ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್: ಜನರ ಆರೋಗ್ಯ ತಪಾಸಣೆಗೆ ಕಾಂಗ್ರೆಸ್ ತಂಡ

|
Google Oneindia Kannada News

ಬೆಂಗಳೂರು, ಜು. 20: ಗ್ರಾಮೀಣ ಭಾಗದ ಜನರ ಆರೋಗ್ಯ ತಪಾಸಣೆಗೆ ಶೀಘ್ರದಲ್ಲೇ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Recommended Video

ದಕ್ಷಿಣ ಕನ್ನಡದಲ್ಲಿ ಮತ್ತೆ ಲಾಕ್ ಡೌನ್ !?

ಕೆಪಿಸಿಸಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ, ವಿಧಾನಸಭಾ ಕ್ಷೇತ್ರ, ಬ್ಲಾಕ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಉಸ್ತುವಾರಿಗೆ ನಿಯೋಜಿತರಾಗಿರುವ ಪ್ರತಿನಿಧಿಗಳೊಂದಿಗೆ ಜೊತೆಗೆ ಚರ್ಚೆ ನಡೆಸಿದ ಬಳಿಕ ಡಿ.ಕೆ ಶಿವಕುಮಾರ್ ಅವರು ಯೋಜನೆ ಬಗ್ಗೆ ವಿವರಿಸಿದರು.

ಪ್ರತಿ ಗ್ರಾಮ ಪಂಚಾಯಿತಿಗೆ ಕಾಂಗ್ರೆಸ್ ಪಕ್ಷದ ಮೂವರು ಪ್ರತಿನಿಧಿಗಳ ತಂಡ ಭೇಟಿ ನೀಡಲಿದೆ. ಈ ತಂಡದ ಸದಸ್ಯರು ಪಿಪಿಇ ಕಿಟ್ ಧರಿಸಲಿದ್ದು, ಇವರಿಗೆ ಉಷ್ಣ ಮಾಪಕ (ಥರ್ಮಲ್ ಸ್ಕ್ಯಾನರ್), ಪಲ್ಸ್ ಆಕ್ಸಿಮೀಟರ್, ಸ್ಯಾನಿಟೈಸರ್ ಕೊಡಲಾಗುವುದು. ಈ ತಂಡ ಗ್ರಾಮೀಣ ಭಾಗದ ಜನರ ದೇಹದ ಉಷ್ಣತೆ, ಅವರಲ್ಲಿ ಆಕ್ಸಿಜನ್ ಪ್ರಮಾಣ ಪರೀಕ್ಷಿಸುತ್ತಾರೆ.

Congress Health Care Plan Launched Soon To Check Rural Area People Health: Kpcc President Dk Shivakumar

ಒಂದು ವೇಳೆ ಉಷ್ಣತೆ ಅಥವಾ ಆಕ್ಸಿಜನ್ ಪ್ರಮಾಣದಲ್ಲಿ ವ್ಯತ್ಯಾಸವಿದ್ದರೆ, ಕಾಂಗ್ರೆಸ್ ವೈದ್ಯ ಘಟಕದ ವೈದ್ಯರ ಜತೆ ಚರ್ಚಿಸಿ ಅವರಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ. ತೀರಾ ಅಗತ್ಯವೆನಿಸಿದರೆ ಅವರಿಗೆ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಲು ಸಲಹೆ ನೀಡಲಾಗುವುದು ಎಂದು ವಿವರಿಸಿದರು.

English summary
KPCC president DK Shivakumar has said that the health care plan of the Congress will be launched soon to check the health of the rural area. Each village panchayat will have a team of three representatives of the Congress party. The team members will wear a PPE kit, which will be provided with a thermometer, a pulse oximeter, and a sanitizer. This team will check the body temperature of the rural people and the oxygen content.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X