• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಡಿಯೂರಪ್ಪ ರಾಜೀನಾಮೆಗೆ ಕಾಂಗ್ರೆಸ್ ವ್ಯಂಗ್ಯ

|
Google Oneindia Kannada News

ಬೆಂಗಳೂರು, ಜುಲೈ 26: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ ವಿಪಕ್ಷ ಕಾಂಗ್ರೆಸ್ ಟೀಕೆಗಳನ್ನು ಮುಂದುವರೆಸಿದೆ.

   B S Yediyurappa ಕಣ್ಣೀರಿನಲ್ಲಿ ಪದತ್ಯಾಗದ ಬದಲಿಗೆ ಪದಚ್ಯುತಿ ಕಾಣ್ತಿತ್ತು | Oneindia Kannada

   ಬಿ.ಎಸ್. ಯಡಿಯೂರಪ್ಪರ ರಾಜೀನಾಮೆ ಬೆನ್ನಲ್ಲೇ ಟ್ವೀಟ್ ಮಾಡಿದ ಕರ್ನಾಟಕ ಕಾಂಗ್ರೆಸ್, "ಇದು 'ಪದತ್ಯಾಗ' ಅಲ್ಲ, 'ಪದಚ್ಯುತಿ' ಎನ್ನುವುದನ್ನು ಯಡಿಯೂರಪ್ಪರ ಕಣ್ಣೀರು ಹೇಳುತ್ತಿದ್ದವು,'' ಎಂದಿದೆ.

   ಟ್ವಿಟ್ಟರ್‌ನಲ್ಲಿ ಟೀಕೆ ಮುಂದುವರೆಸಿದ ಕಾಂಗ್ರೆಸ್, "ಯಡಿಯೂರಪ್ಪನವರೇ ಹೇಳಿಕೊಳ್ಳುವಂತೆ ಸಮರ್ಥ ಆಡಳಿತವೇ ಆಗಿದ್ದಿದ್ದರೆ ಈ 'ಪದಚ್ಯುತಿ' ಮಾಡಿದ್ದೇಕೆ? ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎನ್ನುವುದನ್ನು ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡುವ ಮೂಲಕ ಒಪ್ಪಿಕೊಂಡಂತಾಗಿದೆ."

   "ಕರ್ನಾಟಕ ಬಿಜೆಪಿಗೆ ತಾಕತ್ತಿದ್ದರೆ, ನೈತಿಕತೆಯಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ, ರಾಜ್ಯವನ್ನು ಯಾರು ಆಳಬೇಕು ಎನ್ನುವುದನ್ನು ಜನರೇ ನಿರ್ಧರಿಸಲಿ," ಎಂದು ಹೇಳಿದೆ.

   "ಬಿಜೆಪಿಯ ದುರಾಡಳಿತದಿಂದ ಬೇಸತ್ತ ರಾಜ್ಯದ ಜನತೆ ಬಯಸುತ್ತಿರುವುದು 'ನಾಯಕತ್ವ ಬದಲಾವಣೆ' ಅಲ್ಲ 'ಸರ್ಕಾರದ ಬದಲಾವಣೆ'. ಸಿಎಂ ಸ್ಥಾನಕ್ಕೆ ಬಿಎಸ್‌ವೈ ರಾಜೀನಾಮೆ ನೀಡಿರುವುದು ವೈಫಲ್ಯಕ್ಕಾಗಿಯೇ? ಒತ್ತಡಕ್ಕಾಗಿಯೇ? ಅಸಹಕಾರಕ್ಕಾಗಿಯೇ? ಬೆದರಿಕೆಗಾಗಿಯೇ? ಬ್ಲಾಕ್‌ಮೇಲ್‌ಗಾಗಿಯೇ?," ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

   Bengaluru: Congress Irony On BS Yediyurappas Resignation

   "ಯಾವ ಕಾರಣಕ್ಕಾಗಿ ಕಣ್ಣೀರಿನೊಂದಿಗೆ ರಾಜೀನಾಮೆ ನೀಡಿದ್ದು ಎನ್ನುವುದನ್ನು ರಾಜ್ಯದ ಜನತೆಗೆ ತಿಳಿಸುವಿರಾ ಬಿ.ಎಸ್. ಯಡಿಯೂರಪ್ಪನವರೇ? ಕರ್ನಾಟಕ ಬಿಜೆಪಿಯವರು ಸಮರ್ಪಕ ಆಡಳಿತ ನಡೆಸಲು ನಿಮಗೆ ಯೋಗ್ಯತೆ ಒದಗಿಬರುವುದು ಯಾವಾಗ ಹೇಳುವಿರಾ?," ಎಂದು ಟ್ವೀಟ್‌ನಲ್ಲಿ ಕೇಳಿದೆ.

   ಬಿಜೆಪಿ ಹೈಕಮಾಂಡ್​ ದೆಹಲಿ ಮಟ್ಟದಲ್ಲಿ ಸಕ್ರಿಯಗೊಂಡಿದ್ದು, ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯುತ್ತಿದ್ದು, ಬುಧವಾರದಂದು ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಅಂದೇ ಕರ್ನಾಟಕಕ್ಕೆ ಹೊಸ ಸಿಎಂ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

   English summary
   Opposition Congress has continued to criticize on B.S. Yediyurappa's resignation.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X