ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಮೇಯರ್ ಚುನಾವಣೆ; ಕಾಂಗ್ರೆಸ್‌ನಿಂದಲೂ ಅಭ್ಯರ್ಥಿ ಕಣಕ್ಕೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 24 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಅಕ್ಟೋಬರ್ 1ರಂದು ನೂತನ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬೆಂಗಳೂರಿನ ಕಾಂಗ್ರೆಸ್ ಶಾಸಕರ ಜೊತೆ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಬಗ್ಗೆ ಸಭೆ ನಡೆಸಿದರು. ರಾಮಲಿಂಗಾ ರೆಡ್ಡಿ, ಸೌಮ್ಯಾ ರೆಡ್ಡಿ, ಭೈರತಿ ಸುರೇಶ್ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯ ಬಳಿಕ ಮಾತನಾಡಿದ ಅವರು, 'ಚುನಾವಣೆಗೆ ಅಭ್ಯರ್ಥಿ ಹಾಕಬೇಕೆ? ಬೇಡವೇ? ಎಂದು ವಿವಿರವಾದ ಚರ್ಚೆ ನಡೆದಿದೆ. ಮೇಯರ್ ಚುನಾವಣೆಗೆ ನಾವೂ ಅಭ್ಯರ್ಥಿಯನ್ನು ಹಾಕುತ್ತೇವೆ" ಎಂದು ಸ್ಪಷ್ಟಪಡಿಸಿದರು.

ಬಿಬಿಎಂಪಿ ಮೇಯರ್ ಚುನಾವಣೆ ಮುಂದೂಡಿಕೆಬಿಬಿಎಂಪಿ ಮೇಯರ್ ಚುನಾವಣೆ ಮುಂದೂಡಿಕೆ

ಸೆಪ್ಟೆಂಬರ್ 28ರಂದು ಮೇಯರ್ ಮತ್ತು ಉಪ ಮೇಯರ್ ಅವಧಿ ಅಂತ್ಯಗೊಳ್ಳಲಿದೆ. ಸೆಪ್ಟೆಂಬರ್ 27ಕ್ಕೆ ಮೊದಲು ಚುನಾವಣೆ ನಿಗದಿಯಾಗಿತ್ತು. ಈಗ ಅದನ್ನು ಅಕ್ಟೋಬರ್ 1ಕ್ಕೆ ಮುಂದೂಡಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಅ.1ಕ್ಕೆ ಬಿಬಿಎಂಪಿ ಮೇಯರ್ ಚುನಾವಣೆ: ಗದ್ದುಗೆಗಾಗಿ ಬಿಜೆಪಿ ರಣತಂತ್ರಅ.1ಕ್ಕೆ ಬಿಬಿಎಂಪಿ ಮೇಯರ್ ಚುನಾವಣೆ: ಗದ್ದುಗೆಗಾಗಿ ಬಿಜೆಪಿ ರಣತಂತ್ರ

ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. ಈ ಬಾರಿಯ ಚುನಾವಣೆಯಲ್ಲಿ ಮೇಯರ್ ಪಟ್ಟವನ್ನು ಪಡೆಯಲು ಬಿಜೆಪಿ ಸಿದ್ಧತೆ ನಡೆಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನ ಬಿಜೆಪಿ ಶಾಸಕರ ಜೊತೆ ಈ ಕುರಿತು ಸಭೆಯನ್ನು ನಡೆಸಿದ್ದಾರೆ.

ಬೆಂಗಳೂರಲ್ಲಿ ಮತ್ತೆ ಆಪರೇಷನ್ ಕಮಲ; ನಾಲ್ವರ ಫೋನ್ ಆಫ್!ಬೆಂಗಳೂರಲ್ಲಿ ಮತ್ತೆ ಆಪರೇಷನ್ ಕಮಲ; ನಾಲ್ವರ ಫೋನ್ ಆಫ್!

ಗೆಲ್ಲುವ ವಿಶ್ವಾಸ ನಮಗಿದೆ

ಗೆಲ್ಲುವ ವಿಶ್ವಾಸ ನಮಗಿದೆ

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, "ಮೇಯರ್ ಮತ್ತು ಉಪ ಮೇಯರ್ ಚುನಾವಣೆಗೆ ನಾವು ಅಭ್ಯರ್ಥಿ ಹಾಕುತ್ತೇವೆ. ನಮಗೆ ಗೆಲ್ಲುವ ವಿಶ್ವಾಸವಿದೆ. ಬಿಜೆಪಿ ಚುನಾವಣೆ ಮುಂದೂಡಲು ಪ್ರಯತ್ನ ನಡೆಸಿದೆ" ಎಂದು ದೂರಿದರು.

ಶೀಘ್ರವೇ ತೀರ್ಮಾನಿಸುತ್ತೇವೆ

ಶೀಘ್ರವೇ ತೀರ್ಮಾನಿಸುತ್ತೇವೆ

"ಬಿಬಿಎಂಪಿ ಮೇಯರ್ ಚುನಾವಣೆಗೆ ಅಭ್ಯರ್ಥಿ ಯಾರು? ಎಂಬುದನ್ನು ಶೀಘ್ರದಲ್ಲೇ ತೀರ್ಮಾನಿಸುತ್ತೇವೆ. ನಾವು ಮೇಯರ್ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ" ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಸಮಿತಿ ರಚನೆ ಮಾಡಿದ ಯಡಿಯೂರಪ್ಪ

ಸಮಿತಿ ರಚನೆ ಮಾಡಿದ ಯಡಿಯೂರಪ್ಪ

ಬಿಜೆಪಿ ಈ ಬಾರಿ ಮೇಯರ್ ಪಟ್ಟವನ್ನು ಪಡೆಯಬೇಕು ಎಂದು ಪ್ರಯತ್ನ ನಡೆಸಿದೆ. ಯಡಿಯೂರಪ್ಪ ಬೆಂಗಳೂರಿನ ಬಿಜೆಪಿ ಶಾಸಕರ ಸಭೆ ನಡೆಸಿ ಈ ಕುರಿತು ಚರ್ಚೆ ನಡೆಸಿದ್ದಾರೆ. ಮೇಯರ್ ಅಭ್ಯರ್ಥಿ ಯಾರಾಗಬೇಕು? ಎಂದು ತೀರ್ಮಾನಿಸಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಮಿತಿಯೊಂದನ್ನು ರಚನೆ ಮಾಡಿದ್ದಾರೆ.

ಮ್ಯಾಜಿಕ್ ನಂಬರ್ 129

ಮ್ಯಾಜಿಕ್ ನಂಬರ್ 129

ಬಿಬಿಎಂಪಿ ಮೇಯರ್ ಆಗಲು ಬೇಕಾದ ಮ್ಯಾಜಿಕ್ ನಂಬರ್ 129. ಬಿಜೆಪಿ 125, ಕಾಂಗ್ರೆಸ್ 104, ಜೆಡಿಎಸ್ 21, 7 ಪಕ್ಷೇತರ ಸದಸ್ಯರಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಅಥವ ಬಿಜೆಪಿ ಗೆಲುವು ಸಾಧಿಸಲು ಪಕ್ಷೇತರ ಸದಸ್ಯರ ಬೆಂಬಲ ಅಗತ್ಯವಾಗಿದೆ.

English summary
KPCC president Dinesh Gundu Rao said that Congress will file the candidate for the BBMP mayor and deputy mayor election. Election will be held on October 1, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X