ಸಿದ್ದರಾಮಯ್ಯ ವಿರುದ್ಧ ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಿದ ರೆಡ್ಡಿ
ಬೆಂಗಳೂರು, ಏಪ್ರಿಲ್ 28: ಜನಾರ್ದನ ರೆಡ್ಡಿ ಅವರ ರಾಜಕೀಯದ ಎರಡನೇ ಇನ್ನಿಂಗ್ಸ್‌ಗೆ ಆರಂಭದಲ್ಲೇ ಹಲವು ವಿಘ್ನಗಳು ಎದುರಾಗಿವೆ. ಅಮಿತ್ ಶಾ ಅವರು ರೆಡ್ಡಿ ಅವರು ಪ್ರಚಾರದಿಂದ ದೂರ ಇರುವಂತೆ ಆದೇಶ ನೀಡಿದ ಬೆನ್ನಲ್ಲೇ ಈಗ ಕಾಂಗ್ರೆಸ್ ಪಕ್ಷ ಜನಾರ್ದನ ರೆಡ್ಡಿ ಮೇಲೆ ದೂರು ನೀಡಿದೆ.
ನಿನ್ನೆಯವರೆಗೂ ಆಪ್ತ ಗೆಳೆಯ ಶ್ರೀರಾಮುಲು ಪರ ಮೊಳಕಾಲ್ಮೂರಿನಲ್ಲಿ ಪ್ರಚಾರ ನಡೆಸುತ್ತಿದ್ದ ಜನಾರ್ದನ ರೆಡ್ಡಿ ಇತ್ತೀಚೆಗಷ್ಟೆ ಸಿದ್ದರಾಮಯ್ಯ ಅವರ ವಿರುದ್ಧ ಆಕ್ಷೇಪಣಕಾರಿ ಹೇಳಿಕೆಯೊಂದನ್ನು ನೀಡಿದ್ದರು.

'ಸಿದ್ದರಾವಣ ಸಂಹಾರಕ್ಕಾ ಶ್ರೀರಾಮುಲು ಬಾದಾಮಿಗೆ ಬಂದಿದ್ದಾರೆ' ಎಂದು ಹೇಳಿದ್ದ ಜನಾರ್ದನ ರೆಡ್ಡಿ ಅವರು ಈಗ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಜನಾರ್ದನ ರೆಡ್ಡಿ ಅವರ ಈ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನಿಡಿದ್ದು ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ. 'ಇದು ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾದ ನಡವಳಿಕೆಯಾಗಿದ್ದು ಕೂಡಲೇ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಜನಾರ್ದನ ರೆಡ್ಡಿ ಅವರ ಹೇಳಿಕೆಯ ಪತ್ರಿಕೆ ಕಟಿಂಗ್ಸ್‌ಗಳು ಮತ್ತು ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನ ಪ್ರತಿಯನ್ನು ಕರ್ನಾಟಕ ಕಾಂಗ್ರೆಸ್‌ನ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.












Click it and Unblock the Notifications