರ್ಕಾರಿ ಪ್ರಾಯೋಜಿತ ಕೃತ್ಯವಲ್ಲವೇ..? ಇದು ವಿಪಕ್ಷ ನಾಯಕರ ಪ್ರಾಣ ಹಾನಿಯ ಪ್ರಯತ್ನ ಎಂದೇ ಭಾವಿಸಬೇಕಾಗುತ್ತದೆ" ಎಂದು ಗಂಭೀರ ಆರೋಪ ಮಾಡಿದೆ.

ಮುಂದುವರೆದು, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ರಕ್ಷಣೆ ಸರ್ಕಾರದ ಮುಖ್ಯ ಜವಾಬ್ದಾರಿಗಳಲ್ಲಿ ಒಂದು. ಅತಿವೃಷ್ಟಿ ಹಾನಿ ವೀಕ್ಷಣೆಗೆ ತೆರಳಿದ್ದ ವಿಪಕ್ಷ ನಾಯಕರಿಗೆ ರಕ್ಷಣೆ ಇಲ್ಲ ಎಂದಾದರೆ ಜನಸಾಮಾನ್ಯರ ರಕ್ಷಣೆ ಈ ಸರ್ಕಾರದಿಂದ ಸಾಧ್ಯವೇ? ಗೃಹಸಚಿವರು ಇನ್ನೂ ಹುದ್ದೆಯಲ್ಲಿರಲು ಅರ್ಹರೇ? ಮುಖ್ಯಮಂತ್ರಿಗಳು ಜನತೆಗೆ ಉತ್ತರಿಸಬೇಕು" ಎಂದು ಕಿಡಿಕಾರಿದೆ.

Congress demand Govt to suspend Kodagu SP over BJP workers protest over Siddaramaiah Visit

"ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಬಿಜೆಪಿ ಗೂಂಡಾಪಡೆ ವಿಪಕ್ಷ ನಾಯಕ ಸಿದ್ದರಾಮಯ್ಯ

ಅವರ ಮೇಲೆ ಎರಡೆರಡು ಬಾರಿ ಮೊಟ್ಟೆ ಎಸೆಯಲು ಪೊಲೀಸರು ಅವಕಾಶ ಕೊಡುತ್ತಾರೆ ಎಂದರೆ ಇದು ಸರ್ಕಾರಿ ಪ್ರಾಯೋಜಿತ ದಾಳಿಯಲ್ಲವೇ? ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ" ಎಂದು ಆಕ್ರೋಶ ಹೊರಹಾಕಿದೆ.

Recommended Video

ಹೊಸ ಆಫರ್ : 10 ಮಕ್ಕಳ ಹೆತ್ತರೆ 13 ಲಕ್ಷ ಕೊಡ್ತಾರೆ | OneIndia Kannada

English summary
Karnataka Congress demand to suspend Kodagu SP over BJP workers throws egg at Siddaramaiah for not taking action against them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X