• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಕಾಂಗ್ರೆಸ್ ನಡಿಗೆ: ನಗರದಲ್ಲಿ ಟ್ರಾಫಿಕ್ ಜಾಮ್

|
Google Oneindia Kannada News

ಬೆಂಗಳೂರು, ಆ. 15: ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಕಾಂಗ್ರೆಸ್ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ನಡಿಗೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು. ಇದರಿಂದ ಬೆಂಗಳೂರು ಹೃದಯ ಭಾಗದಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಬೆಂಗಳೂರಿನ ಮೆಜೆಸ್ಟಿಕ್ ಸುತ್ತ ಮುತ್ತ ಪ್ರದೇಶದಲ್ಲಿ ಗಂಟೆಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಬಿಜೆಪಿ ಸರ್ಕಾರದ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಸೆಡ್ಡು ಹೊಡೆಯಲು ರಾಜ್ಯದಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಆಯೋಜಿಸಿತ್ತು. ಬೆಂಗಳೂರಿನಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸ್ವಾತಂತ್ರ್ಯ ಕಡೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಸುಮಾರು ಒಂದು ಲಕ್ಷ ಕ್ಕೂ ಅಧಿಕ ಮಂದಿ ಜಮಾಯಿಸಿದ್ದರು.

ಮೆಜೆಸ್ಟಿಕ್‌ನ ರಾಯಣ್ಣ ವೃತ್ತದಿಂದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದವರೆಗೂ ಪಾದಯಾತ್ರೆ ಮಾಡಿದರು. ಸಾವಿರಾರು ಮಂದಿ ಪಾಲ್ಗೊಂಡಿದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಆದರೆ, ಪಾದಯಾತ್ರೆ ಹಿನ್ನೆಲೆಯಲ್ಲಿ ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್ ಸುತ್ತಮುತ್ತಲ ಪ್ರದೇಶ ಟ್ರಾಫಿಕ್ ಜಾಮ್ ಆಗಿತ್ತು. ವಾಹನ ಸವಾರರು ಪರದಾಡಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಾಹನ ಸಂಚಾರ ಕಡಿಮೆ ಇದ್ದರೂ ಸಹ ಗಂಟೆಗಟ್ಟಲೇ ಕಾರ್ಯಕರ್ತರು ರಸ್ತೆಯಲ್ಲಿ ನಡೆದುಕೊಂಡು ಹೋದ ಪರಿಣಾಮ ವಾಹನ ದಟ್ಟಣೆ ನಿರ್ಮಾಣವಾಗಿತ್ತು. ಸ್ವಾತಂತ್ರ್ಯ ನಡಿಗೆ ಸಂಚಾರ ದಟ್ಟಣೆ ಸಂಜೆ ವಾಹನ ಸಂಚಾರದ ಮೇಲೂ ಪರಿಣಾಮ ಬೀರಿತ್ತು.

ರಾಜ್ಯದ ನಾನಾ ಕಡೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು. ನಾಗಸಂದ್ರ, ಕೆಂಗೇರಿ ಮೆಟ್ರೋ ರೈಲಿನಲ್ಲಿ ಕಾರ್ಯಕರ್ತರು ಪ್ರಯಾಣಿಸಿದರು. ಮೆಟ್ರೋ ರೈಲು ನಿಲ್ದಾಣಗಳಲ್ಲಿ ಜನ ಸಂದಣಿ ಉಂಟಾಗಿತ್ತು. ರೈಲು ಹತ್ತಿಇಳಿಯಲು ಪ್ರಯಾಣಿಕರು ಹರಸಾಹಸ ಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪ್ರಯಾಣಿಕರನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಕೂಡ ಹರಸಾಹಸ ಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

Congress Freedom march: Bengaluru traffic Jam

ಸ್ವಾತಂತ್ರ್ಯ ನಡಿಗೆ ಉದ್ದೇಶ:

ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆದ ಹಿನ್ನೆಲೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಕರೆ ಕೊಟ್ಟಿತ್ತು. ದೇಶವ್ಯಾಪ್ತಿ ದೊಡ್ಡ ಸಂಭ್ರಮ ಉಂಟು ಮಾಡಿತ್ತು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಹ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆ ನಡೆಸಿ ಲಕ್ಷಾಂತರ ಜನರನ್ನು ಸೇರಿಸುವ ಮೂಲಕ ಗಮನ ಸೆಳೆದಿದೆ. ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಸಾರಥ್ಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

English summary
Traffic was jammed in the heart of Bengaluru as lakhs of people participated in the Congress Party's Freedom march. know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X