ಷರತ್ತು ಮೂಲಕ ಮೋಸ ಮಾಡುವ ಕಾಂಗ್ರೆಸ್ ಸರಕಾರ- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು ಜೂನ್ 7: ಕಾಂಗ್ರೆಸ್ ಸಚಿವ ಚಲುವರಾಯಸ್ವಾಮಿ ಅವರು ಕಾಂಗ್ರೆಸ್ ಭರವಸೆಗಳು ಚುನಾವಣಾ ಗಿಮಿಕ್ ಎಂದು ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಎಸ್‌ನಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನೀವು ಊದು ಗ್ಯಾರಂಟಿ ಕೊಟ್ಟಿದ್ದೀರಿ. ಅವನ್ನು ಈಡೇರಿಸಿ. ಎಲ್ಲರಿಗೂ ಉಚಿತ ಕೊಡಿ. ಷರತ್ತು ಬೇಡ ಎಂದು ಆಗ್ರಹಿಸಿದರು. ಷರತ್ತು ಮೂಲಕ ಮೋಸ ಮಾಡುತ್ತಿದ್ದೀರಲ್ಲವೇ ಎಮದು ಆಕ್ಷೇಪ ಸೂಚಿಸಿದರು.

Congress government cheating through clauses- Chalavadi Narayanaswamy

ಹಿಂದೆ ಪಡೆದ ಡೆಪಾಸಿಟ್ ಕುರಿತು ಸರ್ಕಾರ ಉತ್ತರಿಸಬೇಕು. ಅದರ ವಿವರ ಕೊಡಿ ಎಂದು ಒತ್ತಾಯಿಸಿದರು. ಫಿಕ್ಸೆಡ್ ಚಾರ್ಜ್ ಹೆಚ್ಚಳ ಆಕ್ಷೇಪಾರ್ಹ. ಇದು ವಂಚನೆಯ ಕೆಲಸ ಎಂದು ಟೀಕಿಸಿದರು. ಗ್ರಾರಂಟಿ ಜಾರಿ ಬಗ್ಗೆ ಶ್ಔಎತಪತ್ರ ಹೊರಡಿಸಿ. ದಲಿತರ ಅನುದಾನ ಬಳಕೆ ವಿವರ ಕೊಡಿ ಎಂದು ಕೇಳಿದರು.

ಗೋಹತ್ಯೆ ನಿಷೇಧ ತಿದ್ದುಪಡಿ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ಮಾಡಿರುವುದು ಹಾಗೂ ಗ್ಯಾರಂಟಿ ಘೋಷಣೆ ಪೂರ್ಣ ಪ್ರಮಾಣದ ಜಾರಿಯಾಗಿಲ್ಲ ಎಂದು ಆರೋಪಿಸಿ ಬಿಜೆಪಿ ಸೋಮವಾರ ಮತ್ತು ಮಂಗಳವಾರ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

ಮಂಗಳವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು. ರಾಜ್ಯ ಸರ್ಕಾರ ವಚನ ಭ್ರಷ್ಟ ಹಾಗೂ ಹಿಟ್ಲರ್ ಸರ್ಕಾರ ಆಗಿದೆ ಎಂದು ಬಿಜೆಪಿ ಆರೋಪ ಮಾಡಿದೆ. ಹೊಸ ಸರ್ಕಾರ, ಬಿಜೆಪಿ ಅವಧಿಯಲ್ಲಿ ಜಾರಿಯಲ್ಲಿದ್ದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮುಂದುವರಿಸಬೇಕು. ಎಲ್ಲರಿಗೂ ಉಚಿತವಾಗಿ 200 ಯೂನಿಟ್ ವಿದ್ಯುತ್ ಕೊಡಬೇಕು. ಮತ್ತು ಯಾವುದೇ ಕಾರಣಕ್ಕೂ ವಿದ್ಯುತ್ ದರ ಹೆಚ್ಚಳ ಮಾಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Congress government cheating through clauses- Chalavadi Narayanaswamy

ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಗ್ಯಾರಂಟಿಗಳ‌ ಯೂಟರ್ನ್ ಹೊಡೆಯುತ್ತಿದೆ ಸರ್ಕಾರ ಎಂದು‌ ಕಿಡಿಕಾರಿದರು. ಸಾವಿರ ಸುಳ್ಳು ಹೇಳಿ ಸರ್ಕಾರ ತಂದಿದ್ದಾರೆ. ಅಧಿಕಾರಕ್ಕೆ ಬಂದ ಬಳಿಕ ಇದೀಗ ಉತ್ತರ ಕೊಡಬೇಕಾಗಿದೆ. ಇನ್ನು ಮುಂದೆ ಗ್ಯಾರಂಟಿ ಅಂದರೆ ಸುಳ್ಳು ಎಂಬಂತಾಗಿದೆ ಎಂದು ಕಿಡಿಕಾರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+