Guarantee schemes ಮತ್ತೆ 5 ಗ್ಯಾರಂಟಿ ಯೋಜನೆ ಪರಿಚಯಿಸ್ತಿದೆ ಕಾಂಗ್ರೆಸ್, ಏನದು ನೋಡಿ
ಇತ್ತೀಚಿನ ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳಿಂದಲೇ ಫೇಮಸ್ ಆಗಿರುವ ಕಾಂಗ್ರೆಸ್ ಇದೀಗ ಮತ್ತೆ ಐದು ಪ್ರಮುಖ ಗ್ಯಾರಂಟಿಗಳನ್ನು ಹೊತ್ತು ಬಂದಿದೆ. ಕಾಂಗ್ರೆಸ್ ಪರಿಚಯಿಸಿರುವ ಗ್ಯಾರಂಟಿ ಯೋಜನೆಗಳು ದೇಶದಾದ್ಯಂತ ಸದ್ದು ಮಾಡಿದೆ.
ಅದೇ ರೀತಿ ಕೆಲವು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡದೆ ವಿವಾದಕ್ಕೂ ಕಾರಣವಾಗಿದೆ. ಅದೆಲ್ಲ ಏನೇ ಇದ್ದರೂ ಮತ್ತೆ ಗ್ಯಾರಂಟಿ ಯೋಜನೆಗಳ ಪ್ರಯೋಗವನ್ನು ಕಾಂಗ್ರೆಸ್ ಮುಂದುವರಿಸಿಕೊಂಡು ಹೋಗುತ್ತಿದೆ. ಕಾಂಗ್ರೆಸ್ ಇದೀಗ ಮತ್ತೆ ಐದು ಭಿನ್ನ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಲಾಗುವುದು ಎಂದು ಹೇಳಿದೆ.

ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೆ ಗ್ಯಾರಂಟಿ ಯೋಜನೆಗಳು ಪ್ರಮುಖ ಪಾತ್ರ ವಹಿಸಿದ್ದವು. ಇದೀಗ ಐದು ಪ್ರಮುಖ ಗ್ಯಾರಂಟಿಗಳನ್ನು ಜಮ್ಮು - ಕಾಶ್ಮೀರದಲ್ಲಿ ಜಾರಿ ಮಾಡುವುದಾಗಿ ಕಾಂಗ್ರೆಸ್ ಹೈಕಮಾಂಡ್ ಹೇಳಿದೆ.
ಜಮ್ಮು - ಕಾಶ್ಮೀರ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಈ ರಾಜ್ಯಗಳಲ್ಲೂ ಗ್ಯಾರಂಟಿ ಯೋಜನೆಯ ಪರಿಚಯಕ್ಕೆ ಕಾಂಗ್ರೆಸ್ ಮುಂದಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿ ಮೈತ್ರಿಕೂಟ ಚುನಾವಣೆ ಎದುರಿಸುತ್ತಿದೆ. ಇದೀಗ ಈ ಎರಡೂ ಪಕ್ಷಗಳು ಅಧಿಕಾರಕ್ಕೆ ಬಂದರೆ, ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸುವುದಾಗಿ ಘೋಷಿಸಲಾಗಿದೆ.
ಗ್ಯಾರಂಟಿಯಿಂದಲೇ ಅಧಿಕಾರಕ್ಕೆ ಬರುತ್ತಿದೆ ಕಾಂಗ್ರೆಸ್
ಇನ್ನು ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಮೊದಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿತ್ತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಜಾರಿ ಮಾಡಿದ್ದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ದೇಶದಾದ್ಯಂತ ಸದ್ದು ಮಾಡಿದೆ. ಈ ಯೋಜನೆಗಳನ್ನು ಬಿಜೆಪಿ ಬಿಟ್ಟಿ ಭಾಗ್ಯ ಎಂದು ಹೇಳಿದರೂ, ಅದು ಜನರ ಮೇಲೆ ಅಷ್ಟು ಪ್ರಭಾವ ಬೀರಲಿಲ್ಲ. ಮುಂದುವರಿದು ತೆಲಂಗಾಣ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿತ್ತು. ತೆಲಂಗಾಣ ವಿಧಾನಸಭಾ ಕ್ಷೇತ್ರದಲ್ಲೂ ಗ್ಯಾರಂಟಿ ಯೋಜನೆಗಳು ಭಾರೀ ಪ್ರಭಾವವನ್ನು ಬೀರಿತ್ತು. ತೆಲಂಗಾಣದಲ್ಲಿ ಮೊದಲ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಇದೀಗ ಈ ಪ್ರಯೋಗವನ್ನು ಕಾಂಗ್ರೆಸ್ ಪಕ್ಷವು ದಕ್ಷಿಣ ಭಾರತದಿಂದ ಉತ್ತರ ಭಾರತಕ್ಕೆ ತೆಗೆದುಕೊಂಡು ಹೋಗುತ್ತಿದ್ದು, ಉತ್ತರ ಭಾರತದಲ್ಲೂ ಐದು ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸುತ್ತಿದೆ.
ಕಾಂಗ್ರೆಸ್ ಜಮ್ಮು - ಕಾಶ್ಮೀರದಲ್ಲಿ ಘೋಷಿಸಿದ 5 ಗ್ಯಾರಂಟಿಗಳಿವು
ಕಾಂಗ್ರೆಸ್ ಪಕ್ಷವು ಜಮ್ಮು - ಕಾಶ್ಮೀರದಲ್ಲಿ ಹಲವು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದೆ. ಅದರಲ್ಲಿ ಪ್ರಮುಖವಾಗಿ ಹಾಗೂ ಆಕರ್ಷಣಿಯವಾಗಿ ಕಾಣಿಸಿರುವುದು ಕಾಶ್ಮೀರಿ ಪಂಡಿತರ ಪುನರ್ವಸತಿ. ಈ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್‌ನ ನಡುವೆ ಹಲವು ವರ್ಷಗಳಿಂದ ಚರ್ಚೆ, ವಾಕ್ಸಮರ ಹಾಗೂ ವಾದ - ವಿವಾದ ನಡೆದಿದೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್ ಚುನಾವಣೆ ಎದುರಿಸಲು ಮುಂದಾಗಿದೆ. ಇದರೊಂದಿಗೆ ಪ್ರತಿ ಕುಟುಂಬಕ್ಕೆ 25 ಲಕ್ಷ ರೂಪಾಯಿ ವರೆಗೆ ಆರೋಗ್ಯ ವಿಮೆ, ಮನೆಯ ಯಜಮಾನಿಗೆ 3,000 ಸಾವಿರ ರೂಪಾಯಿ, ಉದ್ಯಮಿ ಮಹಿಳೆಯರಿಗೆ 5 ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ ಹಾಗೂ ಪ್ರತಿ ವ್ಯಕ್ತಿಗೂ 11 ಕೆ.ಜಿ ಧಾನ್ಯ ವಿತರಣೆ ಸಿಗಲಿದೆ. ಇವು ಕಾಂಗ್ರೆಸ್ ಹೊಸದಾಗಿ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳು.












Click it and Unblock the Notifications