• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

'ಕಾಂಗ್ರೆಸ್ ಯಾವತ್ತೂ ಎಸ್‌ಡಿಪಿಐನಂತ ಸಂಘಟನೆಗೆ ಬೆಂಬಲ ನೀಡಿಲ್ಲ'

|

ಬೆಂಗಳೂರು, ಜನವರಿ 18: ಕಾಂಗ್ರೆಸ್ ಯಾವತ್ತೂ ಎಸ್‌ಡಿಪಿಐ,ಪಿಎಸ್‌ಐ ನಂತಹ ಸಂಘಟನೆಗಳಿಗೆ ಬೆಂಬಲ ನೀಡಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಎಸ್‌ಡಿಪಿಐ ಕಾರ್ಯಕರ್ತರ ಮೇಲಿದ್ದ 1500ಕ್ಕೂ ಹೆಚ್ಚಿನ ಪ್ರಕರಣಗಳನ್ನು ವಾಪಸ್ ಪಡೆದಿದ್ದರು ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಗಳ ಪಟ್ಟಿಗೆ ಸೇರಿತು ಮತ್ತಿಬ್ಬರ ಹೆಸರು

ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಮಲಿಂಗಾರಡ್ಡಿ, ನಾವು ಯಾವತ್ತೂ ಎಸ್‌ಡಿಪಿಐ ನಂತಹ ಸಂಘಟನೆಗಳಿಗೆ ಬೆಂಬಲ ನೀಡಿಲ್ಲ. ಆ ಸಂಘಟನೆಗಳನ್ನು ನಿಷೇಧಿಸುವ ಕುರಿತು ಹಲವು ವರ್ಷಗಳಿಂದಲೂ ಚಿಂತನೆ ಇದೆ. ಗೃಹ ಇಲಾಖೆ ಪರಿಶೀಲಿಸುತ್ತಿದೆ. ಕಾಂಗ್ರೆಸ್ ಯಾವತ್ತೂ ಅಂತವರಿಗೆ ಬೆಂಬಲ ನೀಡಿಲ್ಲ ಎಂದು ಹೇಳಿದರು.

ಎಲ್ಲಾ ಪಕ್ಷದವರ ಮೇಲಿದ್ದ ಕೇಸ್‌ಗಳನ್ನು ವಾಪಸ್ ತೆಗೆದುಕೊಂಡಿದ್ದೇವೆ, ಕಾಂಗ್ರೆಸ್‌ಗೆ ಈ ಸಂಘಟನೆ ಜೊತೆ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಅವರ ಬಗ್ಗೆ ಮಾತನಾಡದಿದ್ದರೆ ಬಿಜೆಪಿಯವರಿಗೆ ನಿದ್ದೆಯೇ ಬರುವುದಿಲ್ಲ ಎಂದು ವ್ಯಂಗ್ಯವಾಡಿದರು.

English summary
Former minister Ramalingareddy said the Congress has never supported organizations like the SDPI and the PSI.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X