ಕಾಂಗ್ರೆಸ್ ದೀಪ ರಾಜ್ಯವನ್ನೇ ಸುಡುತ್ತಿದೆ: ಯಡಿಯೂರಪ್ಪ

ಬೆಂಗಳೂರು, ಫೆಬ್ರವರಿ 21: ವಿಧಾನಸಭೆ ಚುನಾವಣೆ ಇನ್ನು ಕೆಲವೇ ತಿಂಗಳು ಬಾಕಿ ಇರುವುದರಿಂದ ರಾಜ್ಯದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಪರಸ್ಪರ ಕೆಸರೆರಚಾಟ ಮುಂದುವರಿದಿದೆ.

ಪಿಎನ್ ಬಿ ಹಗರಣವನ್ನಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಬೆಳಿಗ್ಗೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಟ್ವೀಟ್ ಮಾಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಮೊಘಲ್ ದೊರೆ ತುಘಲಕ್ ನನ್ನು ನೆನಪಿಸಿಕೊಂಡ ಯಡಿಯೂರಪ್ಪ, ಕಾಂಗ್ರೆಸ್ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ದೂರಿದ್ದಾರೆ. 4 ದಿನಗಳಲ್ಲಿ 4 ಗೂಂಡಾಗಿರಿ ಪ್ರಕರಣಗಳು ನಡೆದಿವೆ. ದೀಪ ಆರುವ ಮೊದಲು ಜೋರಾಗು ಉರಿಯುತ್ತೆ ಎನ್ನುತ್ತಾರೆ. ಆದರೆ ಈ ಕಾಂಗ್ರೆಸ್ ದೀಪ ರಾಜ್ಯವನ್ನೇ ಸುಡುತ್ತಿದೆ ಎಂದು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಕಾರಣರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+