ಕಾಂಗ್ರೆಸ್‌ ಅತೃಪ್ತ ಶಾಸಕರು ಸಿದ್ದರಾಮಯ್ಯ ಮನೆಯಲ್ಲಿ ಪ್ರತ್ಯಕ್ಷ

ಬೆಂಗಳೂರು, ಫೆಬ್ರವರಿ 15: ಕಾಂಗ್ರೆಸ್‌ನ ಅತೃಪ್ತ ಶಾಸಕರೆನಿಸಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಬೆಂಬಲಿತ ಶಾಸಕರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ರಮೇಶ್​ ಜಾರಕಿಹೊಳಿ ಕಾಂಗ್ರೆಸ್​ನ ಅತೃಪ್ತ ಶಾಸಕರ ನೇತೃತ್ವ ವಹಿಸಿಕೊಂಡಿದ್ದರು. ಅಲ್ಲದೆ, ಇತರ ಮೂವರು ಶಾಸಕರೊಂದಿಗೆ ಅವರು ಮುಂಬೈಗೆ ತೆರಳಿ ಬಿಜೆಪಿಯೊಂದಿಗೆ ಸಂಪರ್ಕ ಸಾಧಿಸಿಕೊಂಡಿದ್ದರು ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ ಬಳಿಕ ನಾವೆಲ್ಲರೂ ಒಟ್ಟಿಗೆ ಹೋಗಿಲ್ಲ, ಒಟ್ಟಿಗೆ ಇರಲಿಲ್ಲ ಎಂದು ಹೇಳಿಕೆ ನೀಡಿದ್ದರು.

ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ನಿವಾಸಕ್ಕೆ ಶುಕ್ರವಾರ ಬೆಳಗ್ಗೆ ತೆರಳಿದ ರಮೇಶ್​ ಜಾರಕಿಹೊಳಿ ಮತ್ತು ನಾಗೇಂದ್ರ ಕೆಲ ಕಾಲ ಸಮಾಲೋಚನೆ ನಡೆಸಿದರು. ಇವರ ಜತೆಗೆ ಸಚಿವ ಜಮೀರ್​ ಅಹಮದ್​ ಖಾನ್​ ಅವರೂ ಇದ್ದರು.

congress descendants meets siddaramaiah

ಆದರೆ, ನಾಲ್ವರೂ ಭಿನ್ನಮತೀಯರು ಈಗ ಮತ್ತೆ ಪಕ್ಷದ ತೆಕ್ಕೆಗೆ ಬಂದಿರುವ ಹಿನ್ನೆಲೆಯಲ್ಲಿ ಅನರ್ಹತೆಯ ಅರ್ಜಿ ಏನಾಗಲಿದೆ ಎಂಬ ಕುತೂಹಲವೂ ಮೂಡಿದೆ.

ಮೂರು ಬಾರಿ ವಿಪ್​ ಉಲ್ಲಂಘಿಸಿದ್ದ ಅತೃಪ್ತ ಶಾಸಕರು ಅಧಿವೇಶನಕ್ಕೂ ಹಾಜರಾಗದೇ ಕಾಂಗ್ರೆಸ್​ನ ಕೆಂಗಣ್ಣಿಗೂ ಗುರಿಯಾಗಿದ್ದರು. ಇದೇ ಹಿನ್ನೆಲೆಯಲ್ಲಿ ರಮೇಶ್​ ಜಾರಕಿಯೊಳಿ ಅವರೂ ಸೇರಿದಂತೆ ನಾಲ್ವರ ಅನರ್ಹತೆಗೆ ಕಾಂಗ್ರೆಸ್​ನ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್​ಗೆ ಅರ್ಜಿ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+