• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್‌ಗೆ ಟಾಂಗ್ ನೀಡಲು ಮುಂದಾದ ಕೈ ಮಾಜಿ ಶಾಸಕರು

|

ಬೆಂಗಳೂರು, ಡಿಸೆಂಬರ್ 18: ಸಚಿವ ಸ್ಥಾನ ಆಕಾಂಕ್ಷಿ ಶಾಸಕರನ್ನೇ ಸಂಭಾಳಿಸಲಾಗದೆ ರಾಜ್ಯ ಕಾಂಗ್ರೆಸ್‌ ಒದ್ದಾಡುತ್ತಿರುವಾಗ ಮಾಜಿ ಕಾಂಗ್ರೆಸ್‌ ಶಾಸಕರು ಸಹ ಕಾಂಗ್ರೆಸ್ ವಿರುದ್ಧ ಕೆಂಪು ಬಾವುಟ ಹಾರಿಸಲು ತಯಾರಾಗಿದ್ದಾರೆ.

ಜಾರಕಿಹೊಳಿ ಸಹೋದರರ ವಿರುದ್ಧ ಡಿ.ಕೆ.ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್‌

ಮಾಜಿ ಕಾಂಗ್ರೆಸ್‌ ಶಾಸಕರೆಲ್ಲಾ ಸೇರಿ ಬೆಂಗಳೂರಿನಲ್ಲಿ ಪ್ರತ್ಯೇಕ ಸಭೆ ನಡೆಸಲು ಇಚ್ಛಿಸಿದ್ದು, ಪಕ್ಷಕ್ಕೆ ಸ್ಪಷ್ಟ ಸಂದೇಶವೊಂದನ್ನು ರವಾನಿಸುವ ಸಿದ್ಧತೆಯಲ್ಲಿದ್ದಾರೆ.

ಡಿ.22ಕ್ಕೆ ಸಂಪುಟ ವಿಸ್ತರಣೆ ಅಲ್ಲ, ಪುನಾರಚನೆ: ಸಚಿವರಿಗೆ ಆತಂಕ

ತಮ್ಮತಮ್ಮ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರಿಗೆ ಜೆಡಿಎಸ್ ಶಾಸಕರು ಅಗತ್ಯ ಗೌರವ ನೀಡುತ್ತಿಲ್ಲ. ಮೈತ್ರಿ ಸರ್ಕಾರ ಇದ್ದರೂ ಸಹ ತಮ್ಮ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂಬುದು ಅವರ ಅಳಲಾಗಿದೆ.

ಕಾಂಗ್ರೆಸ್‌ನ ಮಾಜಿ ಶಾಸಕ ಚೆಲುವರಾಯ ಸ್ವಾಮಿ ನೇತೃತ್ವದಲ್ಲಿ ಈ ಸಭೆಯು ಬೆಂಗಳೂರಿನಲ್ಲೇ ನಡೆಯಲಿದೆ ಎನ್ನಲಾಗಿದೆ. ಸಭೆಯ ಬಳಿಕ ಮಾಜಿ ಶಾಸಕರು ತಮ್ಮ ಮುಂದಿನ ನಡೆಯನ್ನು ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

English summary
Congress former MLAs were gathering in Bengaluru under former MLA Cheluvaraya Swamy leadership. Expected that they will express upset about the party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X